ಬೆಂಗಳೂರು: ಹಿಜಾಬ್ ಬಗ್ಗೆ ಹೈಕೋರ್ಟ್ ತೀರ್ಪು (Karnataka HC Verdict on Hijab) ಬಂದಿದೆ. ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಬಗ್ಗೆ ಚರ್ಚೆ ಮಾಡುತ್ತೇವೆ. ಈ ಬಗ್ಗೆ ಸಮಾಜದ ಮುಖಂಡರು ತೀರ್ಮಾನ ತೆಗೆದುಕೊಳ್ತಾರೆ ಎಂದು ಎಂಎಲ್ ಸಿ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.
ಇದನ್ನೂ ಓದಿ: ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಭಾಗವಲ್ಲ : ಹೈಕೋರ್ಟ್
ಇದನ್ನ ಧರ್ಮದ ದೃಷ್ಟಿಯಿಂದ ನೋಡಬಾರದು. ಸಂವಿಧಾನದ ದೃಷ್ಟಿಯಿಂದ ನೋಡಬೇಕು. ಹೆಣ್ಣುಮಗಳು ತಿಲಕ, ವಿಭೂತಿ ಇಡುವುದು ಧರ್ಮದಲ್ಲಿಲ್ಲ. ಆದರೆ ಅದು ನನಗೆ ಇಡಬೇಕೆಂಬ ಇಷ್ಟವಿದೆ. ನೀವು ಬೇಡ ಅನ್ನೋಕೆ ಸಾಧ್ಯವೇ? ಎಂದು ಎಂಎಲ್ ಸಿ ಸಿ.ಎಂ.ಇಬ್ರಾಹಿಂ (CM Ibrahim) ಪ್ರಶ್ನಿಸಿದ್ದಾರೆ.
ಇದರ ಬಗ್ಗೆ ಸುಪ್ರೀಂನಲ್ಲಿ ಚಾಲೆಂಜ್ ಆಗಬೇಕಿದೆ. ತಾಯಂದಿರು ಸೆರಗು ಹಾಕುವುದು ತಪ್ಪೇ? ತೀರ್ಪಿನಿಂದ ಬೀದಿಗಿಳಿಯಬೇಕಾದ ಅವಶ್ಯಕತೆಯಿಲ್ಲ. ನ್ಯಾಯಾಂಗದ ಮೇಲೆ ನಮಗೆ ವಿಶ್ವಾಸವಿದೆ. ಸುಪ್ರೀಂಗೆ (Supreme Court) ಹೋಗುವುದಕ್ಕೆ ಅವಕಾಶವಿದೆ ಎಂದು ಹೇಳಿದ್ದಾರೆ.
ಲಾಯರ್ ಮಜೀದ್ ಮೆಮನ್ ಬಾಂಬೆಯವರು. ಅವರ ಜೊತೆಯೂ ನಾನು ಚರ್ಚೆ ಮಾಡಿದ್ದೇನೆ. ಒಗ್ಗಟ್ಟಾಗಿ ಸುಪ್ರೀಂಗೆ ಹೋಗಲು ಪ್ರಯತ್ನ ಮಾಡ್ತಿದ್ದೇವೆ. ರಾಜ್ಯದಲ್ಲಿ ಶಾಂತಿ ಕಾಪಾಡುವುದಕ್ಕೆ ನೋಡ್ತಿದ್ದೇವೆ ಎಂದಿದ್ದಾರೆ.
ಇದನ್ನೂ ಓದಿ: ಹಿಜಾಬ್ ತೀರ್ಪು : ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು, ವಿದ್ಯೆಗಿಂತ ಯಾವುದು ಹೆಚ್ಚಲ್ಲ : ಸಿಎಂ
ಇದು ಇಲ್ಲಿಗೆ ನಿಲ್ಲುವುದಿಲ್ಲ. ನಾಳೆ ಜೀನ್ಸ್, ಬೇರೆ ಉಡುಪಿನ ಬಗ್ಗೆ ಚರ್ಚೆಯಾಗಬಹುದು. ಹೈಕೋರ್ಟ್ (Karnataka High Court) ತೀರ್ಪಿನ ಬಗ್ಗೆ ನಮಗೆ ಅಸಮಾಧಾನವಿದೆ. ಅದಕ್ಕೆ ನಾವು ಸುಪ್ರೀಂಕೋರ್ಟ್ ಗೆ ಹೋಗುತ್ತೇವೆ. ನಾಳೆ ನೀವು ವಿಭೂತಿ ಹಾಕಬಾರದು ಅಂತೀರ. ನನಗೆ ಹಾಕಬೇಕೆಂಬ ಇಷ್ಟವಿದೆ. ನನ್ನನ್ನ ತಡೆಯೋಕೆ ನಿಮಗೆ ಹೇಗೆ ಸಾಧ್ಯ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.