ಬೆಂಗಳೂರು: ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ತಮ್ಮ ವರ್ಗಾವಣೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚರೆ ನಡೆಸಿದ ಹೈಕೋರ್ಟ್, ಹಾಸನ ಜಿಲ್ಲಾಧಿಕಾರಿಯಾಗಿಯೇ ಮುಂದುವರೆಯುವಂತೆ ಆದೇಶಿಸಿದೆ.
ಅಡ್ವೋಕೇಟ್ ಜನರಲ್ ಪೋನ್ನಣ್ಣ ಅವರು ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರೆಸಲು ಸಮ್ಮಿಶ್ರ ಸರ್ಕಾರ ನಿರ್ಧರಿಸಿರುವುದಾಗಿ ಹೈಕೋರ್ಟ್ ವಿಭಾಗಕ್ಕೆ ಮಾಹಿನಿ ನೀಡಿದ್ದ ಹಿನ್ನೆಲೆಯಲ್ಲಿ, ರೋಹಿಣಿ ಸಿಂಧೂರಿ ಅವರನ್ನು ಜಿಲ್ಲಾಧಿಕಾರಿಯಾಗಿ ಮುಂದುವರೆಯುವಂತೆ ಹೈಕೋರ್ಟ್ ಆದೇಶಿಸಿದೆ.
ಏಪ್ರಿಲ್ 17ರಂದು ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿದ್ದ ಅಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರೀಯ ಆಡಳಿತ ನ್ಯಾಯಮಂಡಳಿ(ಸಿಎಟಿ) ಎತ್ತಿ ಹಿಡಿದಿತ್ತು. ಈ ಕ್ರಮವನ್ನು ಪ್ರಶ್ನಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪುನಃ ಹೈಕೋರ್ಟ್ ಮೆಟ್ಟಿಲೇರಿದ್ದರು.