ಚಿತ್ರದುರ್ಗ: ದಿವಂಗತ ಪವರ್ ಸ್ಟಾರ್ ಡಾ.ಪುನೀತ್ ರಾಜಕುಮಾರ್ ಅವರಿಗೆ ಚಿತ್ರದುರ್ಗ ಮುರುಘಾ ಮಠದಿಂದ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ದಿ. ಪುನೀತ್ ಅವರ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಪುರಸ್ಕಾರವನ್ನು ಸ್ವೀಕರಿಸಿದ್ದಾರೆ.
ಇದನ್ನು ಓದಿ: Google Update - ಬಳಕೆದಾರರಿಗೆ ಭಾರಿ ನೆಮ್ಮದಿಯ ಸುದ್ದಿ ಪ್ರಕಟಿಸಿದ ಗೂಗಲ್ !
ಮುರುಘಾರಾಜೇಂದ್ರ ಮಠದ ಅನುಭವ ಮಂಟಪದಲ್ಲಿ ಇಂದು ನಡೆದ ಬಸವ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಬಸವಶ್ರೀ ಪ್ರಶಸ್ತಿಯು 5 ಲಕ್ಷ ರೂ. ನಗದು ಹಾಗೂ ಪಾರಿತೋಷಕವನ್ನು ಒಳಗೊಂಡಿದೆ. ಮುರುಘಾ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀಶಿವಮೂರ್ತಿ ಮುರುಘಾ ಶರಣರು ಪ್ರಶಸ್ತಿಯನ್ನು ಅಶ್ವಿನಿಯವರಿಗೆ ಪ್ರದಾನ ಮಾಡಿದರು.
ಈ ಬಳಿಕ ಮಾತನಾಡಿದ ಡಾ. ಶ್ರೀಶಿವಮೂರ್ತಿ ಮುರುಘಾ ಶರಣರು, "ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಬಸವಶ್ರೀ ಪ್ರಶಸ್ತಿ ನೀಡುವ ಮೂಲಕ ಅವರ ಇಡೀ ಕುಟುಂಬಕ್ಕೆ ಮಧ್ಯ ಕರ್ನಾಟಕದಿಂದ ಗೌರವಿಸುವ ಕೆಲಸ ಮಾಡಲಾಗಿದೆ. ಡಾ. ರಾಜಕುಮಾರ್ ಅವರ ಮುದ್ದಿನ ಮಗ ಪುನೀತ್, ಬೆಳ್ಳಿ ತೆರೆಯಲ್ಲಿ ಮಿಂಚಿದ ಮಹಾನ್ ಪ್ರತಿಭಾವಂತ. ಅಭಿನಯ, ಅಭಿವ್ಯಕ್ತಿ, ಹಾಡುಗಾರಿಕೆಯಲ್ಲಿ ಅವರು ಪುನೀತ" ಎಂದು ಬಣ್ಣಿಸಿದರು.
ಇದೇ ಸಂದರ್ಭದಲ್ಲಿ ಸಾಹಿತಿ ಡಾ.ರಾಜಪ್ಪ ದಳವಾಯಿ ಮಾತನಾಡಿ, " ಪುನೀತ್ ಅವರ ವಿಚಾರದಲ್ಲಿ ಅಭಿಮಾನ ಎಂದಿಗೂ ಶೂನ್ಯ ಅಲ್ಲ ಎಂಬುದನ್ನು ಈ ನಾಡು ತೋರಿಸಿದೆ. 25 ಲಕ್ಷಕ್ಕೂ ಹೆಚ್ಚು ಜನ ಅವರ ಸಾವಿನಿಂದ ದುಃಖಿತರಾಗಿದ್ದಾರೆ. ಕರ್ನಾಟಕದ ಮಠ ಪರಂಪರೆಯಲ್ಲಿ ಮುರುಘಾ ಮಠ ಎಷ್ಟು ಮುಖ್ಯವೋ, ಕನ್ನಡ ಚಿತ್ರರಂಗಕ್ಕೆ ಡಾ.ರಾಜ್ ಕುಟುಂಬ ಅಷ್ಟೇ ಮುಖ್ಯವಾಗಿದೆ" ಎಂದರು.
ಇದನ್ನು ಓದಿ: Arecanut Today Price: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್, ಚಲನಚಿತ್ರ ನಿರ್ಮಾಪಕ ಚಿನ್ನೇಗೌಡ, ಸಾಹಿತಿ ರಾಜಪ್ಪ ದಳವಾಯಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.