ಬೆಂಗಳೂರು: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ಉತ್ತರ ಭಾರತದಲ್ಲಿ ಬೇಡಿಕೆ ಹೆಚ್ಚಾಗಿರುವ ಕಾರಣ ಅಡಿಕೆ ಧಾರಣೆ ಮತ್ತಷ್ಟು ಏರಿಕೆ ಸಾಧ್ಯತೆ ಇದೆ. ಇದು ಅಡಿಕೆ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ಕಳೆದ ವಾರದಿಂದ ರಾಶಿ ಅಡಿಕೆ ಬೆಲೆಯಲ್ಲಿ ದಿಢೀರ್ ಏರಿಕೆ ಕಂಡಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ.
ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 54,300 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್(Market)ಗಳಲ್ಲಿ ಇತ್ತೀಚಿನ(30-04-2022)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ.
ಇದನ್ನೂ ಓದಿ: NPS : ಪ್ರತಿದಿನ ₹74 ಹೂಡಿಕೆ ಮಾಡಿ, ನಿವೃತ್ತಿ ನಂತರ ಮಿಲಿಯನೇರ್ ಆಗಿ!
ತಾಲೂಕು |
ಅಡಿಕೆ |
ಗರಿಷ್ಠ ಬೆಲೆ (ಏಪ್ರಿಲ್ 30, 2022) |
ಕೊಪ್ಪ (ಚಿಕ್ಕಮಗಳೂರು ಜಿಲ್ಲೆ) |
ರಾಶಿ ಅಡಿಕೆ |
45,899 ರೂ. |
ಚನ್ನಗಿರಿ (ದಾವಣಗೆರೆ ಜಿಲ್ಲೆ) |
ರಾಶಿ ಅಡಿಕೆ |
49,019 ರೂ. |
ದಾವಣಗೆರೆ (ದಾವಣಗೆರೆ ಜಿಲ್ಲೆ) |
ರಾಶಿ ಅಡಿಕೆ |
48,682 ರೂ. |
ಹೊನ್ನಾಳಿ (ದಾವಣಗೆರೆ ಜಿಲ್ಲೆ) |
ರಾಶಿ ಅಡಿಕೆ |
48,100 ರೂ. |
ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ) |
ರಾಶಿ ಅಡಿಕೆ |
48,599 ರೂ. |
ಶಿರಸಿ (ಉತ್ತರ ಕನ್ನಡ ಜಿಲ್ಲೆ) |
ರಾಶಿ ಅಡಿಕೆ |
50,989 ರೂ. |
ಯಲ್ಲಾಪುರ (ಉತ್ತರ ಕನ್ನಡ ಜಿಲ್ಲೆ) |
ರಾಶಿ ಅಡಿಕೆ |
54,300 ರೂ. |
ಭದ್ರಾವತಿ (ಶಿವಮೊಗ್ಗ ಜಿಲ್ಲೆ) |
ರಾಶಿ ಅಡಿಕೆ |
48,799 ರೂ. |
ಹೊಸನಗರ (ಶಿವಮೊಗ್ಗ ಜಿಲ್ಲೆ) |
ರಾಶಿ ಅಡಿಕೆ |
46,439 ರೂ. |
ಸಾಗರ (ಶಿವಮೊಗ್ಗ ಜಿಲ್ಲೆ) |
ರಾಶಿ ಅಡಿಕೆ |
48,529 ರೂ. |
ಶಿಕಾರಿಪುರ (ಶಿವಮೊಗ್ಗ ಜಿಲ್ಲೆ) |
ರಾಶಿ ಅಡಿಕೆ |
45,900 ರೂ. |
ಶಿವಮೊಗ್ಗ (ಶಿವಮೊಗ್ಗ ಜಿಲ್ಲೆ) |
ರಾಶಿ ಅಡಿಕೆ |
48,798 ರೂ. |
ತೀರ್ಥಹಳ್ಳಿ (ಶಿವಮೊಗ್ಗ ಜಿಲ್ಲೆ) |
ರಾಶಿ ಅಡಿಕೆ |
49,199 ರೂ. |
ತುಮಕೂರು (ತುಮಕೂರು ಜಿಲ್ಲೆ) | ರಾಶಿ ಅಡಿಕೆ | 49,000 ರೂ. |
ಇದನ್ನೂ ಓದಿ: RBI Report: ಕೊವಿಡ್ ಕಾಲದಲ್ಲಿ ಭಾರತೀಯ ಆರ್ಥಿಕತೆಗೆ ಭಾರಿ ಹಾನಿ
ನಿಮ್ಮ Zee Kannada News ವೆಬ್ಸೈಟ್ನಲ್ಲಿ ಪ್ರತಿದಿನವೂ ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿರುವ ಅಡಕೆ ಬೆಲೆಯನ್ನು ಪ್ರಕಟಿಸಲಾಗುವುದು. ಪ್ರತಿದಿನದ ಅಪ್ಡೇಟ್ ಗಳಿಗಾಗಿ Zee Kannada News App ಅನ್ನು ಈಗಲೇ ಡೌನ್ಲೋಡ್ ಮಾಡಿಕೊಳ್ಳಿ…
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.