ನವದೆಹಲಿ: ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ಭಾರತದ ವಿದ್ಯಾರ್ಥಿಗಳಿಗೆ ಖಡಕ್ ಎಚ್ಚರಿಕೆ ನೀಡಿದೆ. ಯಾವುದೇ ವಿದ್ಯಾರ್ಥಿಗಳು ಪಾಕಿಸ್ತಾನದಿಂದ ಓದಿದರೆ ಅವರಿಗೆ ಭಾರತದಲ್ಲಿ ಉದ್ಯೋಗ ಸಿಗುವುದಿಲ್ಲವೆಂದು ಸೂಚಿಸಲಾಗಿದೆ.
‘ಭಾರತೀಯ ವಿದ್ಯಾರ್ಥಿಗಳು ಪಾಕಿಸ್ತಾನದ ಯಾವುದೇ ಕಾಲೇಜು ಅಥವಾ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಬಾರದು. ಒಂದು ವೇಳೆ ಹಾಗೆ ಮಾಡಿದರೆ ಅವರು ತಮ್ಮ ದೇಶದಲ್ಲಿ ಅಂದರೆ ಭಾರತದಲ್ಲಿ ಯಾವುದೇ ಉದ್ಯೋಗ ಅಥವಾ ಉನ್ನತ ಶಿಕ್ಷಣಕ್ಕೆ ಅರ್ಹರಾಗಿರುವುದಿಲ್ಲ’ವೆಂದು ಈ ಎರಡೂ ಸಂಸ್ಥೆಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿವೆ.
ಇದನ್ನೂ ಓದಿ: NRI: ಅನಿವಾಸಿ ಭಾರತೀಯರಿಗೆ ಅಂಚೆ ಮತಪತ್ರ ಸೌಲಭ್ಯ ಕಲ್ಪಿಸಲು ಸರ್ಕಾರ ಚಿಂತನೆ
ಯುಜಿಸಿ ಮತ್ತು ಎಐಸಿಟಿಇ ಜಂಟಿ ಪ್ರಕಟಣೆ
UGC & AICTE has advised students not to travel to Pakistan for pursuing higher education. pic.twitter.com/L1vl5XmotQ
— ANI (@ANI) April 23, 2022
ಚೀನಾದ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ ಪಡೆಯುವುದನ್ನು ತಪ್ಪಿಸಲು ಭಾರತೀಯ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ 1 ತಿಂಗಳೊಳಗೆ ಯುಜಿಸಿ ಮತ್ತು ಎಐಸಿಟಿಇ ಜಂಟಿಯಾಗಿ ಈ ಪ್ರಕಟಣೆ ಹೊರಡಿಸಿವೆ. ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಪಾಕಿಸ್ತಾನಕ್ಕೆ ಹೋಗದಂತೆ ಸೂಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ. ಯಾವುದೇ ಭಾರತೀಯ ಪ್ರಜೆ ಅಥವಾ ಭಾರತೀಯ ಮೂಲದ ವಿದೇಶಿ ಪ್ರಜೆ (OIC) ಪಾಕಿಸ್ತಾನದ ಯಾವುದೇ ಕಾಲೇಜು ಅಥವಾ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯಲು ಬಯಸುತ್ತಾರೋ ಅವರು ಪಾಕಿಸ್ತಾನಿ ಪ್ರಮಾಣಪತ್ರದ ಆಧಾರದ ಮೇಲೆ ಭಾರತದಲ್ಲಿ ಉದ್ಯೋಗ ಅಥವಾ ಉನ್ನತ ಶಿಕ್ಷಣಕ್ಕೆ ಅರ್ಹರಾಗಿರುವುದಿಲ್ಲವೆಂದು ತಿಳಿಸಲಾಗಿದೆ.
ಪಾಕಿಸ್ತಾನದಿಂದ ಭಾರತಕ್ಕೆ ಬರುವ ವಿದ್ಯಾರ್ಥಿಗಳಿಗೆ ನಿಯಮ ಅನ್ವಯಿಸಲ್ಲ
‘ಪಾಕಿಸ್ತಾನದಲ್ಲಿ ಶಿಕ್ಷಣವನ್ನು ಪಡೆದಿರುವ ಮತ್ತು ಭಾರತದಿಂದ ಪೌರತ್ವವನ್ನು ಪಡೆದಿರುವ ಸಾಗರೋತ್ತರ ನಾಗರಿಕರು ಹಾಗೂ ಅವರ ಮಕ್ಕಳು ಗೃಹ ಸಚಿವಾಲಯದ ಭದ್ರತಾ ಅನುಮತಿಗೆ ಒಳಪಟ್ಟು ಭಾರತದಲ್ಲಿ ಉದ್ಯೋಗ ಪಡೆಯಲು ಅರ್ಹರಾಗಿರುತ್ತಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ‘ಭಾರತೀಯ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕಾಗಿ ಯಾವ ಸಂಸ್ಥೆಗಳು ಮತ್ತು ದೇಶಗಳಿಗೆ ಭೇಟಿ ನೀಡಬೇಕು ಎಂಬುದರ ಬಗ್ಗೆ ಸರಿಯಾದ ಸಲಹೆ ನೀಡಬೇಕು’ ಎಂದು ಎಐಸಿಟಿಇ ಅಧ್ಯಕ್ಷ ಅನಿಲ್ ಸಹಸ್ರಬುದ್ಧೆ ಹೇಳಿದ್ದಾರೆ.
ಇದನ್ನೂ ಓದಿ: NRI : ಕಮಲಾ ಹ್ಯಾರಿಸ್ ರಕ್ಷಣಾ ಸಲಹೆಗಾರ್ತಿ ಶಾಂತಿ ಸೇಥಿ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಮಾಹಿತಿ
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೋಟಿಸ್ ನೀಡಲಾಗಿದೆ
ಯುಜಿಸಿ ಅಧ್ಯಕ್ಷ ಜಗದೀಶ್ ಕುಮಾರ್ ಮಾತನಾಡಿ, ‘ದೇಶದ ಹೊರಗೆ ಉನ್ನತ ಶಿಕ್ಷಣ ಪಡೆಯಲು ಬಯಸುವ ಭಾರತೀಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಯುಜಿಸಿ ಮತ್ತು ಎಐಸಿಟಿಇ ಇಂತಹ ಸಾರ್ವಜನಿಕ ಪ್ರಕಟಣೆಗಳನ್ನು ಹೊರಡಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ನಮ್ಮ ವಿದ್ಯಾರ್ಥಿಗಳು ವಿದೇಶಕ್ಕೆ ಹೋಗಿ ವ್ಯಾಸಂಗ ಮುಂದುವರಿಸಲಾಗದೆ ಹೇಗೆ ಸಂಕಷ್ಟ ಎದುರಿಸುತ್ತಿದ್ದಾರೆ ಎಂಬುದನ್ನು ನಾವು ನೋಡಿದ್ದೇವೆ. ಉನ್ನತ ಶಿಕ್ಷಣ ಪಡೆಯುವ ವೇಳೆ ಅವರಿಗೆ ಯಾವುದೇ ರೀತಿಯ ಸಮಸ್ಯೆಗಳು ಬರಬಾರದು. ಹೀಗಾಗಿ ಈ ರೀತಿ ನೋಟಿಸ್ ನೀಡಲಾಗಿದೆ’ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.