'ಮಾತಿನಮನೆಯಲ್ಲಿ "ಲಂಕಾಸುರ'

ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು,"ಲಂಕಾಸುರ"ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು.

Written by - Zee Kannada News Desk | Last Updated : Apr 6, 2022, 04:00 PM IST
  • ವಿನೋದ್ ಪ್ರಭಾಕರ್ (Vinod Prabhakar) ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ.
'ಮಾತಿನಮನೆಯಲ್ಲಿ "ಲಂಕಾಸುರ'    title=

ಬೆಂಗಳೂರು: ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು,"ಲಂಕಾಸುರ"ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು.

ವಿನೋದ್ ಪ್ರಭಾಕರ್ (Vinod Prabhakar) ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ.ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ.ಒಂದು ಸಾಹಸ ಸನ್ನಿವೇಶ ಮಾತ್ರ ಬಾಕಿಯಿದೆ.ಈ ಸಾಹಸ ದೃಶ್ಯಕ್ಕಾಗಿ ವಿನೋದ್ ಹತ್ತು ಕೆಜಿ ತೂಕ ಇಳಿಸಿಕೊಳ್ಳುತ್ತಿದಾರಂತೆ.

ಇದನ್ನೂ ಓದಿ: IPL 2022: ತೀವ್ರ ಕುತೂಹಲ ಕೆರಳಿಸಿದ ಎಂ.ಎಸ್.ಧೋನಿ – ಗೌತಮ್ ಗಂಭಿರ್ ಭೇಟಿ! 

ಈ ಹಿಂದೆ "ಮೂರ್ಕಲ್ ಎಸ್ಟೇಟ್" ಎಂಬ ಚಿತ್ರ ನಿರ್ದೇಶಿಸಿದ್ದ ಪ್ರಮೋದ್ ಕುಮಾರ್ ಈ ಚಿತ್ರದ ನಿರ್ದೇಶಕರು.ಚಿತ್ರದಲ್ಲಿ ಐದು ಸಾಹಸ ಸನ್ನಿವೇಶಗಳಿದೆ.ಡಿಫರೆಂಟ್ ಡ್ಯಾನಿ, ವಿನೋದ್, ಚೇತನ್ ಡಿಸೋಜ, ಅರ್ಜುನ್ ರಾಜ್ ಈ ಚಿತ್ರದ ಸಾಹಸ ನಿರ್ದೇಶಕರು. 

ವಿಜೇತ್ ಕೃಷ್ಣ ಸಂಗೀತ ನಿರ್ದೇಶನ, ಸುಜ್ಞಾನ್ ಛಾಯಾಗ್ರಹಣ, ಮುರಳಿ, ಮೋಹನ್ ಅವರ ನೃತ್ಯ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

ಇದನ್ನೂ ಓದಿ: IPL 2022, CSK vs PBKS: ಕಿಂಗ್ಸ್‌ಗಳ ಕದನದಲ್ಲಿ ಯಾರಿಗೆ ಸಿಗುತ್ತೆ ಗೆಲುವು..?

ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪಾರ್ವತಿ ಅರುಣ್ ನಟಿಸಿದ್ದಾರೆ. ಮೊದಲ ಬಾರಿಗೆ ಲೂಸ್ ಮಾದ ಯೋಗಿ ವಿನೋದ್ ಪ್ರಭಾಕರ್ ಅವರೊಂದಿಗೆ ನಟಿಸಿದ್ದಾರೆ. ಹಿರಿಯ ನಟರಾದ ದೇವರಾಜ್ ಹಾಗೂ ರವಿಶಂಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News