ಬೆಂಗಳೂರು: ಎಐಸಿಸಿ ನಿಕಟಪೂರ್ವ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪವರ್ ಸ್ಟಾರ್ ದಿವಂಗತ ಪುನೀತ್ ರಾಜಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಗುರುವಾರ ರಾತ್ರಿ ಭೇಟಿ ನೀಡಿ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್, ಪುತ್ರಿ ವಂದಿತಾ ಪುನೀತ್ ರಾಜಕುಮಾರ್ ಅವರಿಗೆ ಸಾಂತ್ವನ ಹೇಳಿದರು.
ಕನ್ನಡದ ಖ್ಯಾತ ನಟರಾಗಿದ್ದ ಶ್ರೀ ಪುನೀತ್ ರಾಜಕುಮಾರ್ ಅವರ ನಿವಾಸದಲ್ಲಿ ಇಂದು ಅವರ ಪತ್ನಿ @ashwinipuneet ಮತ್ತು ಕುಟುಂಬವನ್ನು ಭೇಟಿ ಮಾಡಿ ಪುನೀತ್ ಅವರ ಅಗಲಿಕೆಗೆ ನನ್ನ ಸಂತಾಪಗಳನ್ನು ಸೂಚಿಸಿದೆ.
ಅತ್ಯಂತ ಕಡಿಮೆ ವಯಸ್ಸಿನಲ್ಲೇ ಪುನೀತ್ ಅವರು ಕೋಟ್ಯಂತರ ಕನ್ನಡಿಗರ ಮನೆ ಮನಗಳಿಗೆ ಎಂದೂ ಮರೆಯಲಾಗದಂತಹ ನೆನಪಿನ ಬುತ್ತಿಯನ್ನ ನೀಡಿದ್ದಾರೆ. pic.twitter.com/YPgFZGOZsM
— Rahul Gandhi (@RahulGandhi) March 31, 2022
ಅಪ್ಪು ಮನೆ ಭೇಟಿ ನೀಡಿ ಸಾಂತ್ವಾನ ಹೇಳಿದ ಬಳಿಕ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ (Rahul Gandhi) "ಕನ್ನಡದ ಖ್ಯಾತ ನಟರಾಗಿದ್ದ ಶ್ರೀ ಪುನೀತ್ ರಾಜಕುಮಾರ್ (Puneeth Rajkumar) ಅವರ ನಿವಾಸದಲ್ಲಿ ಇಂದು ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ಕುಟುಂಬವನ್ನು ಭೇಟಿ ಮಾಡಿ ಪುನೀತ್ ಅವರ ಅಗಲಿಕೆಗೆ ನನ್ನ ಸಂತಾಪಗಳನ್ನು ಸೂಚಿಸಿದೆ.ಅತ್ಯಂತ ಕಡಿಮೆ ವಯಸ್ಸಿನಲ್ಲೇ ಪುನೀತ್ ಅವರು ಕೋಟ್ಯಂತರ ಕನ್ನಡಿಗರ ಮನೆ ಮನಗಳಿಗೆ ಎಂದೂ ಮರೆಯಲಾಗದಂತಹ ನೆನಪಿನ ಬುತ್ತಿಯನ್ನ ನೀಡಿದ್ದಾರೆ" ಎಂದು ರಾಹುಲ್ ಗಾಂಧಿ ಸ್ಮರಿಸಿದ್ದಾರೆ.
ಇದನ್ನೂ ಓದಿ: ಮಾರ್ಚ್ 31ಕ್ಕೆ ಸಿದ್ದಗಂಗಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ
ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ @RahulGandhi ಅವರು ಪವರ್ ಸ್ಟಾರ್ ದಿವಂಗತ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಸಾಂತ್ವನ ಹೇಳಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ @rssurjewala, ಕೆಪಿಸಿಸಿ ಅಧ್ಯಕ್ಷರಾದ @DKShivakumar ಅವರು ಸೇರಿದಂತೆ ಹಲವು ನಾಯಕರು ಜೊತೆಗಿದ್ದರು. pic.twitter.com/9p7glupwPD
— Karnataka Congress (@INCKarnataka) March 31, 2022
ರಾಹುಲ್ ಗಾಂಧಿ ಭೇಟಿ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್, ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ನಟ ರಾಘವೇಂದ್ರ ರಾಜಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.