ಬೆಂಗಳೂರು : 7th Pay Commission : ರಾಜ್ಯ ಸರಕಾರಿ ನೌಕರರಿಗೊಂದು ಸಂತಸದ ಸುದ್ದಿ. ರಾಜ್ಯ ಸರ್ಕಾರಿ ನೌಕರರ ಡಿಎಯನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಶೇ. 2.75 ರಷ್ಟು ತುಟ್ಟಿಭತ್ಯೆಯನ್ನು ಏರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಉದ್ಯೋಗಿಗಳು ಜನವರಿ 1, 2022 ರಿಂದ ಈ ಹೆಚ್ಚಿದ ಭತ್ಯೆಯ ಲಾಭವನ್ನು ಪಡೆಯಲಿದ್ದಾರೆ.
ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ :
ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ (DA Hike) ಹೆಚ್ಚಳದ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai)ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮತ್ರಿಗಳು, ಜನವರಿ 1, 2022 ರಿಂದಲೇ ಜಾರಿಗೆ ಬರುವಂತೆ ತುಟ್ಟಿ ಭತ್ಯೆ ಹೆಚ್ಚಿಸುವುದಾಗಿ ಹೇಳಿದ್ದಾರೆ. ಶೇ. 2.75 ರಷ್ಟು ತುಟ್ಟಿ ಭತ್ಯೆ ಹೆಚ್ಚಿಸುವ ನಿರ್ಧಾರ ಮಾಡಿರುವುದಾಗಿ ಅವರು ಹೇಳಿದ್ದಾರೆ.
"ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಸರ್ಕಾರಿ ಆದೇಶ ಹೊರಡಿಸಲಾಗುವುದು": ಮುಖ್ಯಮಂತ್ರಿ @BSBommai
— CM of Karnataka (@CMofKarnataka) April 5, 2022
ಇದನ್ನೂ ಓದಿ : ಚಿನ್ನ ಖರೀದಿಗೆ ಇದೇ ಸುವರ್ಣಾವಕಾಶ, ಇಳಿಕೆಯಾಗಿದೆ ಬಂಗಾರದ ಬೆಲೆ .!
ರಾಜ್ಯ ಸರ್ಕಾರದ ಈ ನಿರ್ಧಾರದಿಂದ ರಾಜ್ಯ ಸರಕಾರಿ ನೌಕರರ ವೇತನ ಹೆಚ್ಚಾಗಲಿದೆ (Govt employee salary). ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸುವ ನಿರ್ಧಾರದೊಂದಿಗೆ ಸರ್ಕಾರ 1447 ಕೋಟಿ ರೂ. ವೆಚ್ಚ ಮಾಡಲಿದೆ. ಅಂದರೆ ಸರ್ಕಾರದ ಮೇಲೆ 1447 ಕೋಟಿ ರೂ. ಗಳ ಹೆಚ್ಚುವರಿ ಹೊರೆ ಬೀಳಲಿದೆ. ತುಟ್ಟಿ ಭತ್ಯೆ ಹೆಚ್ಚಳದ ಬಗ್ಗೆ ಶೀಘ್ರ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.
ಇದನ್ನೂ ಓದಿ : PM Free Silai Machine Yojana: ಸರ್ಕಾರದಿಂದ ಉಚಿತವಾಗಿ ಹೊಲಿಗೆ ಯಂತ್ರ ಪಡೆಯಲು ಇಲ್ಲಿದೆ ಸುಲಭ ಮಾರ್ಗ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.