ಚಂಡೀಗಡ: ಭಾರತ ಕ್ರಿಕೆಟ್ (Team India) ತಂಡದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ (Harbhajan Singh) ಅವರನ್ನು ಆಮ್ ಆದ್ಮಿ ಪಕ್ಷದಿಂದ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇದನ್ನೂ ಓದಿ: Viral Video : ಎಷ್ಟು ದೂರ ಸರಿದರೂ ಮತ್ತೆ ಮತ್ತೆ ಸಿಂಹಕ್ಕೆ ಮುತ್ತಿಕ್ಕುತ್ತಿರುವ ಆಮೆ
ಪಂಜಾಬ್ನಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ (Aam Aadmi Party) ಸರಳ ಬಹುಮತ ಗಳಿಸಿ ಗೆಲುವಿನ ನಗೆ ಬೀರಿತು. ಭಗವಂತ್ ಸಿಂಗ್ ಮಾನ್ ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ಮಧ್ಯೆ ಪಂಜಾಬ್ನಿಂದ ರಾಜ್ಯಸಭೆಗೆ (Rajya Sabha) ಖ್ಯಾತನಾಮರನ್ನು ಕಳುಹಿಸಲು ಎಎಪಿ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.
ಪಂಜಾಬ್ ಸಿಎಂ ಸೇರಿದಂತೆ ಎಎಪಿಯ (AAP) ಅಗ್ರ ನಾಯಕರು ರಾಜ್ಯಸಭೆಗೆ ತಮ್ಮ ಹೆಸರನ್ನು ಪಕ್ಷದಿಂದ ನಾಮ ನಿರ್ದೇಶನ ಮಾಡುವ ಕುರಿತಂತೆ ಹರ್ಭಜನ್ ಸಿಂಗ್ ಜೊತೆ ಮಾತುಕತೆ ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಇದನ್ನೂ ಓದಿ: ಜೇಮ್ಸ್ ರಿಲೀಸ್ : ಕುಣಿದು ಕುಪ್ಪಳಿಸಿದ ಅಭಿಮಾನಿಗಳು
18 ವರ್ಷಗಳ ತಮ್ಮ ಸುದೀರ್ಘ ಅಂತಾರಾಷ್ಟ್ರೀಯ ಕ್ರಿಕೆಟ್ (Cricket) ವೃತ್ತಿ ಜೀವನದಲ್ಲಿ ಹರ್ಭಜನ್ ಸಿಂಗ್, ಎಲ್ಲ ಮಾದರಿಯ ಕ್ರಿಕೆಟ್ನಲ್ಲಿ ಒಟ್ಟು 700 ವಿಕೆಟ್ ಪಡೆದಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.