ಹಾವೇರಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಸಮರ(Russia Ukraine War)ದ ಮಧ್ಯೆ ಯುದ್ಧಭೂಮಿಯಲ್ಲಿ ಸಾವನ್ನಪ್ಪಿದ ಹಾವೇರಿ ಜಿಲ್ಲೆಯ ನವೀನ್ ನಿವಾಸಕ್ಕೆ ಇಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಭೇಟಿ ನೀಡಿದರು. ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯನವರು ನವೀನ್ ಪೋಷಕರಿಗೆ ಸಾಂತ್ವನ ಹೇಳಿದರು.
ಉಕ್ರೇನ್ ನಲ್ಲಿ ಮೆಡಿಕಲ್ ಓದಲು ಹೋಗಿದ್ದ ನವೀನ್(Naveen Ganagoudar) ಸಾವನ್ನಪ್ಪಿರುವುದು ದುಃಖದ ಸಂಗತಿ. ನವೀನ್ ಬಗ್ಗೆ ಆತನ ತಂದೆ-ತಾಯಿ ನವೀನ್ ದೊಡ್ಡ ಆಸೆ ಇಟ್ಟುಕೊಂಡಿದ್ದರು. ದುರಾದೃಷ್ಟವಶಾತ್ ನವೀನ್ ಓದು ಮುಗಿಸಲು ಆಗಲಿಲ್ಲ. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಶೆಲ್ ದಾಳಿಗೆ ಮೃತಪಟ್ಟಿದ್ದಾನೆ. ಪ್ರತಿಭಾವಂತ ವಿದ್ಯಾರ್ಥಿ ಹೀಗೆ ಸಾವನ್ನಪ್ಪಿರುವುದು ನನಗೂ ವೈಯಕ್ತಿಕವಾಗಿ ನೋವು ತರಿಸಿದೆ ಅಂತಾ ಹೇಳಿದ್ದಾರೆ.
ಇದನ್ನೂ ಓದಿ: Russia-Ukraine War ನಿಂದ ಭಾರತ ಕಲಿತ ಪಾಠ ಏನು? ಇಲ್ಲಿದೆ ಸೇನಾ ಮುಖ್ಯಸ್ಥರ ಉತ್ತರ
ವಿಧಾನಸಭೆ ಮಾಜಿ ಸ್ಪೀಕರ್ ಕೋಳಿವಾಡ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಜಯಮಾಲಾ, ಬ್ಯಾಡಗಿ ಶಿವಣ್ಣ, ಮುಖಂಡರಾದ ಬನ್ನಿಕೋಡ್, ಪ್ರಕಾಶ ಕೋಳಿವಾಡ, ಸೋಮಣ್ಣ ಬೇವಿನಮರದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಹಿರೇಮಠ ಹಾಜರಿದ್ದರು.
2/2#Ukraine️ pic.twitter.com/mUlPT6nBWk— Siddaramaiah (@siddaramaiah) March 9, 2022
ಮಾರ್ಚ್ 1ರಂದು ನವೀನ್(Naveen Ganagoudar) ಮೃತಪಟ್ಟಿದ್ದು, ಆತನ ಮೃತದೇಹ ಇನ್ನೂ ಅಲ್ಲಿಯೇ ಇದೆ. ಇನ್ನೂ ಬಾಳಿ ಬದುಕಬೇಕಾಗಿದ್ದ ಯುವಕ ನವೀನ್ ಹೀಗೆ ಸಾವನ್ನಪ್ಪಿರುವುದು ಬೇಸರ ತರಿಸಿದೆ. ಸಮಾಜದಲ್ಲಿ ಆತನ ಮೇಲೆ ಹಲವು ನಿರೀಕ್ಷೆಗಳಿದ್ದವು. ಆತನ ಮೃತದೇಹವನ್ನು ತಾಯ್ನಾಡಿಗೆ ಕರೆತರುವ ಪ್ರಯತ್ನ ನಡೆಯುತ್ತಿದೆ. ಭಾರತ ಸರ್ಕಾರ ಆದಷ್ಟು ಬೇಗ ನವೀನ್ ಮೃತದೇಹ(Airlifting Naveen’s Body)ತರುವ ಪ್ರಯತ್ನ ಮಾಡಬೇಕು. ಸಂಬಂಧಿಸಿದವರೊಂದಿಗೆ ಈ ಬಗ್ಗೆ ನಾನು ಮಾತನಾಡುತ್ತೇನೆ ಎಂದು ಹೇಳಿದರು.
ನವೀನ್ ಮೃತದೇವಹವನ್ನು ತರಿಸಲು ಪ್ರಧಾನಿ ಮೋದಿ(PM Modi)ಯವರಿಗೆ ಪತ್ರ ಬರೆಯುವೆ. ಈಗಾಗಲೇ ನವೀನ್ ಪಾರ್ಥಿವ ಶರೀರ ತರಲು ಕೆ.ಬಿ.ಕೋಳಿವಾಡರ ಪುತ್ರ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಅನುಮತಿ ಕೊಟ್ಟರೆ ತಮ್ಮ ವಿಮಾನದಲ್ಲಿಯೇ ಮೃತದೇಹ ತರುವುದಾಗಿ ಪತ್ರ ಬರೆದಿದ್ದ ಅವರಿಗೆ ಕೇಂದ್ರ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಚಿಕ್ಕವಯಸ್ಸಿನಲ್ಲಿ ಸಾವನ್ನಪ್ಪಿದ ನವೀನ್ ಆತ್ಮಕ್ಕೆ ಶಾಂತಿ ಸಿಗಲಿ. ಆದಷ್ಟು ಬೇಗ ಆತನ ಮೃತದೇಹ ತರವ ಕೆಲಸವಾಗಬೇಕು ಎಂದು ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.
ಇದನ್ನೂ ಓದಿ: ಮೋದಿಗೆ ಧನ್ಯವಾದ ಹೇಳಿದ ಉಕ್ರೇನ್ ನಲ್ಲಿ ಸಿಲುಕಿಹಾಕಿಕೊಂಡ ಪಾಕಿಸ್ತಾನದ ಯುವತಿ..! ಕಾರಣ ಇಲ್ಲಿದೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.