IPL 2022, CSK vs PBKS: ಕಿಂಗ್ಸ್‌ಗಳ ಕದನದಲ್ಲಿ ಯಾರಿಗೆ ಸಿಗುತ್ತೆ ಗೆಲುವು..?

ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಬಲಿಷ್ಠವಾಗಿದ್ದರೂ ತಂಡಕ್ಕೆ ಸೋಲಾಗುತ್ತಿರುವುದು ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಜಡೇಜಾರಿಗೆ ದೊಡ್ಡ ತಲೆನೋವಾಗಿದೆ.

Written by - Puttaraj K Alur | Last Updated : Apr 3, 2022, 01:49 PM IST
  • ಇಂದು ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್ ಮುಖಾಮುಖಿ
  • ಗೆಲುವಿನ ಖಾತೆ ತೆರೆಯುವ ನಿರೀಕ್ಷೆಯಲ್ಲಿರುವ ರವೀಂದ್ರ ಜಡೇಜಾ ಪಡೆ
  • ಮತ್ತೊಂದು ಗೆಲುವಿನ ಮೇಲೆ ಕಣ್ಣೀಟ್ಟಿರುವ ಮಯಾಂಕ್ ಅಗರ್ವಾಲ್ ಬಳಗ
IPL 2022, CSK vs PBKS: ಕಿಂಗ್ಸ್‌ಗಳ ಕದನದಲ್ಲಿ ಯಾರಿಗೆ ಸಿಗುತ್ತೆ ಗೆಲುವು..? title=
ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್

ನವದೆಹಲಿ: 15ನೇ ಆವೃತ್ತಿಯ ಐಪಿಎಲ್ ಟೂರ್ನಿ(Indian Premier League 2022)ಯ 11ನೇ ಪಂದ್ಯದಲ್ಲಿ ರಾಜರ ಕದನ ನಡೆಯಲಿದೆ. ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಇಂದು ಸಂಜೆ 4 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್(CSK vs PBKS) ಮುಖಾಮುಖಿಯಾಗುತ್ತಿವೆ.

ಎಂ.ಎಸ್.ಧೋನಿ(MS Dhoni) ಕೆಳಗಿಳಿದ ಬಳಿಕ ಚೆನ್ನೈ ನಾಯಕತ್ವವನ್ನು ರವೀಂದ್ರ ಜಡೇಜಾ(Ravindra Jadeja) ವಹಿಸಿಕೊಂಡಿದ್ದಾರೆ. ಆದರೆ ನಾಯಕನ ಕ್ಯಾಪ್ ಧರಿಸಿದ ಬಳಿಕ ಆಡಿದ ಎರಡೂ ಪಂದ್ಯಗಳಲ್ಲಿ ಸೋಲು ಕಂಡಿದ್ದಾರೆ. ಹೀಗಾಗಿ ಇಂದು ನಡೆಯಲಿರುವ ಪಂದ್ಯವು CSKಗೆ ತುಂಬಾ ಮಹತ್ವದ್ದಾಗಿದೆ. ಕೆಕೆಆರ್ ವಿರುದ್ಧದ ಮೊದಲ ಪಂದ್ಯದಲ್ಲಿ 6 ವಿಕೆಟ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ 2ನೇ ಪಂದ್ಯದಲ್ಲಿ 6 ವಿಕೆಟ್‍ಗಳಿಂದ ಚೆನ್ನೈ ಸೋಲು ಕಂಡಿದೆ.

ಇದನ್ನೂ ಓದಿ: IPL 2022: ತೀವ್ರ ಕುತೂಹಲ ಕೆರಳಿಸಿದ ಎಂ.ಎಸ್.ಧೋನಿ – ಗೌತಮ್ ಗಂಭಿರ್ ಭೇಟಿ!

ಪ್ರಸಕ್ತ ಟೂರ್ನಿಯಲ್ಲಿ ಚೆನ್ನೈ(Chennai Super Kings) ಗೆಲುವಿನ ಖಾತೆ ತೆರೆಯುವ ನಿರೀಕ್ಷೆಯಲ್ಲಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಬಲಿಷ್ಠವಾಗಿದ್ದರೂ ತಂಡಕ್ಕೆ ಸೋಲಾಗುತ್ತಿರುವುದು ನಾಯಕ ಜಡೇಜಾರಿಗೆ ದೊಡ್ಡ ತಲೆನೋವಾಗಿದೆ. ಹಿಂದಿನ ಪಂದ್ಯಗಳಲ್ಲಿ ಮಾಡಿದ ತಪ್ಪುಗಳನ್ನು ತಿದ್ದುಕೊಂಡು ಚೆನ್ನೈ ಕಣಕ್ಕಿಳಿಯಬೇಕಿದೆ. ಇನ್ನು RCB ವಿರುದ್ಧ ಮೊದಲ ಪಂದ್ಯದಲ್ಲಿಯೇ 5 ವಿಕೆಟ್‍ಗಳ ಗೆಲುವು ಸಾಧಿಸಿದ್ದ ಲಕ್ನೋ 2ನೇ ಪಂದ್ಯದಲ್ಲಿ ಕೆಕೆಆರ್ ಎದುರು 6 ವಿಕೆಟ್‍ಗಳಿಂದ ಸೋಲು ಕಂಡಿತ್ತು. ಅನುಭವಿ ಮತ್ತು ಯುವ ಆಟಗಾರರ ಪಡೆ ಹೊಂದಿರುವ ಪಂಜಾಬ್(Punjab Kings) ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. ಮಯಾಂಕ್ ಅಗರ್ವಾಲ್ ನೇತೃತ್ವದ ತಂಡವು ಚೆನ್ನೈಗೆ ಹೇಗೆ ಸವಾಲು ಒಡ್ಡಲಿದೆ ಅನ್ನೋ ಕುತೂಹಲ ಮೂಡಿದೆ. ಅಂತಿಮವಾಗಿ ವಿಜಯಲಕ್ಷ್ಮಿ ಯಾರಿಗೆ ಒಲಿಯುತ್ತಾಳೆ ಅನ್ನೋದನ್ನು ಕಾದು ನೋಡಬೇಕಿದೆ.

ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:

ಚೆನ್ನೈ ಸೂಪರ್ ಕಿಂಗ್ಸ್: ರವೀಂದ್ರ ಜಡೇಜಾ (ನಾಯಕ), ಎಂ.ಎಸ್.ಧೋನಿ (ವಿಕೆಟ್ ಕೀಪರ್), ಋತುರಾಜ್ ಗಾಯಕ್‌ವಾಡ್, ರಾಬಿನ್ ಉತ್ತಪ್ಪ, ಮೊಯಿನ್ ಅಲಿ, ಅಂಬಾಟಿ ರಾಯುಡು, ಶಿವಂ ದುಬೆ, ಡ್ವೇನ್ ಬ್ರಾವೋ, ಡ್ವೈನ್ ಪ್ರಿಟೋರಿಯಸ್, ಮುಖೇಶ್ ಚೌಧರಿ, ತುಷಾರ್ ದೇಶಪಾಂಡೆ, ಕ್ರಿಸ್ ಜೋರ್ಡಾನ್, ಆಡಮ್ ಮಿಲ್ವೇ, ಮಿಚೆಲ್ ಸ್ಯಾಂಟ್ನರ್, ಹರಿ ನಿಶಾಂತ್, ಎನ್.ಜಗದೀಸನ್, ಸುಭ್ರಾಂಶು ಸೇನಾಪತಿ, ಪ್ರಶಾಂತ್ ಸೋಲಂಕಿ, ಕೆ.ಎಂ.ಆಸಿಫ್, ಸಿಮರ್ಜೀತ್ ಸಿಂಗ್, ರಾಜವರ್ಧನ್ ಹಂಗರ್ಗೇಕರ್, ಮಹೇಶ್ ತೀಕ್ಷಣ, ಭಗತ್ ವರ್ಮಾ

ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (ನಾಯಕ), ಭಾನುಕಾ ರಾಜಪಕ್ಸೆ (ವಿಕೆಟ್ ಕೀಪರ್), ಶಿಖರ್ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಶಾರುಖ್ ಖಾನ್, ಓಡನ್ ಸ್ಮಿತ್, ರಾಜ್ ಬಾವಾ, ಅರ್ಷ್‌ದೀಪ್ ಸಿಂಗ್, ಹರ್‌ಪ್ರೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಾಹರ್, ಬೆನ್ನಿ ಹೋವೆಲ್, ಸಂದೀಪ್ ಶರ್ಮಾ, ರಿಷಿ ಧವನ್, ಬಲ್ತೇಜ್ ಸಿಂಗ್, ರಿಟಿಕ್ ಚಟರ್ಜಿ, ಜಿತೇಶ್ ಶರ್ಮಾ, ಪ್ರೇರಕ್ ಮಂಕಡ್, ಇಶಾನ್ ಪೊರೆಲ್, ಅಥರ್ವ ಟೈಡೆ, ಜಾನಿ ಬೈರ್‌ಸ್ಟೋವ್, ಪ್ರಭುಸಿಮ್ರಾನ್ ಸಿಂಗ್, ವೈಭವ್ ಅರೋರಾ, ಅಂಶ್ ಪಟೇಲ್

ಇದನ್ನೂ ಓದಿ: IPL 2022: ಕ್ರಿಕೆಟ್ ಅಭಿಮಾನಿಗಳಿಗೆ ಯುಗಾದಿ ಉಡುಗೊರೆ

ಐಪಿಎಲ್‌ ಪಂದ್ಯ: 11

ಚೆನ್ನೈ ಸೂಪರ್ ಕಿಂ‍ಗ್ಸ್ vs ಪಂಜಾಬ್ ಕಿಂಗ್ಸ್ 

ದಿನಾಂಕ: ಏಪ್ರಿಲ್ 03, ಭಾನುವಾರ

ಸ್ಥಳ: ಮುಂಬೈನ ಬ್ರಬೋರ್ನ್ ಸ್ಟೇಡಿಯಂ

ಸಮಯ: ಸಂಜೆ 7.30ಕ್ಕೆ

===========================================================================================

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News