ಹೇಗಿರಲಿದೆ ಗೊತ್ತಾ ಸಮಂತಾರ ʼಯಶೋದ ʼಚಿತ್ರ..! ?

ಶ್ರೀದೇವಿ ಮೂವಿಸ್‌ ಬ್ಯಾನರ್‌ನಲ್ಲಿ ಸಿದ್ಧವಾಗಿರುವ ಯಶೋದ ಸಿನಿಮಾ ಇದೀಗ ಸಣ್ಣ ವಿಡಿಯೋ ತುಣುಕನ್ನು ಹೊರ ತಂದಿದೆ. ನಾಯಕಿ ಪ್ರಧಾನ ಈ ಸಿನಿಮಾದಲ್ಲಿ ಸಮಂತಾ ರುತ್‌ಪ್ರಭು ಯಶೋದ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸದ್ಯ ಶೂಟಿಂಗ್‌ ಜತೆಗೆ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ತೊಡಗಿದೆ ಈ ಸಿನಿಮಾ.

Written by - YASHODHA POOJARI | Edited by - Manjunath N | Last Updated : May 5, 2022, 05:00 PM IST
  • ಅಂದಹಾಗೆ, ಈ ಸಿನಿಮಾ ಕೇವಲ ತೆಲುಗಿನಲ್ಲಿ ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ.
  • ಬಿಡುಗಡೆಗೆ ದಿನಾಂಕವೂ ನಿಗದಿಯಾಗಿದ್ದು, ಆಗಸ್ಟ್‌ ೧೨ಕ್ಕೆ ತೆರೆಗೆ ಬರಲಿದೆ.
ಹೇಗಿರಲಿದೆ ಗೊತ್ತಾ ಸಮಂತಾರ ʼಯಶೋದ ʼಚಿತ್ರ..! ? title=

ಬೆಂಗಳೂರು: ಶ್ರೀದೇವಿ ಮೂವಿಸ್‌ ಬ್ಯಾನರ್‌ನಲ್ಲಿ ಸಿದ್ಧವಾಗಿರುವ ಯಶೋದ ಸಿನಿಮಾ ಇದೀಗ ಸಣ್ಣ ವಿಡಿಯೋ ತುಣುಕನ್ನು ಹೊರ ತಂದಿದೆ. ನಾಯಕಿ ಪ್ರಧಾನ ಈ ಸಿನಿಮಾದಲ್ಲಿ ಸಮಂತಾ ರುತ್‌ಪ್ರಭು ಯಶೋದ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸದ್ಯ ಶೂಟಿಂಗ್‌ ಜತೆಗೆ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ತೊಡಗಿದೆ ಈ ಸಿನಿಮಾ.

ಶ್ರೀದೇವಿ ಪ್ರೊಡಕ್ಷನ್‌ನ ೧೪ನೇ ಸಿನಿಮಾ ಇದಾಗಿದ್ದು, ಹರಿ ಮತ್ತು ಹರೀಶ್‌ ಈ ಚಿತ್ರಕ್ಕೆ ನಿರ್ದೇಶನ ಮಾಡಿದರೆ, ಶಿವಲೆಂಕಾ ಕೃಷ್ಣ ಪ್ರಸಾದ್‌ ನಿರ್ಮಿಸಿದ್ದಾರೆ. ಸಿನಿಮಾ ಬಗ್ಗೆ ಹೇಳಿಕೊಳ್ಳುವ ನಿರ್ಮಾಪಕರು, ಫ್ಯಾಮಿಲಿ ಮ್ಯಾನ್‌ ೨ ವೆಬ್‌ ಸಿರೀಸ್‌ ಮೂಲಕ ಪ್ಯಾನ್‌ ಇಂಡಿಯಾ ಜನರನ್ನು ಸಮಂತಾ ತಲುಪಿದ್ದಾರೆ.ಆ ಒಂದು ಕಾರಣಕ್ಕೆ ಎಲ್ಲಿಯೂ ಕಾಂಪ್ರಮೈಸ್‌ ಆಗದೇ, ಎಲ್ಲೆಡೆ ಸಲ್ಲುವ ಸಿನಿಮಾ ಮಾಡಿದ್ದೇವೆ. ಈ ಸಿನಿಮಾದಲ್ಲಿನ ಸಮಂತಾ ಅವರ ಡೆಡಿಕೇಷನ್‌ ತೆರೆ ಮೇಲೆ ಕಾಣಿಸಲಿದೆ. ಅವರ ನಟನೆಯನ್ನು ನೋಡುವುದೇ ಚಂದ ಎನ್ನುತ್ತಾರೆ.

ಇದನ್ನೂ ಓದಿ: 'ಪ್ರಶಾಂತ್ ನೀಲ್ ಭಾರತೀಯ ಚಿತ್ರರಂಗದ ವೀರಪ್ಪನ್ ಇದ್ದ ಹಾಗೆ'

ಚಿತ್ರೀಕರಣದ ಬಗ್ಗೆಯೂ ಮಾಹಿತಿ ನೀಡಿದ ಅವರು, ಚಿತ್ರದ ಕ್ಲೈಮ್ಯಾಕ್ಸ್‌ ಹಂತವನ್ನು ಕೊಡೈಕೆನಾಲ್‌ನಲ್ಲಿ ಏಪ್ರಿಲ್‌ನಲ್ಲಿ ಚಿತ್ರೀಕರಿಸಿದ್ದೇವೆ. ಶೇ. ೮೦ ಭಾಗದ ಶೂಟಿಂಗ್‌ ಮುಕ್ತಾಯವಾಗಿದ್ದು, ಹೈದರಾಬಾದ್‌ನಲ್ಲಿ ಕೊನೇ ಶೆಡ್ಯೂಲ್‌ ನಡೆಯುತ್ತಿದೆ. ಜೂನ್‌ ೧ಕ್ಕೆ ಶೂಟ್‌ ಮುಗಿಸಲಿದ್ದೇವೆ. ಇಡೀ ಸಿನಿಮಾದಲ್ಲಿ ಗ್ರಾಫಿಕ್ಸ್‌ ಕೆಲಸ ಪ್ರಮುಖ ಪಾತ್ರ ವಹಿಸಲಿದೆ. ನಿರ್ದೇಶಕರ ಕೆಲಸವೂ ಇಂಪ್ರೆಸ್ಸಿವ್‌ ಆಗಿದೆ ಎಂದರು.

ಇದನ್ನೂ ಓದಿ: KGF 2 behind the scenes: ಇಲ್ಲಿದೆ ನೋಡಿ ಕೆಜಿಎಫ್‌ 2 ಮೇಕಿಂಗ್‌ ವಿಡಿಯೋ

ಅಂದಹಾಗೆ, ಈ ಸಿನಿಮಾ ಕೇವಲ ತೆಲುಗಿನಲ್ಲಿ ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ. ಬಿಡುಗಡೆಗೆ ದಿನಾಂಕವೂ ನಿಗದಿಯಾಗಿದ್ದು, ಆಗಸ್ಟ್‌ ೧೨ಕ್ಕೆ ತೆರೆಗೆ ಬರಲಿದೆ. ಚಿತ್ರದಲ್ಲಿ ಸ್ಟಾರ್‌ ನಟರ ದಂಡೇ ಇದೆ. ವರಲಕ್ಷ್ಮೀ ಶರತ್‌ಕುಮಾರ್‌, ಉನ್ನಿ ಮುಕುಂದನ್‌, ರಾವ್‌ ರಮೇಶ್‌, ಮುರಳಿ ಶರ್ಮಾ, ಸಂಪತ್‌ ರಾಜ್, ಶತ್ರು, ಮಧುರಿಮಾ, ಕಲ್ಪಿಕಾ ಗಣೇಶ್‌, ದಿವ್ಯಾ ಶ್ರೀಪಾದ್‌, ಪ್ರಿಯಾಂಕಾ ಶರ್ಮಾ ಸೇರಿದಂತೆ ಹಲವರಿದ್ದಾರೆ.

ತಾಂತ್ರಿಕ ವರ್ಗದಲ್ಲಿ ಮಣಿಶರ್ಮಾ ಸಂಗೀತ, ಪಲ್ಗುಮ್‌ ಚಿನ್ನರಾಯನ, ಡಾ. ಚಲ್ಲ ಭಾಗ್ಯಲಕ್ಷ್ಮಿ ಸಂಭಾಷಣೆ, ಚಂದ್ರಬೋಸ್‌ ರಾಮಜೋಗಯ್ಯ ಶಾಸ್ತ್ರಿ ಸಾಹಿತ್ಯ, ಎಂ.ಸುಕುಮಾರ್‌ ಛಾಯಾಗ್ರಹಣ ಚಿತ್ರಕ್ಕಿದೆ. ಮಾರ್ತಾಂಡ್‌ ವೆಂಕಟೇಶ್‌ ಸಂಕಲನ ಮಾಡುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 
 

Trending News