ನವದೆಹಲಿ: ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ ಮತ್ತು ವಿರೋಧ ಪಕ್ಷದ ಪಿಎಂಎಲ್-ಎನ್ ನಾಯಕ ಶೆಹಬಾಜ್ ಷರೀಫ್ ಅವರು ಪಾಕಿಸ್ತಾನದ ಮುಂದಿನ ಪ್ರಧಾನಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಾಕ್ ಪ್ರಧಾನಿಯಾಗಿ ಶಹಬಾಜ್ ಷರೀಫ್ ಆಯ್ಕೆಯಾಗಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿ ಟ್ವೀಟ್ ಮಾಡಿದ್ದರು.
ಪ್ರಧಾನಿ ಮೋದಿಯವರು ತಮ್ಮನ್ನು ಅಭಿನಂದಿಸಿದ್ದಕ್ಕಾಗಿ ಶಹಬಾಜ್ ಷರೀಫ್ ಅವರು ಸಹ ಟ್ವೀಟ್ ಮಾಡಿ ಧನ್ಯವಾದ ತಿಳಿಸಿದ್ದಾರೆ. ‘ಪಾಕಿಸ್ತಾನವು ಭಾರತದೊಂದಿಗೆ ಶಾಂತಿಯುತ ಮತ್ತು ಸಹಕಾರ ಸಂಬಂಧವನ್ನು ಬಯಸುತ್ತದೆ’ ಎಂದು ಅವರು ಹೇಳಿದ್ದಾರೆ.’ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಬಾಕಿ ಉಳಿದಿರುವ ವಿವಾದಗಳನ್ನು ಶಾಂತಿಯುತವಾಗಿ ಪರಿಹರಿಸುವುದು ಬಹಳ ಮುಖ್ಯ’ ಎಂದು ಅವರು ಇದೇ ವೇಳೆ ಒತ್ತಿ ಹೇಳಿದ್ದಾರೆ.
ಇದನ್ನೂ ಓದಿ: Viral Video: ಜೀವನದಲ್ಲಿಯೇ ನೀವು ಈ ರೀತಿಯ ಕಾರ್ ಪಾರ್ಕಿಂಗ್ ನೋಡಿರುವುದಿಲ್ಲ..!
ಪ್ರಧಾನಿ ಮೋದಿಯವರಿಗೆ ಕೃತಜ್ಞತೆ
Thank you Premier Narendra Modi for felicitations. Pakistan desires peaceful & cooperative ties with India. Peaceful settlement of outstanding disputes including Jammu & Kashmir is indispensable. Pakistan's sacrifices in fighting terrorism are well-known. Let's secure peace and.. https://t.co/0M1wxhhvjV
— Shehbaz Sharif (@CMShehbaz) April 12, 2022
ಪ್ರಧಾನಿ ಮೋದಿಯವರ ಅಭಿನಂದನಾ ಸಂದೇಶಕ್ಕೆ ಪ್ರತಿಕ್ರಿಯಿಸಿರುವ ಷರೀಫ್, ‘ಪಾಕಿಸ್ತಾನವು ಭಾರತದೊಂದಿಗೆ ಶಾಂತಿಯುತ ಮತ್ತು ಸಹಕಾರಿ ಸಂಬಂಧವನ್ನು ಬಯಸುತ್ತದೆ. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಬಾಕಿ ಇರುವ ವಿವಾದಗಳನ್ನು ಶಾಂತಿಯುತವಾಗಿ ಪರಿಹರಿಸುವುದು ಬಹಳ ಮುಖ್ಯ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನದ ತ್ಯಾಗ ಎಲ್ಲರಿಗೂ ತಿಳಿದಿದೆ. ನಾವು ಶಾಂತಿಯನ್ನು ಖಚಿತಪಡಿಸಿಕೊಳ್ಳೋಣ ಮತ್ತು ನಮ್ಮ ಜನರ ಸಾಮಾಜಿಕ-ಆರ್ಥಿಕ ಅಭಿವೃದ್ಧಿಯತ್ತ ಗಮನಹರಿಸೋಣ’ವೆಂದು ಟ್ವೀಟ್ ಮಾಡಿದ್ದಾರೆ.
ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾದ 70 ವರ್ಷದ ಶಹಬಾಜ್ ಷರೀಫ್ ಅವರನ್ನು ಸೋಮವಾರ ಅಭಿನಂದಿಸಿದ್ದ ಪ್ರಧಾನಿ ಮೋದಿ, ‘ಭಯೋತ್ಪಾದನೆ ಮುಕ್ತವಾಗಿರುವ ಪ್ರದೇಶದಲ್ಲಿ ಭಾರತವು ಶಾಂತಿ ಮತ್ತು ಸ್ಥಿರತೆಯನ್ನು ಬಯಸುತ್ತದೆ. ಇದರಿಂದ ನಾವು ನಮ್ಮ ಅಭಿವೃದ್ಧಿ ಸವಾಲುಗಳು ಮತ್ತು ಸಮಸ್ಯೆಗಳ ಬಗ್ಗೆ ಗಮನ ಹರಿಸಬಹುದು. ನಮ್ಮ ಜನರ ಯೋಗಕ್ಷೇಮ ಮತ್ತು ಸಮೃದ್ಧಿಯ ದೃಷ್ಟಿಯಿಂದ ನಾವು ಯೋಚಿಸಬೇಕಾಗಿದೆ’ ಎಂದು ತಿಳಿಸಿದ್ದರು.
ಇದನ್ನೂ ಓದಿ: Shanghai Lockdown: ಕೊರೊನಾ ಲಾಕ್ಡೌನ್ ನಲ್ಲಿ ಮನೆಯಲ್ಲಿ ಬಂಧಿಯಾದ ಜನರ ಕಿರುಚಾಟ, Viral Video
ಕಾಶ್ಮೀರದ ವಿಷಯ ಪ್ರಸ್ತಾಪ
ಸೋಮವಾರದ ತಮ್ಮ ಮೊದಲ ಭಾಷಣದಲ್ಲಿ ಶಹಬಾಜ್ ಷರೀಫ್, ‘ಕಾಶ್ಮೀರದಿಂದ 370ನೇ ವಿಧಿಯನ್ನು ರದ್ದುಗೊಳಿಸಿರುವ ವಿಷಯವನ್ನು ಪ್ರಸ್ತಾಪಿಸಿದ್ದರು. ಕಣಿವೆ ರಾಜ್ಯದಲ್ಲಿ ಜನರ ರಕ್ತ ಹರಿಯುತ್ತಿದ್ದು, ಪಾಕಿಸ್ತಾನವು ಅವರಿಗೆ ರಾಜತಾಂತ್ರಿಕ ಮತ್ತು ನೈತಿಕ ಬೆಂಬಲವನ್ನು ನೀಡುತ್ತಿದೆ. ಪ್ರತಿ ಅಂತಾರಾಷ್ಟ್ರೀಯ ವೇದಿಕೆಯಲ್ಲಿಯೂ ಈ ವಿಷಯವನ್ನು ಎತ್ತುತ್ತಿದೆ ಎಂದು ಆರೋಪಿಸಿದ್ದರು.
ಇಮ್ರಾನ್ ಖಾನ್ ಬದಲಿಗೆ ಶಹಬಾಜ್ ಷರೀಫ್ ಅವರು ಭಾರತದೊಂದಿಗೆ ಉತ್ತಮ ಸಂಬಂಧವನ್ನು ಬಯಸುತ್ತಾರೆ. ಆದರೆ ಕಾಶ್ಮೀರ ಸಮಸ್ಯೆಯ ಪರಿಹಾರವಿಲ್ಲದೆ ಅದನ್ನು ಸಾಧಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಷರೀಫ್ ಅವರು 3 ಬಾರಿ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರ ಕಿರಿಯ ಸಹೋದರ. ಪಾಕಿಸ್ತಾನದ 23ನೇ ಪ್ರಧಾನಿಯಾಗಿ ಶಹಬಾಜ್ ಷರೀಫ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.