ನವದೆಹಲಿ: ಪುಣೆಯಲ್ಲಿ ನಡೆದ ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ 14 ರನ್ ಗಳ ರೋಚಕ ಗೆಲುವು ಸಾಧಿಸಿದೆ.ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ದೆಹಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು 20 ಓವರ್ ಗಳಲ್ಲಿ 171/6 ಕ್ಕೆ ನಿಯಂತ್ರಿಸಿತು.
ಮೊದಲು ಬ್ಯಾಟಿಂಗ್ ಆರಂಭಿಸಿದ ಗುಜರಾತ್ ಟೈಟಾನ್ಸ್ ತಂಡವು 2 ರನ್ ಗಳಾಗುವಷ್ಟರಲ್ಲಿ ವಾಡೆ ಅವರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು, ಈ ಸಂದರ್ಭದಲ್ಲಿ ಶುಭ್ಮುನ್ ಗಿಲ್ ಅವರು 46 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಹಾಗೂ ಆರು ಬೌಂಡರಿಗಳೊಂದಿಗೆ 84 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.ಇನ್ನೊಂದೆಡೆಗೆ ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ 31, ಮಿಲ್ಲರ್ 20, ರನ್ ಗಳ ನೆರವಿನಿಂದಾಗಿ ಗುಜರಾತ್ ಟೈಟಾನ್ಸ್ ತಂಡವು 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು.
ಇದನ್ನೂ ಓದಿ: "ಚಪ್ಪಲಿ ಏಟು ತಿನ್ನಬಹುದು.. ಆದರೆ ದುಡ್ಡೇಟು ತಿನ್ನಲಿಕ್ಕೆ ಆಗಲ್ಲ"
Lockie Ferguson starred with the ball with a 4⃣-wicket haul and won the Player of the Match award as @gujarat_titans secured a win against #DelhiCapitals. 👍 👍
Scorecard ▶️ https://t.co/szyO3BhsuU #TATAIPL | #GTvDC pic.twitter.com/rv93FWe7t1
— IndianPremierLeague (@IPL) April 2, 2022
ಈ 172 ರನ್ ಗಳ ಗುರಿಯನ್ನು ಬೆನ್ನತ್ತಿದ ದೆಹಲಿ ಕ್ಯಾಪಿಟಲ್ಸ್ ತಂಡವು 34 ರನ್ ಗಳಾಗುವಷ್ಟರಲ್ಲಿ ಟೀಮ್ ಸಿಫರ್ಟ್, ಪೃಥ್ವಿ ಶಾ, ಮನದೀಪ್ ಸಿಂಗ್ ಅವರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.ಇದಾದ ನಂತರ ಮಧ್ಯಮ ಕ್ರಮಾಂಕದಲ್ಲಿ ರಿಷಬ್ ಪಂತ್ 43, ಲಲಿತ್ ಯಾದವ್ 25, ರೋವ್ ಮ್ಯಾನ್ ಪೊವೆಲ್ 20 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡಕ್ಕೆ ತಲುಪಿಸಲು ಶ್ರಮಿಸಿದರಾದರೂ ಅದು ಈಡೇರಲಿಲ್ಲ. ಕೊನೆಗೆ ದೆಹಲಿ ಕ್ಯಾಪಿಟಲ್ಸ್ ತಂಡವು 9 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಲಷ್ಟೇ ಸಾಧ್ಯವಾಯಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.