ಬೆಂಗಳೂರು: ಶೋಷಿತ ಸಮುದಾಯಗಳಿಗೆ ಮೀಸಲಾತಿ ನೀಡುವುದಕ್ಕೆ ಮೀನಾಮೇಷ ಮಾಡಬಾರದು ಎಂದು ಬಿ.ಕೆ ಹರಿಪ್ರಸಾದ್ (BK Hariprasad) ಹೇಳಿದ್ದಾರೆ.
ಹಿಂದುಳಿದ ವರ್ಗಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮೀಸಲಾತಿ ವಿಷಯದ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಅಧ್ಯಕ್ಷತೆಯಲ್ಲಿ ನಡೆದ ಉಭಯ ಸದನ ನಾಯಕರ ಸಭೆಯಲ್ಲಿ ಭಾಗವಹಿಸಿದ ಅವರು 'ಸುಪ್ರೀಂಕೋರ್ಟ್ ಹಿಂದುಳಿದ ವರ್ಗಗಳಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡಿ ಚುನಾವಣೆ ನಡೆಸಿ ಎಂದು ನಿರ್ದೇಶನ ನೀಡಿದೆ.ಹೀಗಾಗಿ ಒಬಿಸಿ ಸಮುದಾಯಗಳಿಗೆ ಮೀಸಲಾತಿ ನೀಡಿಯೇ ಚುನಾವಣೆ ನಡೆಸಬೇಕೆಂದು ಸಭೆಯಲ್ಲಿ ಸಲಹೆ ನೀಡಿದ್ದೇನೆ.
ಇದನ್ನೂ ಓದಿ: 'ದಿ ಕಾಶ್ಮೀರಿ ಫೈಲ್ ಸಿನಿಮಾ ಬದಲು, ಪರ್ಜಾನಿಯಾ ಸಿನಿಮಾ ನೋಡಲು ಅವಕಾಶ ಮಾಡಿಕೊಡಿ'
ನ್ಯಾಯಾಲಯ ಮೀಸಲು ನೀಡುವ ಮುನ್ನ ಹಿಂದುಳಿದ ವರ್ಗಗಳ ಸಮೀಕ್ಷೆ ನಡೆಸಬೇಕೆಂದು ನಿರ್ದೇಶನ ನೀಡಿದೆ. ಈಗಾಗಲೇ ಸರ್ಕಾರದ ಬಳಿ ಶೈಕ್ಷಣಿಕ, ಸಾಮಾಜಿಕವಾಗಿ ಒಬಿಸಿ ಸಮುದಾಯದ ಸ್ಥಿತಿಗತಿ ಕುರಿತು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದೆ. ಈ ವರದಿಯ ಅನುಸಾರ ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಬಹುದು' ಎಂದು ಹೇಳಿದ್ದಾರೆ.
ಇದನ್ನೂ ಓದಿ: ಬಾಕ್ಸ್ ಆಫೀಸ್‌ನಲ್ಲಿ ಬಾಹುಬಲಿ ದಾಖಲೆಯನ್ನೂ ಮುರಿದ ಆರ್ಆರ್ಆರ್!
ಎಸ್ಸಿ/ಎಸ್ಟಿ ಸಮುದಾಯಗಳು ಕೂಡ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಹೆಚ್ಚಳಕ್ಕೆ ಹೋರಾಟ ನಡೆಸುತ್ತಿದ್ದಾರೆ. ಮೀಸಲಾತಿ ಹೆಚ್ಚಳ ಮಾಡಬಹುದು ಎಂದು ನ್ಯಾ.ನಾಗಮೋಹನ್ ದಾಸ್ ಸಮಿತಿ ಕೂಡ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಶೋಷಿತ ಸಮುದಾಯಗಳಿಗೆ ಮೀಸಲಾತಿ ನೀಡುವುದಕ್ಕೆ ಮೀನಾಮೇಷ ಮಾಡಬಾರದು ಎಂದು ಹೇಳಿದರು.
ಮೀಸಲಾತಿ ಹೆಚ್ಚಳದಿಂದ ಇಂದ್ರಾ ಸಾಹ್ನಿ ಪ್ರಕರಣದಲ್ಲಿ 50% ಮೀಸಲಾತಿ ಮೀರಬಾರದೆಂಬ ನಿಯಮ ಇರಬಹುದು.ಆದರೆ ಕೇಂದ್ರ ಸರ್ಕಾರವೇ EWSಗೆ ಶೇ 10 ಮೀಸಲಾತಿ ನೀಡುವ ಮೂಲಕ ಮೀಸಲಾತಿಯ ಪ್ರಮಾಣವನ್ನು ಶೇ 60ಕ್ಕೆ ಏರಿಸಿದೆ. ಇನ್ನೂ ತಮಿಳುನಾಡಿನಲ್ಲಿ ಈಗಾಗಲೇ ಶೇ.69ರಷ್ಟು ಮೀಸಲಾತಿ ನೀಡಿದೆ. ತಮಿಳುನಾಡಿನಲ್ಲಿ ವಿಶೇಷ ಅಧಿವೇಶನ ನಡೆಸಿ ಸಲ್ಲಿಸಿದ ನಿರ್ಣಯವನ್ನ ಆಗಿನ ಪಿ ವಿ ನರಸಿಂಹ್ ರಾವ್ ಸರ್ಕಾರ ಒಪ್ಪಿ, ರಾಷ್ಟ್ರಪತಿ ಸಹಿ ಕೂಡ ಮಾಡಿದೆ.ಹೀಗಾಗಿ ಕರ್ನಾಟಕದಲ್ಲೂ ಪಕ್ಷಾತೀತವಾಗಿ ವಿಶೇಷ ಸದನ ನಡೆಸಿ ನಿರ್ಣಯ ತೆಗೆದುಕೊಳ್ಳಬೇಕು. ಶೋಷಿತ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡಬಹುದು ಎಂದು ಸಲಹೆ ನೀಡಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ: ಸಖತ್ ಪ್ರಾಮಿಸಿಂಗ್ ಆಗಿದೆ ಪೊಲಿಟಿಕಲ್ ಡ್ರಾಮಾ ಧೀರ ಭಗತ್ ರಾಯ್ ಟೀಸರ್!
ಒಟ್ಟಾರೆಯಾಗಿ ಒಬಿಸಿ ಸಮುದಾಯಗಳಿಗೆ ಮೀಸಲಾತಿ ನೀಡಿಯೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿಬೇಕೆಂದು ಒತ್ತಾಯಿಸಿದ್ದೇನೆ. ಇಲ್ಲವಾದರೆ ಒಬಿಸಿ ಸಮುದಾಯಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಸಾಮಾಜಿಕ ನ್ಯಾಯದ ವಿರುದ್ಧ ನಡೆದಂತಾಗುತ್ತದೆ ಎಂದು ಸರ್ಕಾರವನ್ನ ಒತ್ತಾಯಿಸಿದ್ದೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ನ ಬಂಡೆಪ್ಪ ಕಾಶೆಂಪೂರ, ಸಚಿವರುಗಳಾದ ಮಾಧುಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ, ಗೋವಿಂದ ಕಾರಜೋಳ, ಕೆ ಎಸ್ ಈಶ್ವರಪ್ಪ, ಎಂ ಟಿ ಬಿ ನಾಗರಾಜ್ ಹಾಗೂ ಕಾನೂನು ಸಲಹೆಗಾರರು, ಅಧಿಕಾರಿಗಳು ಭಾಗವಹಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.