ಬೆಂಗಳೂರು: ರಾಜ್ಯ ಸರ್ಕಾರವು ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ(Bhagavad Gita in Textbook) ಅಳವಡಿಸಲು ಚಿಂತಿಸಿರುವುದು ಕೊರೊನಾಗಿಂತಲೂ ಅಪಯಕಾರಿ ಎಂಬ ಶಾಸಕ ತನ್ವೀರ್ ಸೇಠ್(Tanveer Sait) ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಬಿಜೆಪಿ #ಹಿಂದೂವಿರೋಧಿಕಾಂಗ್ರೆಸ್ ಹ್ಯಾಶ್ ಟ್ಯಾಗ್ ಬಳಸಿ ಕಿಡಿಕಾರಿದೆ.
‘ಬಹುಸಂಖ್ಯಾತ ಹಿಂದೂಗಳ ಅಸ್ಮಿತೆಯನ್ನು ಕೆಣಕುವುದಕ್ಕಾಗಿ ಕಾಂಗ್ರೆಸ್ ಪಕ್ಷ(Congress Party) ಅಸ್ತಿತ್ವದಲ್ಲಿರುವುದೇ? ಶಿಕ್ಷಣ ಸಚಿವನಾಗಿರುವಾಗಲೇ ತನ್ವೀರ್ ಸೇಠ್(Tanveer Sait) ವಿದ್ಯಾರ್ಥಿಗಳ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುವ ‘ಚಿತ್ರ’ ನೋಡಿದ್ದರು. ನೈತಿಕ ಶಿಕ್ಷಣದ ಬಗ್ಗೆ ರಾಜ್ಯದ ಜನತೆಗೆ ನಿಮ್ಮಿಂದ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ’ವೆಂದು ಬಿಜೆಪಿ ಟೀಕಿಸಿದೆ.
ಇದನ್ನೂ ಓದಿ: ಪಾವಗಡ ಬಸ್ ದುರಂತ: ಮೃತಪಟ್ಟವರಿಗೆ ರಾಜ್ಯ ಸರಕಾರ ಕನಿಷ್ಠ 25 ಲಕ್ಷ ರೂ.ಪರಿಹಾರ ನೀಡಲಿ-ಎಚ್ಡಿಕೆ
ತನ್ವೀರ್ ಸೇಠ್ ಹೇಳಿದ್ದೇನು..?
‘ಕೇಂದ್ರ ಮತ್ತು ರಾಜ್ಯ ಸರ್ಕಾರ(BJP Government)ಗಳು ಮಕ್ಕಳ ಕಲಿಕೆಗೆ ಹೆಚ್ಚಿನ ಆದ್ಯತೆ ಕೊಡುವ ಬದಲು ಅವರ ಮನಸ್ಸನ್ನು ಕಲ್ಮಶಗೊಳಿಸಲು ಮುಂದಾಗಿರುವುದು ನೋವಿನ ವಿಚಾರ. ಒಬ್ಬರ ಧರ್ಮವನ್ನು ಇನ್ನೊಬ್ಬರ ಮೇಲೆ ಬಲವಂತದಿಂದ ಹೇರುವುದು ಅಪರಾಧವೆಂದು ಸರ್ಕಾರವು ಮತಾಂತರ ನಿಷೇಧ ಕಾಯ್ದೆಯಲ್ಲಿ ಹೇಳಿದೆ. ಈಗ ನೋಡಿದರೆ ಶಿಕ್ಷಣದಲ್ಲಿ ಧರ್ಮದ ವಿಚಾರ ಅಳವಡಿಸಲು ಮುಂದಾಗಿ ತನ್ನದೇ ನಿಯಮವನ್ನು ಉಲ್ಲಂಘಿಸುತ್ತಿದೆ. ಭಗವದ್ಗೀತೆ ಅಳವಡಿಸುವುದರಿಂದ ಏನಾಗಲ್ಲವೆಂಬುದು ಮುಖ್ಯವಲ್ಲ, ಮಕ್ಕಳ ಶಿಕ್ಷಣ ವ್ಯವಸ್ಥೆಗೆ ಇದು ಬೇಡ’ ಅಂತಾ ತನ್ವೀರ್ ಸೇಠ್ ಹೇಳಿದ್ದರು.
ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಲು ನಿರ್ಧಾರ
ರಾಜ್ಯದ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸುವ ಸಂಬಂಧ ಹಲವೆಡೆಯಿಂದ ಬೇಡಿಕೆ ಬಂದಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಗುಜರಾತ್ ಮಾದರಿಯಲ್ಲಿ ರಾಜ್ಯದ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರ್ಪಡೆಗೊಳಿಸುವ ಸಂಬಂಧ ಚರ್ಚೆ ಆರಂಭವಾಗಿದೆ. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್(BC Nagesh) ಹೇಳಿದ್ದರು.
ಇದನ್ನೂ ಓದಿ: ದೇಶದ್ರೋಹಿ ಶಕ್ತಿಗಳನ್ನು ಸಹಿಸಲಾಗುವುದಿಲ್ಲ -ಸಿಎಂ ಬಸವರಾಜ ಬೊಮ್ಮಾಯಿ
ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವುದನ್ನು ಸ್ವತಃ ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai)ಯವರೇ ಸಮರ್ಥಿಸಿಕೊಂಡಿದ್ದರು. ಪಠ್ಯದಲ್ಲಿ ಭಗವದ್ಗೀತೆ ಅಳವಡಿಸುವುದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದ್ದರು. ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಮಾತನಾಡಿ, ‘ನೈತಿಕ ವಿಷಯವನ್ನು ಶಾಲಾ ಮಕ್ಕಳಿಗೆ ಕಲಿಸಲು ನಮ್ಮಿಂದ ಯಾವುದೇ ತಕರಾರಿಲ್ಲ. ನಾವು ಸಂವಿಧಾನ ಮತ್ತು ಜಾತ್ಯಾತೀತತೆಯಲ್ಲಿ ನಂಬಿಕೆ ಇಟ್ಟವರು. ಮಕ್ಕಳಿಗೆ ಭಗವದ್ಗೀತೆ, ಖುರಾನ್, ಬೈಬಲ್ ಯಾವುದನ್ನಾದರೂ ಹೇಳಿಕೊಡಲಿ, ಆದರೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕಾದುದ್ದು ಮುಖ್ಯ’ವೆಂದು ಹೇಳಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.