ಬೆಂಗಳೂರು: ಟಿಪ್ಪು ಸುಲ್ತಾನ್(Tipu Sultan) ಈ ದೇಶದ ಸ್ವಾತಂತ್ರ್ಯ ಯೋಧ ಎನ್ನುವುದೇ ಒಂದು ಉತ್ರ್ಪೇಕ್ಷೆ ಹಾಗೂ ತಿರುಚಿದ ಸತ್ಯ. ಶಾಲಾ- ಪಠ್ಯ ಕ್ರಮದಲ್ಲಿ ಇಂಥ ಸುಳ್ಳುಗಳೇಕೆ ಇರಬೇಕು? ವಿದ್ಯಾರ್ಥಿಗಳಿಗೆ ಮತಾಂಧರ ತಿರುಚಿದ ಇತಿಹಾಸ(Tipu Sultan Syllabus) ಕಲಿಸುವುದು ಎಷ್ಟು ಸರಿ? ಎಂದು ಬಿಜೆಪಿ ಪ್ರಶ್ನಿಸಿದೆ.
ಟಿಪ್ಪು ಸುಲ್ತಾನ್ ಈ ದೇಶದ ಸ್ವಾತಂತ್ರ್ಯ ಯೋಧ ಎನ್ನುವುದೇ ಒಂದು ಉತ್ರ್ಪೇಕ್ಷೆ ಹಾಗೂ ತಿರುಚಿದ ಸತ್ಯ. ಶಾಲಾ- ಪಠ್ಯ ಕ್ರಮದಲ್ಲಿ ಇಂಥ ಸುಳ್ಳುಗಳೇಕೆ ಇರಬೇಕು?
ವಿದ್ಯಾರ್ಥಿಗಳಿಗೆ ಮತಾಂಧರ ತಿರುಚಿದ ಇತಿಹಾಸ ಕಲಿಸುವುದು ಎಷ್ಟು ಸರಿ?#ಟಿಪ್ಪುಸುಳ್ಳುಇತಿಹಾಸ
— BJP Karnataka (@BJP4Karnataka) March 30, 2022
#ಟಿಪ್ಪುಸುಳ್ಳುಇತಿಹಾಸ ಹ್ಯಾಶ್ ಟ್ಯಾಗ್ ಬಳಸಿ ಬಿಜೆಪಿ ಬುಧವಾರ ಸರಣಿ ಟ್ವೀಟ್ ಮಾಡಿದ್ದು, ‘ಉತ್ತರ ಭಾರತದಲ್ಲಿ ಔರಂಗಜೇಬ್, ದಕ್ಷಿಣದಲ್ಲಿ ಟಿಪ್ಪು ಸುಲ್ತಾನ್(Tipu Sultan) ಮತಾಂಧ "ರಾಜಸತ್ತೆ"ಯ ಸೃಷ್ಟಿಕರ್ತರು. ಕತ್ತಿಯ ಮೊನೆಯಿಂದ ಅಮಾಯಕರ ಬದುಕು ಕಸಿದುಕೊಂಡ ಮತಾಂಧರಿವರು. ಇಂಥ ಮತೀಯ ಸುಳ್ಳು ಇತಿಹಾಸವನ್ನು ನಮ್ಮ ಮಕ್ಕಳು ಓದಬೇಕೇ?’ ಎಂದು ಬಿಜೆಪಿ ಪ್ರಶ್ನಿಸಿದೆ.
ಉತ್ತರ ಭಾರತದಲ್ಲಿ ಔರಂಗಜೇಬ್, ದಕ್ಷಿಣದಲ್ಲಿ ಟಿಪ್ಪು ಸುಲ್ತಾನ್ ಮತಾಂಧ "ರಾಜಸತ್ತೆ"ಯ ಸೃಷ್ಟಿಕರ್ತರು.
ಕತ್ತಿಯ ಮೊನೆಯಿಂದ ಅಮಾಯಕರ ಬದುಕು ಕಸಿದುಕೊಂಡ ಮತಾಂಧರಿವರು.
ಇಂಥ ಮತೀಯ ಸುಳ್ಳು ಇತಿಹಾಸವನ್ನು ನಮ್ಮ ಮಕ್ಕಳು ಓದಬೇಕೇ?#ಟಿಪ್ಪುಸುಳ್ಳುಇತಿಹಾಸ
— BJP Karnataka (@BJP4Karnataka) March 30, 2022
ಇದನ್ನೂ ಓದಿ: Pariksha Pe Charcha: ಪ್ರಧಾನಿ ಮೋದಿಯೊಟ್ಟಿಗೆ ಚಾಮರಾಜನಗರ ವಿದ್ಯಾರ್ಥಿನಿ ಮಾತು
‘ನೆತ್ತರಕೆರೆ, ಮಡಿಕೇರಿಯಲ್ಲಿ ಟಿಪ್ಪು ನಡೆಸಿದ ನರಮೇಧ ಮರೆಯಲು ಸಾಧ್ಯವೇ? ಮತಾಂತರವಾಗು, ಶರಣಾಗು, ಇಲ್ಲವೇ ಪ್ರಾಣತ್ಯಾಗ ಮಾಡು ಎಂಬುದು ಟಿಪ್ಪು ರಾಜನೀತಿ. ಒಂದೇ ಒಂದು ಯುದ್ಧವನ್ನು ನೇರಮಾರ್ಗದಲ್ಲಿ ಗೆಲ್ಲದ ಮತಾಂಧನಿಗೆ "ಮೈಸೂರು ಹುಲಿ"(Tiger Of Mysuru) ಎಂಬ ಬಿರುದು ಪ್ರಾಪ್ತವಾಗಿದ್ದೇ ಒಂದು ಚೋದ್ಯ. ನೈಜತೆ ಬಯಲಾಗಲೇಬೇಕಲ್ಲವೇ?’ ಎಂದು ಬಿಜೆಪಿ ಕಿಡಿಕಾರಿದೆ.
ನೆತ್ತರಕೆರೆ, ಮಡಿಕೇರಿಯಲ್ಲಿ ಟಿಪ್ಪು ನಡೆಸಿದ ನರಮೇಧ ಮರೆಯಲು ಸಾಧ್ಯವೇ?
ಮತಾಂತರವಾಗು, ಶರಣಾಗು, ಇಲ್ಲವೇ ಪ್ರಾಣತ್ಯಾಗ ಮಾಡು ಎಂಬುದು ಟಿಪ್ಪು ರಾಜನೀತಿ.
ಒಂದೇ ಒಂದು ಯುದ್ಧವನ್ನು ನೇರಮಾರ್ಗದಲ್ಲಿ ಗೆಲ್ಲದ ಮತಾಂಧನಿಗೆ "ಮೈಸೂರು ಹುಲಿ" ಎಂಬ ಬಿರುದು ಪ್ರಾಪ್ತವಾಗಿದ್ದೇ ಒಂದು ಚೋದ್ಯ.
ನೈಜತೆ ಬಯಲಾಗಲೇಬೇಕಲ್ಲವೇ?#ಟಿಪ್ಪುಸುಳ್ಳುಇತಿಹಾಸ
— BJP Karnataka (@BJP4Karnataka) March 30, 2022
‘ಟಿಪ್ಪು ಇತಿಹಾಸ(Tipu Sultan History) ಎಂದರೆ ಅದು ತಾಲೀಬಾನ್, ಐಸಿಸ್ ಮತಾಂಧರಷ್ಟೇ ಘೋರ. ಕಾಶ್ಮೀರದಲ್ಲಿ ಮತಾಂಧರು ನಡೆಸಿದ ನರಮೇಧವನ್ನೂ ಮೀರಿದ ಕೃತ್ಯವನ್ನು ಟಿಪ್ಪು ನಡೆಸಿದ್ದಾನೆ ಎಂಬುದಕ್ಕೆ ಸಾಕಷ್ಟು ದಾಖಲೆಗಳಿವೆ. ಸತ್ಯವನ್ನು ಮುಚ್ಚಿಟ್ಟು ಉದಾತ್ತ, ಸ್ವಾತಂತ್ರ್ಯ ವೀರ ಎಂದು ಬಣ್ಣಿಸುವುದು ದೇಶದ ಇತಿಹಾಸಕ್ಕೆ ಮಾಡುವ ಅಪಮಾನ’ ಎಂದು ಬಿಜೆಪಿ ಟೀಕಿಸಿದೆ.
ಟಿಪ್ಪು ಇತಿಹಾಸ ಎಂದರೆ ಅದು ತಾಲೀಬಾನ್, ಐಸಿಸ್ ಮತಾಂಧರಷ್ಟೇ ಘೋರ.
ಕಾಶ್ಮೀರದಲ್ಲಿ ಮತಾಂಧರು ನಡೆಸಿದ ನರಮೇಧವನ್ನೂ ಮೀರಿದ ಕೃತ್ಯವನ್ನು ಟಿಪ್ಪು ನಡೆಸಿದ್ದಾನೆ ಎಂಬುದಕ್ಕೆ ಸಾಕಷ್ಟು ದಾಖಲೆಗಳಿವೆ.
ಸತ್ಯವನ್ನು ಮುಚ್ಚಿಟ್ಟು ಉದಾತ್ತ, ಸ್ವಾತಂತ್ರ್ಯ ವೀರ ಎಂದು ಬಣ್ಣಿಸುವುದು ದೇಶದ ಇತಿಹಾಸಕ್ಕೆ ಮಾಡುವ ಅಪಮಾನ.#ಟಿಪ್ಪುಸುಳ್ಳುಇತಿಹಾಸ
— BJP Karnataka (@BJP4Karnataka) March 30, 2022
ಇದನ್ನೂ ಓದಿ: ಚುನಾವಣೆ ಮೂಡ್ಗೆ ಜಾರಿದ ರಾಜಕೀಯ ಪಕ್ಷಗಳು: ನಡೆಯಲಿದೆ ಆರೋಪ-ಪ್ರತ್ಯಾರೋಪ ವಾಗ್ಯುದ್ಧ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.