"ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ"

ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಅಳವಡಿಕೆ ಮಾಡಲಾಗುವುದು. ಇದರಲ್ಲಿ ಭಗವದ್ಗೀತೆ, ಪಂಚತಂತ್ರ ಕಥೆಗಳು, ಮಹಾಭಾರತ ಎಲ್ಲವೂ ಭಾಗವಾಗಿರಲಿದೆ. 

Written by - Bhavishya Shetty | Last Updated : Apr 19, 2022, 01:34 PM IST
  • ಪಠ್ಯದಲ್ಲಿ ನೈತಿಕ ಶಿಕ್ಷಣ ಅಳವಡಿಕೆ
  • ಟಿಪ್ಪು ಸುಲ್ತಾನ್ ಸಂಗತಿ ಪಠ್ಯದಲ್ಲಿ ಪರಿಷ್ಕರಣೆ
  • ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿಕೆ
"ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ" title=
BC Nagesh

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಏಪ್ರಿಲ್‌ 22ರಿಂದ ನಡೆಯಲಿದ್ದು, ಹಿಜಾಬ್ ಸೇರಿ ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟವಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಪ್ರದೇಶದಲ್ಲಿ 144 ಸೆಕ್ಷನ್ ವಿಧಿಸಲು ಸೂಚನೆ ನೀಡಿದ್ದಾರೆ. 

ಇದನ್ನು ಓದಿ: ಮದರಸದಲ್ಲಿ ಶಿಕ್ಷಣ ಇಲಾಖೆಯ ಪಠ್ಯ ಬೇಡಿಕೆ.. ಆಧಾರವಿಲ್ಲದ ಟಿಪ್ಪು ಸಂಗತಿಗಳಿಗೆ ಕೊಕ್!

ಪಠ್ಯದಲ್ಲಿ ನೈತಿಕ ಶಿಕ್ಷಣ ಅಳವಡಿಕೆ: 
ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯದಲ್ಲಿ ನೈತಿಕ ಶಿಕ್ಷಣ ಅಳವಡಿಕೆ ಮಾಡಲಾಗುವುದು. ಇದರಲ್ಲಿ ಭಗವದ್ಗೀತೆ, ಪಂಚತಂತ್ರ ಕಥೆಗಳು, ಮಹಾಭಾರತ ಎಲ್ಲವೂ ಭಾಗವಾಗಿರಲಿದೆ. ಯಾವ ವಿಚಾರ ಮಕ್ಕಳ ನೈತಿಕತೆ ಹೆಚ್ಚು ಮಾಡುತ್ತವೆಯೋ ಅಂತಹ ವಿಚಾರಗಳನ್ನು ಅಳವಡಿಸುತ್ತೇವೆ ಎಂದು ಹೇಳಿದರು. 

ವಿಧಾನಸೌಧದಲ್ಲಿ ‌ಮಾತನಾಡಿದ ಅವರು ಶಿಕ್ಷಣವನ್ನು ಯಾವುದೇ ಧರ್ಮಕ್ಕೆ ಸೀಮಿತ ಮಾಡುವುದಿಲ್ಲ. ಯಾವ ಉತ್ತಮ ಅಂಶ ನಮ್ಮ ಮಕ್ಕಳಿಗೆ ಒಳ್ಳೆಯದು ಮಾಡುತ್ತದೆಯೋ ಅದು ಯಾವುದೇ ಧರ್ಮದ್ದಾಗಿರಲಿ, ಅವುಗಳನ್ನು ಅಳವಡಿಕೆ ಮಾಡುತ್ತೇವೆ. ಯಾವ ಧರ್ಮದ ಮಕ್ಕಳು ಹೆಚ್ಚಿನ‌ ಸಂಖ್ಯೆಯಲ್ಲಿ ನಮ್ಮ ಶಾಲೆಗಳಿಗೆ ಬರುತ್ತಾರೋ ಆ ಮಕ್ಕಳು ಕೇಳುವಂತಹ ವಿಚಾರಗಳನ್ನು ಅಳವಡಿಸುತ್ತೇವೆ. ಶೇ.90ರಷ್ಟು ಮಕ್ಕಳು ಯಾರು ಇರುತ್ತಾರೋ ಆ ಧರ್ಮದ ಅಂಶಗಳು ಹೆಚ್ಚು ಇರುತ್ತವೆ. ಇದು ಅನಿವಾರ್ಯ ಎಂದರು. 

ಟಿಪ್ಪು ಸುಲ್ತಾನ್ ಸಂಗತಿ ಪಠ್ಯದಲ್ಲಿ ಪರಿಷ್ಕರಣೆ:
ಟಿಪ್ಪು ಬಗ್ಗೆ ಅಪ್ಪಚ್ಚು ರಂಜನ್ ಡಿಮ್ಯಾಂಡ್ ಇದೆ. ಟಿಪ್ಪು ಪಾಠವನ್ನ ಕೈ ಬಿಡಿ ಎಂದು ಹೇಳಿದ್ದಾರೆ. ಕೈ ಬಿಡದೇ ಹೋದರೆ ಅವರ ಎಲ್ಲ ಮುಖ ತೋರಿಸಿ ಎಂದು ಮನವಿ ಮಾಡಿದ್ದಾರೆ. ಜೊತೆಗೆ ಕೂರ್ಗ್ ದೌರ್ಜನ್ಯದ ಬಗ್ಗೆ ಮತ್ತು ಕನ್ನಡ ವಿರೋಧಿತನವನ್ನ ತೋರಿಸಿ ಎಂದಿದ್ದಾರೆ. ಈಗ ಸದ್ಯಕ್ಕೆ ನಾವು ಪಠ್ಯದಲ್ಲಿ ಆಧಾರವಿಲ್ಲದ ಅಂಶಗಳನ್ನ ತೆಗೆದಿದ್ದೇವೆ. ಆದರೆ ಟಿಪ್ಪು ಪಾಠವನ್ನ ನಾವು ತೆಗೆದಿಲ್ಲ ಎಂದರು.

ಮದರಸಾಗಳಲ್ಲಿ ಶಿಕ್ಷಣ ಇಲಾಖೆ ಪಠ್ಯ ಅಳವಡಿಕೆಗೆ ಮನವಿ : 
ಮದರಸಾಗಳಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮ ಅಳವಡಿಕೆಗೆ ಮದರಸಾಗಳಿಂದ ಬೇಡಿಕೆ ಬಂದಿಲ್ಲ. ಆದರೆ, ಪೋಷಕರು ಮದರಸಾ ಶಿಕ್ಷಣದಿಂದ ನಮ್ಮ ಮಕ್ಕಳು ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕಲು ಆಗುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದು ಕಷ್ಟ ಆಗುತ್ತಿದೆ. ಪ್ರೊಫೆಷನಲ್ ಕೋರ್ಸ್ ಪಡೆದುಕೊಳ್ಳುವುದು ಕಷ್ಟ. ಬೇರೆ ಮಕ್ಕಳಿಗೆ ‌ಕೊಟ್ಟ ಹಾಗೆ ಶಿಕ್ಷಣ ಕೊಡಿ ಎಂಬ ಮನವಿ ಮಾಡಿದ್ದಾರೆ ಎಂದರು‌. ಆದರೆ, ಮದರಸಾ ಕಡೆಯಿಂದ ಹಾಗೂ ಅಲ್ಪಸಂಖ್ಯಾತ ಇಲಾಖೆಯಿಂದ ಯಾವುದೇ ಮನವಿ ಬಂದಿಲ್ಲ. ಪೋಷಕರೇನೂ ಅಧಿಕೃತವಾಗಿ ಮನವಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನು ಓದಿ: "ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ"

ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ. ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಈ ಹಿಂದಿನ ಅನುಭವಗಳ ಆಧಾರದಲ್ಲಿ ಸೋರಿಕೆ ತಡೆಗೆ ಕ್ರಮ ವಹಿಸಲಾಗಿದೆ. ಅಕ್ರಮ ತಡೆಯಲು 2,152 ಜಾಗೃತದಳ, 858 ತಾಲೂಕು ಜಾಗೃತ ದಳ ಮತ್ತು 64 ಜಿಲ್ಲಾ ಜಾಗೃತ ದಳ ಕಾರ್ಯ ನಿರ್ವಹಿಸಲಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News