SRH vs GT, IPL 2022: ಗುಜರಾತ್ ಟೈಟಾನ್ಸ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕುತ್ತಾ ಹೈದರಾಬಾದ್?

ಬಲಿಷ್ಠ ತಂಡಗಳಿಗೆ ಮಣ್ಣುಮುಕ್ಕಿಸಿರುವ ಹೊಸ ತಂಡ ಗುಜರಾತ್ ಇದೀಗ ಮತ್ತೊಂದು ಗೆಲುವಿನ ಉತ್ಸಾಹದಲ್ಲಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡವು ಉತ್ತಮ ಬ್ಯಾಟಿಂಗ್ ಮತ್ತು ಬೌಲಿಂಗ್ ಪಡೆಯನ್ನು ಹೊಂದಿದೆ.

Written by - Puttaraj K Alur | Last Updated : Apr 11, 2022, 04:08 PM IST
  • ಇಂದು ಸನ್‍ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ಸೆಣಸಾಟ
  • ಬಲಿಷ್ಠ ತಂಡಗಳಿಗೆ ಮಣ್ಣುಮುಕ್ಕಿಸಿ ಗೆಲುವಿನ ಉತ್ಸಾಹದಲ್ಲಿರುವ ಹಾರ್ದಿಕ್ ಪಾಂಡ್ಯ ಪಡೆ
  • ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿರುವ ಕೇನ್ ವಿಲಿಯಮ್ಸನ್ ನೇತೃತ್ವದ ಬಳಗ
SRH vs GT, IPL 2022: ಗುಜರಾತ್ ಟೈಟಾನ್ಸ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕುತ್ತಾ ಹೈದರಾಬಾದ್? title=
ಹೈದರಾಬಾದ್ ಮತ್ತು ಗುಜರಾತ್ ಸೆಣಸಾಟ

ಮುಂಬೈ: 15ನೇ ಆವೃತ್ತಿಯ ಐಪಿಎಲ್ ಟೂರ್ನಿಯ 21ನೇ ಪಂದ್ಯದಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಸನ್‍ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗುತ್ತಿವೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ತಂಡವು ತಾನಾಡಿರುವ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಕಳೆದ ಪಂದ್ಯದಲ್ಲಿ ಗುಜರಾತ್ ರೋಚಕ ಗೆಲುವು ಸಾಧಿಸಿತ್ತು. ಕೊನೆಯ 2 ಎಸೆತಗಳನ್ನು ಸಿಕ್ಸರ್ ಗೆ ಅಟ್ಟುವ ಮೂಲಕ ರಾಹುಲ್ ತೇವಾಟಿಯಾ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.

ಬಲಿಷ್ಠ ತಂಡಗಳಿಗೆ ಮಣ್ಣುಮುಕ್ಕಿಸಿರುವ ಹೊಸ ತಂಡ ಗುಜರಾತ್ ಇದೀಗ ಮತ್ತೊಂದು ಗೆಲುವಿನ ಉತ್ಸಾಹದಲ್ಲಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡವು ಉತ್ತಮ ಬ್ಯಾಟಿಂಗ್ ಮತ್ತು ಬೌಲಿಂಗ್ ಪಡೆಯನ್ನು ಹೊಂದಿದೆ. ಮ್ಯಾಥ್ಯೂ ವೇಡ್, ಶುಭಮನ್ ಗಿಲ್, ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ ಗುಜರಾತ್ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಬಲ ತುಂಬಲಿದ್ದಾರೆ. ಅದೇ ರೀತಿ ರಶೀದ್ ಖಾನ್, ಲಾಕಿ ಫರ್ಗುಸನ್, ಮೊಹಮ್ಮದ್ ಶಮಿ, ಜಯಂತ್ ಯಾದವ್, ವಿಜಯ್ ಶಂಕರ್, ವರುಣ್ ಆರೋನ್, ವೃದ್ಧಿಮಾನ್ ಸಹಾ ಮುಂತಾದವರು ಬೌಲಿಂಗ್ ವಿಭಾಗಕ್ಕೆ ಬಲ ತುಂಬಲಿದ್ದಾರೆ. ಎಲ್ಲಾ ವಿಭಾಗಳಲ್ಲಿಯೂ ಬಲಿಷ್ಠವಾಗಿರುವ ಗುಜರಾತ್ ತಂಡ ಗೆಲುವಿನ ನಿರೀಕ್ಷೆಯಲ್ಲಿದೆ.

ಇದನ್ನೂ ಓದಿ: ಬಸ್ ನಂಬರ್ 315 ರ ಹಿಂದಿನ ಸ್ಪೂರ್ತಿದಾಯಕ ಕಥೆ ಹೇಳಿದ ಸಚಿನ್..!

ಇನ್ನು ಕಳೆದ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಸನ್‍ರೈಸರ್ಸ್ ಹೈದರಾಬಾದ್ ಪ್ರಸಕ್ತ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿದೆ. 4 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 8 ವಿಕೆಟ್‍ಗಳಿಂದ ಮಣಿಸುವ ಮೂಲಕ ಹೈದರಾಬಾದ್ ಮೊದಲ ಗೆಲುವು ದಾಖಲಿಸಿತು. ತಾನಾಡಿರುವ 3 ಪಂದ್ಯಗಳಲ್ಲಿ 2 ಸೋಲು ಕಂಡಿರುವ ಹೈದರಾಬಾದ್ ತಂಡವು ಗುಜರಾತ್‍ಗೆ ಹೇಗೆ ಸವಾಲು ಒಡ್ಡಲಿದೆ ಅನ್ನೋದು ಕುತೂಹಲ ಮೂಡಿಸಿದೆ. ಗುಜರಾತ್ ವಿರುದ್ಧ ಹೈದರಾಬಾದ್ ಗೆಲುವು ದಾಖಲಿಸಿದರೆ ಪಾಯಿಂಟ್ಸ್ ಪಟ್ಟಿಯಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಉತ್ತಮಪಡಿಸಿಕೊಳ್ಳಲಿದೆ.

ನಾಯನ ಕೇನ್ ವಿಲಿಯಮ್ಸನ್, ನಿಕೋಲಸ್ ಪೂರನ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಂ, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಮಾರ್ಕೊ ಜಾನ್ಸೆನ್, ಉಮ್ರಾನ್ ಮಲಿಕ್, ಟಿ ನಟರಾಜನ್, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್ ಮುಂತಾದ ಯುವ ಆಟಗಾರರನ್ನು ಹೊಂದಿರುವ ಹೈದರಾಬಾದ್ ಗೆಲುವಿನ ನಿರೀಕ್ಷೆಯಲ್ಲಿದೆ. ಬಲಿಷ್ಠ ಗುಜರಾತ್‍ಗೆ ವಿಲಯಮ್ಸನ್ ಪಡೆ ಹೇಗೆ ಸವಾಲು ಒಡ್ಡಲಿದೆ ಅನ್ನೋದರ ಮೇಲೆ ಪಂದ್ಯದ ಫಲಿತಾಂಶವು ನಿರ್ಧಾರವಾಗಲಿದೆ.

ಇದನ್ನೂ ಓದಿ: RCB Vs MI : ಮುಂಬೈ ತಂಡಕ್ಕೆ ಶತ್ರುವಾಗಲಿದ್ದಾನೆ RCB ಈ ಆಟಗಾರ : ಹೈ ಅಲರ್ಟ್ ಅಲ್ಲಿ ರೋಹಿತ್ ಆರ್ಮಿ 

ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:

ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ನಾಯಕ), ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡೆನ್ ಮರ್ಕ್ರಂ, ಅಬ್ದುಲ್ ಸಮದ್, ರೊಮಾರಿಯೋ ಶೆಫರ್ಡ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಟಿ.ನಟರಾಜನ್, ಉಮ್ರಾನ್ ಮಲಿಕ್, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಜಿ.ಶಶಾಂಕ್ ಸಿಂಗ್, ರವಿಕುಮಾರ್ ಸಮರ್ಥ್, ವಿಷ್ಣು ವಿನೋದ್, ಪ್ರಿಯಂ ಗರ್ಗ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ, ಮಾರ್ಕೊ ಜಾನ್ಸೆನ್, ಸೌರಭ್ ದುಬೆ

ಗುಜರಾತ್ ಟೈಟಾನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಶುಭಮನ್ ಗಿಲ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್ ಸದಾರಂಗನಿ, ರಶೀದ್ ಖಾನ್, ಲಾಕಿ ಫರ್ಗುಸನ್, ವರುಣ್ ಆರೋನ್, ಮೊಹಮ್ಮದ್ ಶಮಿ, ವೃದ್ಧಿಮಾನ್ ಸಹಾ, ಜಯಂತದೀಪ್ ಸಂಗ್ವಾನ್, ಗುರುಕೀರತ್ ಸಿಂಗ್ ಮಾನ್, ಅಲ್ಜಾರಿ ಜೋಸೆಫ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ದರ್ಶನ್ ನಲ್ಕಂಡೆ, ರಹಮಾನುಲ್ಲಾ ಗುರ್ಬಾಜ್, ಡೊಮಿನಿಕ್ ಡ್ರೇಕ್ಸ್, ಸಾಯಿ ಸುದರ್ಶನ್, ಯಶ್ ದಯಾಳ್, ನೂರ್ ಅಹ್ಮದ್

ಐಪಿಎಲ್‌ ಪಂದ್ಯ: 21

ಗುಜರಾತ್ ಟೈಟಾನ್ಸ್ vs ಸನ್‌ರೈಸರ್ಸ್ ಹೈದರಾಬಾದ್

ದಿನಾಂಕ: ಏಪ್ರಿಲ್ 11, ಸೋಮವಾರ

ಸ್ಥಳ: ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ

ಸಮಯ: ಸಂಜೆ 7.30ಕ್ಕೆ

===================================================================================

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News