ನವೀನ್ ಮೃತದೇಹ ತಾಯ್ನಾಡಿಗೆ : ದೂರವಾಣಿ ಕರೆ ಮೂಲಕ ಪಿಎಂಗೆ ಧನ್ಯವಾದ ಎಂದ ಸಿಎಂ

ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರವಾಣಿ ಕರೆ ಮಾಡಿ ಮೂರು ನಿಮಿಷಗಳ ಕಾಲ ಮಾತನಾಡಿದ್ದಾರೆ.

Written by - Zee Kannada News Desk | Last Updated : Mar 21, 2022, 05:08 PM IST
  • ನವೀನ್ ಗ್ಯಾನಗೌಡರ್ ಮೃತದೇಹ ತಾಯ್ನಾಡಿಗೆ ಆಗಮನ
  • ಸಿಎಂ ಬಸವರಾಜ ಬೊಮ್ಮಾಯಿ ಅವರು ಪಿಎಂ ಮೋದಿಗೆ ದೂರವಾಣಿ ಕರೆ
  • ಚಳಗೆರೆ ಯಿಂದ ಬೆಂಗಳೂರಿಗೆ ವಾಪಸಾದ ಬಳಿಕ ಸಿಎಂ ಬೊಮ್ಮಾಯಿ ದೂರವಾಣಿ ಕರೆ
ನವೀನ್ ಮೃತದೇಹ ತಾಯ್ನಾಡಿಗೆ : ದೂರವಾಣಿ ಕರೆ ಮೂಲಕ ಪಿಎಂಗೆ ಧನ್ಯವಾದ ಎಂದ ಸಿಎಂ title=

ಬೆಂಗಳೂರು : ‌ನವೀನ್ ಗ್ಯಾನಗೌಡರ್ ಮೃತದೇಹ ತಾಯ್ನಾಡಿಗೆ ಆಗಮನ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರವಾಣಿ ಕರೆ ಮಾಡಿ ಮೂರು ನಿಮಿಷಗಳ ಕಾಲ ಮಾತನಾಡಿದ್ದಾರೆ.

ಚಳಗೆರೆ ಯಿಂದ ಬೆಂಗಳೂರಿಗೆ ವಾಪಸಾದ ಬಳಿಕ ಸಿಎಂ ಬೊಮ್ಮಾಯಿ(Basavaraj Bommai) ದೂರವಾಣಿ ಕರೆ ಮಾಡಿ ಮಾತನಾಡಿದರು. 'ನವೀನ್ ಮೃತದೇಹವನ್ನು ದೇಶಕ್ಕೆ ತರಿಸುವಲ್ಲಿ ತಮ್ಮ ಪಾತ್ರ ಬಹಳ ಮುಖ್ಯವಾಗಿದೆ. ನವೀನ್ ಮುಖ ನೋಡಬೇಕೆಂಬುದು ಅವರ ತಂದೆ ತಾಯಿ ಆಸೆಯಾಗಿತ್ತು. ಅವರ ಹೆತ್ತವರ ಕನಸನ್ನು ತಾವು ಈಡೇರಿಸಿದ್ದೀರಿ. ಕರ್ನಾಟಕದ ರಾಜ್ಯದ ಪರವಾಗಿ ತಮಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಇದು ನಿಜಕ್ಕೂ ಅಸಾಧಾರಣ ಕೆಲಸವಲ್ಲ. ಯುದ್ಧ ಭೂಮಿಯಿಂದ ಮೃತದೇಹ ತರುವುದು ಸುಲಭದ ಮಾತಲ್ಲ. ಆದರೆ ತಮ್ಮ ರಾಜತಾಂತ್ರಿಕತೆಯಿಂದ ಅಸಾಧಾರಣ ಕೆಲಸವನ್ನು ಮಾಡಿ ತೋರಿಸಿದ್ದೀರಿ. ಇದಕ್ಕಾಗಿ ನಾನು ಧನ್ಯವಾದ ತಿಳಿಸಬಯಸುತ್ತೇನೆ ಎಂದು ಪಿಎಂ ಮೋದಿ ಅವರಿಗೆ ದೂರವಾಣಿಯಲ್ಲಿ ತಿಳಿಸಿದರು. 

ಇದನ್ನೂ ಓದಿ : ದುಬಾರಿ ವೈದ್ಯಕೀಯ ಶಿಕ್ಷಣ.. ಪರ್ಯಾಯ ಕ್ರಮಗಳ ಬಗ್ಗೆ ಕೇಂದ್ರ ಗಂಭೀರ ಚಿಂತನೆ: ಸಿಎಂ ಬಸವರಾಜ ಬೊಮ್ಮಾಯಿ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News