ಬೆಂಗಳೂರು : ಮಂಡ್ಯದಲ್ಲಿ ಬಿಜೆಪಿ ಪಕ್ಷದ ಸಮಾವೇಶ ನಡೆಸುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿ ಹುಟ್ಟುಹಬ್ಬದ ಶುಭಾಶಯ ಕೋರಿದ ನಂತರ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ರಾಜ್ಯದ ಎಲ್ಲಾ ಭಾಗದಿಂದಲೂ ಬಹಳ ಜನ ಬಿಜೆಪಿಗೆ ಬರುತ್ತಿದ್ದಾರೆ. ವಿಶೇಷವಾಗಿ ಕೋಲಾರ, ಮಂಡ್ಯದಿಂದ ಹೆಚ್ವು ಜನ ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ. ಬ್ಯಾಚ್ ವಾರು ಸೇರ್ಪಡೆ ಮಾಡುವ ಕೆಲಸವಾಗುತ್ತಿದೆ. ಬಹಳ ದೊಡ್ಡ ಪ್ರಮಾಣದಲ್ಲಿ ದಕ್ಷಿಣ ಕರ್ನಾಟಕದಲ್ಲಿ ಸಾರ್ವಜನಿಕರು ಹಾಗೂ ವಿಶೇಷವಾಗಿ ಯುವಕರು ಪಕ್ಷಕ್ಕೆ ಬರಲು ಒಲವು ತೋರುತ್ತಿದ್ದಾರೆ ಎಂದು ಸಿಎಂ ಈ ಸಂದರ್ಭದಲ್ಲಿ ಹೇಳಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಹೊಸ ಯುವ ನಾಯಕತ್ವ ಹೊರಹೊಮ್ಮುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬಿಜೆಪಿಯ ಪರವಾಗಿ ಮಂಡ್ಯದಲ್ಲಿ ಬಹಳ ದೊಡ್ಡ ಶಕ್ತಿಯ ಅಲೆ ಕಾಣುತ್ತಿದೆ ಎಂದು ಅವರು ಇದೆ ವೇಳೆ ಹೇಳಿದ್ದಾರೆ.
ಇದನ್ನೂ ಓದಿ : ವಾತಾವರಣದಲ್ಲಿ ಏರುಪೇರು ಪ್ರಭಾವ.. ಇಂದಿನ ತರಕಾರಿ ಬೆಲೆಯಲ್ಲಿ ಹೀಗಿದೆ ಬದಲಾವಣೆ
ಎಸ್.ಟಿ. ಜಯರಾಂ ಮಾತ್ರ ಅಲ್ಲದೆ, ಯಾರು ನಮ್ಮ ಪಕ್ಷದ ಬಗ್ಗೆ ಪಕ್ಷದ ವಿಚಾರಗಳ ಬಗ್ಗೆ ಒಲವು ತೋರಿಸಿದ್ದಾರೆಯೋ ಅವರೆಲ್ಲರ ಬಳಿ ಮಾತನಾಡಲಾಗುವುದು ಎಂಡು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
90ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಆರೋಗ್ಯವಂತರಾಗಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ಮುಖ್ಯಮಂತ್ರಿಗಳು ಶುಭ ಹಾರೈಸಿದ್ದಾರೆ. ಅವರ ಮಾರ್ಗದರ್ಶನ ಸರ್ಕಾರ ಮತ್ತು ರಾಜ್ಯದ ಜನತೆಗೆ ದೊರೆಯುವಂತಾಗಲಿ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
bರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಸದ್ಯದಲ್ಲೇ ಹೋಂ ವರ್ಕ್ಗೆ ಬೀಳಲಿದೆ ಬ್ರೇಕ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.