GT vs RR: ಗೆಲುವಿನ ಹಾದಿಗೆ ಮರಳಲು ಪಣತೊಟ್ಟ ಟೈಟಾನ್ಸ್‌ಗೆ ರಾಯಲ್ಸ್‌ ಚಾಲೆಂಜ್‌!

ರಾಜಸ್ಥಾನ್ ರಾಯಲ್ಸ್ ತಂಡವನ್ನು ಸಂಜು ಸ್ಯಾಮ್ಸನ್ ಮುನ್ನಡೆಸುತ್ತಿದ್ದರೆ, ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಈ ಎರಡು ತಂಡಗಳು ಲೀಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಇಂದಿನ ಹಣಾಹಣಿ ಸಾಕಷ್ಟು ಕುತೂಹಲ ಮೂಡಿಸಿದೆ.

Written by - Bhavishya Shetty | Last Updated : Apr 14, 2022, 01:52 PM IST
  • ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ಪಂದ್ಯ
  • ಮಹಾರಾಷ್ಟ್ರದ ಡಿವೈ ಪಾಟೀಲ್‌ ಕ್ರೀಡಾಂಗಣದಲ್ಲಿ ಪಂದ್ಯ
  • ಎರಡೂ ತಂಡಗಳು ಭರ್ಜರಿ ಪ್ರದರ್ಶನ ನೀಡುವ ನಿರೀಕ್ಷೆ
GT vs RR: ಗೆಲುವಿನ ಹಾದಿಗೆ ಮರಳಲು ಪಣತೊಟ್ಟ ಟೈಟಾನ್ಸ್‌ಗೆ ರಾಯಲ್ಸ್‌ ಚಾಲೆಂಜ್‌!  title=
IPL 2022

ಬೆಂಗಳೂರು: ಐಪಿಎಲ್‌ನ 24 ನೇ ಪಂದ್ಯ ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಲಿದೆ. ಮಹಾರಾಷ್ಟ್ರದ ಡಿವೈ ಪಾಟೀಲ್‌ ಕ್ರೀಡಾಂಗಣದಲ್ಲಿ ಇಂದು ನಡೆಯಲಿರುವ ಪಂದ್ಯಾಟದಲ್ಲಿ ಎರಡೂ ತಂಡಗಳು ಭರ್ಜರಿ ಪ್ರದರ್ಶನ ನೀಡುವ ಭರವಸೆಯಿದೆ. 

ಇದನ್ನು ಓದಿ: ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ: ಡಿಕೆಶಿ, ಸುರ್ಜೇವಾಲ ವಶಕ್ಕೆ

ರಾಜಸ್ಥಾನ್ ರಾಯಲ್ಸ್ ತಂಡವನ್ನು ಸಂಜು ಸ್ಯಾಮ್ಸನ್ ಮುನ್ನಡೆಸುತ್ತಿದ್ದರೆ, ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಈ ಎರಡು ತಂಡಗಳು ಲೀಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದು, ಇಂದಿನ ಹಣಾಹಣಿ ಸಾಕಷ್ಟು ಕುತೂಹಲ ಮೂಡಿಸಿದೆ. ಪ್ರಸ್ತುತ ರಾಜಸ್ಥಾನ್ ರಾಯಲ್ಸ್ ತಂಡ ನಾಲ್ಕು ಪಂದ್ಯಗಳಲ್ಲಿ ಮೂರು ಗೆಲುವು ಸಾಧಿಸಿದ್ದು ಅಗ್ರಸ್ಥಾನದಲ್ಲಿದೆ. ಇನ್ನು ಗುಜರಾತ್ ಟೈಟಾನ್ಸ್ ತಂಡ ಕೂಡ ಆಡಿದ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆಲುವು ಸಾಧಿಸಿದೆ. ಆದರೆ ನೆಟ್‌ರನ್‌ರೇಟ್‌ನಲ್ಲಿ ಹಿಂದುಳಿದಿರುವ ಕಾರಣ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ. 

ಇದನ್ನು ಓದಿ: ಕ್ರಿಕೆಟ್‌ನಿಂದ ಹೊರಗುಳಿದ ದೀಪಕ್ ಚಾಹರ್ : ಟಿ20 ವಿಶ್ವಕಪ್ ಆಡುವುದು ಕೂಡ ಕಷ್ಟ

ಕಳೆದ ಬಾರಿ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧ ಗುಜರಾತ್‌ ಟೈಟಾನ್ಸ್‌ ತಂಡ ಸೋಲನ್ನು ಅನುಭವಿಸಿತ್ತು. ಈಗ ಬಲಿಷ್ಠ ಆಟಗಾರರ ಪಡೆಯನ್ನು ಹೊಂದಿರುವ ರಾಜಸ್ಥಾನ ರಾಯಲ್ಸ್ ವಿರುದ್ಧ ಕಣಕ್ಕಿಳಿಯುತ್ತಿದ್ದು, ಸಾಕಷ್ಟು ಪೈಪೋಟಿ ಎದುರಿಸಲಿದೆ. ಗುಜರಾತ್‌ ಟೈಟಾನ್ಸ್‌ ಪಡೆಯಲ್ಲಿ ಲೂಕಿ ಫರ್ಗ್ಯೂಸನ್ ಹಾಗೂ ಮೊಹಮ್ಮದ್ ಶಮಿ ಇದ್ದರೆ ಟ್ರೆಂಟ್ ಬೋಲ್ಟ್ ಹಾಗೂ ಪ್ರಸೀದ ಕೃಷ್ಣ ರಾಜಸ್ಥಾನ್ ರಾಯಲ್ಸ್ ಪರವಾಗಿ ಕಣಕ್ಕಿಳಿಯುತ್ತಿದ್ದಾರೆ. ಇದು ಈ ಎರಡು ತಂಡಗಳ ನಡುವಿನ ಕದನ ಕುತೂಹಲವನ್ನು ಹೆಚ್ಚಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News