ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಭಷ್ಟಾಚಾರ ಪ್ರಕರಣ(National Herald Corruption Case)ಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಇಂದು ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗಿದ್ದಾರೆ.
ಇದನ್ನು ಓದಿ: ರಾಜಧಾನಿ ಖ್ಯಾತಿಯ ಚೇತನ್ ಚಂದ್ರ ʼಸಿ-15ʼ ಸಿನಿಮಾ ಅನೌನ್ಸ್
ನ್ಯಾಷನಲ್ ಹೆರಾಲ್ಡ್ ಭಷ್ಟ್ರಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ(Sonia Gandhi) ಸೇರಿದಂತೆ ಹಲವು ಕಾಂಗ್ರೆಸ್ ನಾಯಕರಿಗೆ ಸಂಕಷ್ಟ ಎದುರಾಗಿದ್ದು, ಇಂದು ಇಡಿ ಮಲ್ಲಿಕಾರ್ಜುನ ಖರ್ಗೆಯವರನ್ನು ವಿಚಾರಣೆಗೆ ಒಳಪಡಿಸಿದೆ.
ಇದನ್ನು ಓದಿ: ಹಿಂದೂ ಮುಸ್ಲಿಂರು ಸಹೋದರರಂತೆ ಬಾಳಬೇಕು: ಬಿ.ಎಸ್ ಯಡಿಯೂರಪ್ಪ
ಇನ್ನು ನ್ಯಾಷನಲ್ ಹೆರಾಲ್ಡ್ ಭಷ್ಟ್ರಾಚಾರ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ್ದು, ಅದರಂತೆ ಇಂದು ದೆಹಲಿಯ ಇಡಿ ಕಚೇರಿಗೆ ಮಲ್ಲಿಕಾರ್ಜುನ ಖರ್ಗೆ ತೆರಳಿದ್ದಾರೆ.
ಏನಿದು ಪ್ರಕರಣ: ಮಲ್ಲಿಕಾರ್ಜುನ ಖರ್ಗೆ ಗಾಂಧಿ ಕುಟುಂಬದ ಆಪ್ತ ಬಳಗದಲ್ಲಿರುವ ಮುಖಂಡ ಹಾಗೂ ಯಂಗ್ ಇಂಡಿಯಾ ಲಿಮಿಟೆಡ್ ಟ್ರಸ್ಟಿ. ಯಂಗ್ ಇಂಡಿಯ ಲಿಮಿಟೆಡ್ 2011ರಲ್ಲಿ ಸ್ಥಾಪಿತವಾದ ಸಂಸ್ಥೆ. ನಂತರ ಯಂಗ್ ಇಂಡಿಯಾ ಲಿಮಿಟೆಡ್ ನಷ್ಟದಲ್ಲಿದ್ದ ಅಸೋಸಿಯೇಟ್ ಜನರಲ್ಸ್ ಲಿಮಿಟೆಡ್ ಅನ್ನು 9.21 ಕೋಟಿ ರೂಪಾಯಿಗೆ ಖರೀದಿ ಮಾಡಿತ್ತು. ಅಸೋಸಿಯೇಟ್ ಜನರಲ್ಸ್ ಲಿಮಿಟೆಡ್ ಪ್ರಕಟ ಮಾಡುತ್ತಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೂ ಹಣ ವರ್ಗವಾಗಿತ್ತು. ನ್ಯಾಷನಲ್ ಹೆರಾಲ್ಡ್ ಹೌಸ್ ನವೀಕರಣಕ್ಕೆ 1 ಕೋಟಿ ರೂಪಾಯಿ ಖರ್ಚು ಮಾಡಲಾಗಿತ್ತು. ಇದರಲ್ಲಿ ಅಕ್ರಮವಾಗಿದೆ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.