ಕೃಷಿ ಸಾಲ ಮನ್ನಾ: ನಾಳೆ ರೈತ ಸಂಘಟನೆಗಳ ಸಭೆ ಕರೆದ ಸಿಎಂ ಕುಮಾರಸ್ವಾಮಿ

ಡಿಸಿಎಂ ಡಾ. ಜಿ. ಪರಮೇಶ್ವರ್ ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೂ ಸಭೆಗೆ ಆಹ್ವಾನ ನೀಡಲಾಗಿದೆ.  

Last Updated : May 29, 2018, 07:25 PM IST
ಕೃಷಿ ಸಾಲ ಮನ್ನಾ: ನಾಳೆ ರೈತ ಸಂಘಟನೆಗಳ ಸಭೆ ಕರೆದ ಸಿಎಂ ಕುಮಾರಸ್ವಾಮಿ title=
File photo

ಬೆಂಗಳೂರು: ಕೃಷಿ ಸಾಲ ಮನ್ನಾ ಸೇರಿದಂತೆ ರೈತರ ಇತರ ಸಮಸ್ಯೆಗಳನ್ನು ಚರ್ಚಿಸಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಾಳೆ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆಗಳ ಸಭೆ ಕರೆದಿದ್ದಾರೆ.

ಸಭೆಯಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ಕೂಡ ಪಾಲ್ಗೊಳ್ಳಲಿದ್ದು, ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೂ ಸಭೆಗೆ ಆಹ್ವಾನ ನೀಡಲಾಗಿದೆ.

ರೈತ ಸಂಘಟನೆ ಹಾಗೂ ಪ್ರಗತಿಪರ ಕೃಷಿಕರೊಂದಿಗೆ ಸಭೆ ಏರ್ಪಡಿಸುವ ಬಗ್ಗೆ ಇಂದು 
ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ, ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಂ. ಲಕ್ಷ್ಮೀನಾರಾಯಣ ಅವರೊಂದಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆ ತಿಳಿಸಿದೆ.

Trending News