ಅಧಿಕಾರದುದ್ದಕ್ಕೂ ನಿದ್ದೆ ಮಾಡ್ತಾ ರಾಜ್ಯವನ್ನೇ ಸಾಲದ ಶೂಲಕ್ಕೇರಿಸಿದ ‘ಸಾಲರಾಮಯ್ಯ’: ಬಿಜೆಪಿ ಟೀಕೆ

2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕೇವಲ 22 ತಿಂಗಳಿನಲ್ಲಿ 39,161 ಕೋಟಿ ರೂ. ಸಾಲ ಮಾಡಿದ್ದರು ಅಂತಾ ಬಿಜೆಪಿ ಟ್ವೀಟ್ ಮಾಡಿದೆ.

Written by - Zee Kannada News Desk | Last Updated : Mar 8, 2022, 05:20 PM IST
  • ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಿದ್ದು ಸಾಲದ ಬಜೆಟ್ ಎಂದಿದ್ದ ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು
  • ಅಧಿಕಾರದುದ್ದಕ್ಕೂ ನಿದ್ದೆ ಮಾಡ್ತಾ ಸಿದ್ದರಾಮಯ್ಯ 1 ಲಕ್ಷ ಕೋಟಿಗೂ ಅಧಿಕ ಮೊತ್ತದ ಸಾಲ ಮಾಡಿದ್ದಾರೆ
  • ರಾಜ್ಯವನ್ನೇ ಸಾಲದ ಶೂಲಕ್ಕೇರಿಸಿದ್ದು ಹೇಗೆ ಮರೆಯಲು ಸಾಧ್ಯ ಸಾಲರಾಮಯ್ಯನವರೇ ಎಂದು ಬಿಜೆಪಿ ವ್ಯಂಗ್ಯ
ಅಧಿಕಾರದುದ್ದಕ್ಕೂ ನಿದ್ದೆ ಮಾಡ್ತಾ ರಾಜ್ಯವನ್ನೇ ಸಾಲದ ಶೂಲಕ್ಕೇರಿಸಿದ ‘ಸಾಲರಾಮಯ್ಯ’: ಬಿಜೆಪಿ ಟೀಕೆ title=
ಸಾಲರಾಮಯ್ಯ ಎಂದು ವ್ಯಂಗ್ಯವಾಡಿದ ಬಿಜೆಪಿ

ಬೆಂಗಳೂರು: ‘ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಮಂಡಿಸಿದ್ದು ಸಾಲದ ಬಜೆಟ್. ಇದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬ್ಬಾ ಸರ್ಕಾರ’ವೆಂದು ಟೀಕಿಸಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು ನೀಡಿದೆ. #ಸಾಲರಾಮಯ್ಯ ಹ್ಯಾಶ್ ಟ್ಯಾಗ್ ಬಳಸಿ ಬಿಜೆಪಿ ಮಂಗಳವಾರ ಸರಣಿ ಟ್ವೀಟ್ ಮಾಡಿದೆ.

‘ಕೋವಿಡ್‌ ಸಂಕಷ್ಟದಿಂದ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಆರ್ಥಿಕ ಪರಿಸ್ಥಿತಿಯ ನಡುವೆಯೂ ರಾಜ್ಯ ಬಿಜೆಪಿ ಸರ್ಕಾರ(BJP Government) ಉತ್ತಮ ಬಜೆಟ್‌ ಮಂಡಿಸಿದೆ. ಆದರೂ ಈ ಬಾರಿಯ ಆಯವ್ಯಯವನ್ನು ಸಾಲದ ಬಜೆಟ್‌ ಎಂದು ಸಿದ್ದರಾಮಯ್ಯ ವ್ಯಾಖ್ಯಾನಿಸಿದ್ದಾರೆ. ಸಿದ್ದರಾಮಯ್ಯನವರೇ ನೀವು ಮಾಡಿದ ಸಾಲ ಮರೆತು ಹೋಯಿತೇ?  ನಾವು ನೆನಪಿಸುತ್ತಿದ್ದೇವೆ!’ ಅಂತಾ ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ: ಪಕ್ಷದ ಆಂತರಿಕ ವಿಚಾರದ ಪ್ರಶ್ನೆ ಬಂದಾಗ ಸಿದ್ದರಾಮಯ್ಯ ಮೌನಕ್ಕೆ ಶರಣಾಗುವುದೇಕೆ?: ಬಿಜೆಪಿ

‘ಸಿದ್ದರಾಮಯ್ಯ(Siddaramaiah)ನವರೇ ನೀವು ಅಧಿಕಾರದುದ್ದಕ್ಕೂ ನಿದ್ದೆ ಮಾಡುತ್ತಾ 1 ಲಕ್ಷ ಕೋಟಿಗೂ ಅಧಿಕ ಮೊತ್ತದ ಸಾಲ ಮಾಡಿ ರಾಜ್ಯವನ್ನೇ ಸಾಲದ ಶೂಲಕ್ಕೇರಿಸಿದ್ದು ಹೇಗೆ ಮರೆಯಲು ಸಾಧ್ಯ? ಸ್ವಾತಂತ್ರ್ಯ ನಂತರದ ಎಲ್ಲಾ ಸರ್ಕಾರಗಳು ಮಾಡದಷ್ಟು ಸಾಲ ಮಾಡಿದ್ದ ನೀವು ಈಗ ಯಾವ ನೈತಿಕತೆ ಇಟ್ಟುಕೊಂಡು ಆಯವ್ಯಯವನ್ನು ಟೀಕಿಸುತ್ತಿದ್ದೀರಿ?’ ಅಂತಾ ಪ್ರಶ್ನಿಸಿದೆ.

‘ವಿಪಕ್ಷ ನಾಯಕ ಸಿದ್ದರಾಮಯ್ಯ(Opposition Leader Siddaramaiah)ವರೇ ನೀವು ಮಾಡಿದ ಸಾಲದ ಬಗ್ಗೆ ಜಾಣ ಮರೆವು ಏಕೆ? 2013ರಲ್ಲಿ 20 ಸಾವಿರ ಕೋಟಿ, 2014ರಲ್ಲಿ 21 ಸಾವಿರ ಕೋಟಿ, 2015ರಲ್ಲಿ  21 ಸಾವಿರ ಕೋಟಿ, 2016ರಲ್ಲಿ 28 ಸಾವಿರ ಕೋಟಿ ಮತ್ತು 2017ರಲ್ಲಿ 35 ಸಾವಿರ ಕೋಟಿ ರೂ. ಸಾಲ ಮಾಡಲಾಗಿದೆ. ಇದು ನಿಮಗೆ ಮರೆತು ಹೋಗಿರಬಹುದು, ರಾಜ್ಯದ ಜನತೆ ಮರೆತಿಲ್ಲ’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: PUC Exam time table: ದ್ವಿತೀಯ ಪಿ.ಯು ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

‘2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಕೇವಲ 22 ತಿಂಗಳಿನಲ್ಲಿ 39,161 ಕೋಟಿ ರೂ. ಸಾಲ(Karnataka Debt Burden) ಮಾಡಿದ್ದರು. ಇದು ಈ ಹಿಂದಿನ ಮುಖ್ಯಮಂತ್ರಿಗಳ ಅಧಿಕಾರಾವಧಿಗೆ ಹೋಲಿಸಿದರೆ ಸಿದ್ದರಾಮಯ್ಯ ಅವರೇ ಸಾಲ ಮಾಡುವುದರಲ್ಲಿ ಮುಂಚೂಣಿಯಲ್ಲಿದ್ದರು’ ಅಂತಾ ಬಿಜೆಪಿ ಟೀಕಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News