Tata Steel Plant Blast: ಟಾಟಾ ಸ್ಟೀಲ್ ಪ್ಲಾಂಟ್ ನಲ್ಲಿ ಭಾರೀ ಸ್ಫೋಟ, ಕಾರ್ಮಿಕರಿಗೆ ಗಾಯ

ಜಾರ್ಖಂಡ್‌ನ ಜೆಮ್‌ಶೆಡ್‌ಪುರದಲ್ಲಿರುವ ಟಾಟಾ ಸ್ಟೀಲ್ ಪ್ಲಾಂಟ್‌ನಲ್ಲಿ ಸ್ಫೋಟ ಸಂಭವಿಸಿದ್ದು,  ಸ್ಥಾವರದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

Written by - Ranjitha R K | Last Updated : May 7, 2022, 03:03 PM IST
  • ಜೆಮ್‌ಶೆಡ್‌ಪುರದಲ್ಲಿರುವ ಟಾಟಾ ಸ್ಟೀಲ್ ಪ್ಲಾಂಟ್‌ನಲ್ಲಿ ಸ್ಫೋಟ
  • ಸ್ಪೋಟದ ತೀವ್ರತೆಗೆ ಕಾಣಿಸಿಕೊಂಡ ಬೆಂಕಿ
  • ಘಟನೆಯಲ್ಲಿ ಮೂವರಿಗೆ ಗಾಯ
Tata Steel Plant Blast: ಟಾಟಾ ಸ್ಟೀಲ್ ಪ್ಲಾಂಟ್ ನಲ್ಲಿ ಭಾರೀ  ಸ್ಫೋಟ, ಕಾರ್ಮಿಕರಿಗೆ ಗಾಯ  title=
: ಟಾಟಾ ಸ್ಟೀಲ್ ಪ್ಲಾಂಟ್ ನಲ್ಲಿ ಭಾರೀ ಸ್ಫೋಟ, (representation photo)

ನವದೆಹಲಿ : ಜಾರ್ಖಂಡ್‌ನ ಜಮ್‌ಶೆಡ್‌ಪುರದಲ್ಲಿರುವ ಟಾಟಾ ಸ್ಟೀಲ್ ಪ್ಲಾಂಟ್‌ನಲ್ಲಿ ಸ್ಫೋಟ ಸಂಭವಿಸಿದೆ. ಸ್ಪೋಟದ ಕಾರಣದಿಂದಾಗಿ ಸ್ಥಾವರದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಮೂವರು ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರ ಬಗ್ಗೆ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಮಾಹಿತಿ ಪಡೆದಿದ್ದಾರೆ. 

ಜೆಮ್‌ಶೆಡ್‌ಪುರ ಸ್ಪೋಟದ ಬಗ್ಗೆ ಜಾರ್ಖಂಡ್‌ ಸಿಎಂ ಹೇಮಂತ್ ಸೊರೆನ್, ಟ್ವೀಟ್ ಮಾಡಿದ್ದಾರೆ. ಜೆಮ್‌ಶೆಡ್‌ಪುರದ ಟಾಟಾ ಸ್ಟೀಲ್ ಪ್ಲಾಂಟ್‌ನಲ್ಲಿ ಸ್ಫೋಟ ಸಂಭವಿಸಿದೆ. ಜಿಲ್ಲಾಡಳಿತವು ಟಾಟಾ ಸ್ಟೀಲ್ ಆಡಳಿತದೊಂದಿಗೆ ಈ ಬಗ್ಗೆ ಮಾತುಕತೆ ನಡೆಸುತ್ತಿದೆ.  ಗಾಯಾಳುಗಳ ತ್ವರಿತ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎದ್ನು ತಿಳಿಸಿದ್ದಾರೆ. 

ಇದನ್ನೂ ಓದಿ : ಇನ್ನು ರಾತ್ರಿ ಮೂರು ಗಂಟೆಯವರೆಗೆ ಲಭ್ಯವಿರಲಿದೆ ಮದ್ಯ , ಸರ್ಕಾರದಿಂದ ಬಹು ದೊಡ್ಡ ನಿರ್ಧಾರ

ಅಪಘಾತದಲ್ಲಿ ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗುತ್ತಿದೆ. 11 ಸದಸ್ಯರ ವೈದ್ಯರ ತಂಡ ಗಾಯಾಳುಗಳ ಚಿಕಿತ್ಸೆಯಲ್ಲಿ ತೊಡಗಿದೆ. ಅಪಘಾತ ಸಂಭವಿಸಿದ ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

 

ಟಾಟಾ ಸ್ಟೀಲ್ ಪ್ಲಾಂಟ್‌ನಲ್ಲಿ ಸಂಭವಿಸಿದ ಸ್ಫೋಟದಿಂದ ಉಂಟಾದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಬೀದುಬಿಟ್ಟಿವೆ. ಬೆಂಕಿ ನಂದಿಸುವ ಕಾರ್ಯ ಮುಂದುವರಿದಿದೆ. ಹಲವು ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ.

ಇದನ್ನೂ ಓದಿ : ವಿಜ್ಞಾನ ಸುಳ್ಳು ಹೇಳುವುದಿಲ್ಲ, ಪ್ರಧಾನಿ ಮೋದಿ ಸುಳ್ಳು ಹೇಳುತ್ತಾರೆ: ರಾಹುಲ್ ಗಾಂಧಿ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News