ಬೆಂಗಳೂರು: ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿದ್ದಾರೆ.
ಈ ಕುರಿತಾಗಿ ಸರಣಿ ಟ್ವೀಟ್ ಮಾಡುವ ಮೂಲಕ ಅವರು ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ನಾನು ಪ್ರಭಾಸ್ ಅಲ್ಲ, ಯಶ್..! ಅಭಿಮಾನಿ ಪ್ರಶ್ನೆಗೆ ಯಶ್ ಖಡಕ್ ಉತ್ತರ..!
ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಕಳೆದ 75 ವರ್ಷಗಳಿಂದ ಒಂದೇ ತಾಯಿಯ ಮಕ್ಕಳಂತೆ ಇರುವ ರಾಜ್ಯಗಳ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹುಳಿ ಹಿಂಡಿ, ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡುತ್ತಿರುವುದು ಆಘಾತಕಾರಿ.
ಪ್ರತಿಯೊಂದಕ್ಕೂ ಹಿಂದುತ್ವದ ಜಪ ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ಸಮಾಜ ಮತ್ತು ಜನರನ್ನು ಒಡೆಯುತ್ತಿರುವ ಬಿಜೆಪಿ, ಈಗ ಭಾಷೆಯನ್ನೂ ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ.
ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲ ಇದೆ. 4/4#ಕನ್ನಡನಾಡಿನಲ್ಲಿ_ಕನ್ನಡವೇ_ಮೊದಲು
— H D Kumaraswamy (@hd_kumaraswamy) April 9, 2022
ಇದನ್ನೂ ಓದಿ: 'ಕೆಜಿಎಫ್-2' ಬಗ್ಗೆ ಹಗುರವಾಗಿ ಮಾತನಾಡಿದ್ರಾ ಬಾಲಿವುಡ್ ನಟ ಶಾಹಿದ್ ಕಪೂರ್..!
ಬ್ರಿಟಿಷರು ಪ್ರತಿ ಸಂಸ್ಥಾನವನ್ನು ಆಕ್ರಮಿಸಿಕೊಳ್ಳುವ ಮುನ್ನ ಒಡೆದು ಆಳುವ ನೀತಿ ಅನುಸರಿಸುತ್ತಿದ್ದರು.ಈಗ ಬಿಜೆಪಿ ಅದೇ ನೀತಿ ಮುಂದುವರೆಸಿದ್ದು, ಬ್ರಿಟೀಷರಿಗೂ ಮತ್ತು ಬಿಜೆಪಿಗೆ ಯಾವುದೇ ವ್ಯತ್ಯಾಸ ಇಲ್ಲ ಎನ್ನುವುದಕ್ಕೆ ಇದೇ ಜೀವಂತ ಸಾಕ್ಷಿ
ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲ ಇದೆ ಎಂದು ಅವರು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.