ಬಿಬಿಎಂಪಿ ಆಯುಕ್ತರಿಂದ ವಿವಿಧ ಕಾಮಗಾರಿ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

BBMP Commissioner: ಬಿಬಿಎಂಪಿ ನೂತನ ಆಯುಕ್ತ ತುಷಾರ್ ಗಿರಿನಾಥ್ ಭಾನವಾರವಿದ್ರೂ ರಜೆ ತೆಗೆದುಕೊಳ್ಳದೆ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ.

Written by - Manjunath Hosahalli | Edited by - Chetana Devarmani | Last Updated : May 8, 2022, 06:13 PM IST
  • ಬಿಬಿಎಂಪಿ ಆಯುಕ್ತರಿಂದ ವಿವಿಧ ಕಾಮಗಾರಿ ಪರಿಶೀಲನೆ
  • ಬಿಬಿಎಂಪಿ ನೂತನ ಆಯುಕ್ತ ತುಷಾರ್ ಗಿರಿನಾಥ್
  • ಸಂಪಿಗೆ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ
ಬಿಬಿಎಂಪಿ ಆಯುಕ್ತರಿಂದ ವಿವಿಧ ಕಾಮಗಾರಿ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ  title=
ಬಿಬಿಎಂಪಿ

ಬೆಂಗಳೂರು: ಬಿಬಿಎಂಪಿ ನೂತನ ಆಯುಕ್ತ ತುಷಾರ್ ಗಿರಿನಾಥ್ ಭಾನವಾರವಿದ್ರೂ ರಜೆ ತೆಗೆದುಕೊಳ್ಳದೆ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿ ಪರಿಶೀಲನೆ ನಡೆಸಿದ್ದಾರೆ. ಯಲಹಂಕ ಪೊಲೀಸ್ ಸ್ಟೇಷನ್ ಜಂಕ್ಷನ್ ನಿಂದ ಯಲಹಂಕ‌ ನ್ಯೂ ಟೌನ್ ಜಲಮಂಡಳಿಯ ಜಂಕ್ಷನ್ ವರಗೆ 175 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 1.8 ಕಿ.ಮೀ ಉದ್ದದ ಇಂಟಿಗ್ರೇಟೆಡ್ ಎಲಿವೇಟೆಡ್ ಕಾರಿಡಾರ್ ಪ್ರಗತಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜೊತೆಗೆ ದೊಡ್ಡಬಳ್ಳಾಪುರ ಮುಖ್ಯ ರಸ್ತೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಪೊಲೀಸ್ ಸ್ಟೇಷನ್ ವೃತ್ತ, ಎನ್.ಇ.ಎಸ್ ಜಂಕ್ಷನ್, ಶೇಷಾದ್ರಿಪುರಂ ಜಂಕ್ಷನ್ ಹಾಗೂ BWSSB ಜಂಕ್ಷನ್ ಬರಲಿದ್ದು, ಇಂಟಿಗ್ರೇಟೆಡ್ ಎಲಿವೇಟೆಡ್ ಕಾರಿಡಾರ್ ನಿಂದ ಈ ಭಾಗದ ಬಹುತೇಕ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಈ ಪೈಕಿ ಕಾಮಗಾರಿಯನ್ನು ಹಂತ-ಹಂತವಾಗಿ ಕೈಗೆತ್ತಿಕೊಂಡಿದ್ದು, ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಕಾಮಗಾರಿಯನ್ನು ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಎರಡು ಬಾಟಲ್ ಎಣ್ಣೆ ಹೊಡೆದ್ರೂ ನಶೆ ಏರ್ತಿಲ್ಲ.. ಗೃಹ ಸಚಿವರಿಗೆ ಕುಡುಕನ ಪತ್ರ

ಸಂಪಿಗೆ ರಸ್ತೆ ವೈಟ್ ಟಾಪಿಂಗ್ ಕಾಮಗಾರಿ ಶೀಘ್ರದಲ್ಲೇ ಪೂರ್ಣ:

ಆಮೆಗತಿಯಲ್ಲಿ ಸಾಗುತ್ತಿರುವ ಮಂತ್ರಿ ಮಾಲ್ ಬಳಿಯಿಂದ ಯಶವಂತಪುರ ಜಂಕ್ಷನ್ ವರೆಗೆ ಕೈಗೆತ್ತಿಕೊಂಡಿರುವ ವೈಟ್ ಟಾಂಪಿಂಗ್ ಕಾಮಗಾರಿಯನ್ನು ಪರಿಶೀಲನೆ ನಡೆಸಿ, ಸದರಿ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದ್ದು, ಪಾದಚಾರಿ ಮಾರ್ಗ, ಜಲಮಂಡಳಿಯ ಕುಡಿಯುವ ನೀರು ಹಾಗೂ ಒಳಚರಂಡಿ ಕಾಮಗಾರಿ,  ಬೆಸ್ಕಾಂ, ಓ.ಎಫ್.ಸಿ ಕೇಬಲ್ ಅಳವಡಿಕೆಗೆ ಡಕ್ಟ್ ಅಳವಡಿಕೆ ಸೇರಿದಂತೆ ಇನ್ನಿತರೆ ಮೂಲ ಸೌಲಭ್ಯಗಳ ಅಳವಡಿಕೆಯ ಸಣ್ಣ-ಪುಟ್ಟ ಕಾಮಗಾರಿಗಳಿಗೆ ವೇಗನೀಡಿ ತ್ವರಿತವಾಗಿ ಕೆಲಸ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

BBMP Commissioner inspected Various Works in Bangalore

ಸ್ಯಾಂಕಿ ಬಂಡ್ ರಸ್ತೆ ಪರಿಶೀಲನೆ:

ಭಾಷ್ಯಂ ಸರ್ಕಲ್ ನಿಂದ ಮಲ್ಲೇಶ್ವರಂ ನ 18ನೇ ಕ್ರಾಸ್ ನವರೆಗಿನ ಸ್ಯಾಂಕಿ ಬಂಡ್ ರಸ್ತೆ 900 ಮೀಟರ್ ಉದ್ದದ ರಸ್ತೆಯನ್ನು 60 ಕೋಟಿ ರೂ. ವೆಚ್ಚದಲ್ಲಿ 15 ಮೀಟರ್ ರಸ್ತೆ ಅಗಲೀಕರಣ ಯೋಜನೆ ಕೈಗೆತ್ತಿಕೊಳ್ಳಲಾಗುತ್ತಿದೆ. ಅದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರದಿಂದ ಅನುಮೋದನೆ ಸಿಕ್ಕಿದ್ದು, ಕೆಲಸ ಪ್ರಾರಂಭಿಸಲು ಟೆಂಡರ್ ಕರೆಯುವ ಪ್ರಕ್ರಿಯೆ ನಡೆಯುತ್ತಿದೆ. ಕೂಡಲೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕೆಲಸ ಪ್ರಾರಂಭಿಸಲು ಅಧಿಕಾರಿಗಳಿಗೆ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು. 

ಇದನ್ನೂ ಓದಿ: Mother's Day special: ಪ್ರತಿಯೊಬ್ಬ ತಾಯಿಯೂ ಸೇವಿಸಬೇಕಾದ ಆರೋಗ್ಯಕರ ಆಹಾರ

ಕೋರಮಂಗಲ (K-10) ಜಲಮಾರ್ಗ ಯೋಜನೆ ಪರಿಶೀಲನೆ:

ಕೋರಮಂಗಲ ರಾಜಕಾಲುವೆ(ಕೆ-100) ಕೆ.ಆರ್.ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಯವರೆಗೆ ಕೈಗೆತ್ತಿಕೊಂಡಿರುವ ಜಲಮಾರ್ಗ ಯೋಜನೆಯ ಕಾಮಗಾರಿಯ ಪ್ರಗತಿಯನ್ನು ಪರಿಶೀಲನೆ ನಡೆಸಿ, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕೆಂದು ಸೂಚಿಸಲಾಗಿದೆ. ಮುಖ್ಯಮಂತ್ರಿ ನವನಗರೋತ್ಥಾನ ಯೋಜನೆಯಡಿ 175 ಕೋಟಿ ರೂ. ವೆಚ್ಚದಲ್ಲಿ ಕೋರಮಂಗಲ ರಾಜಕಾಲುವೆ(ಕೆ-100) ಕೆ.ಆರ್.ಮಾರುಕಟ್ಟೆಯಿಂದ ಬೆಳ್ಳಂದೂರು ಕೆರೆಯವರೆಗಿನ 9.6 ಕಿ.ಮೀ ಉದ್ದದ ರಾಜಕಾಲುವೆಯಲ್ಲಿ ಜಲಮಾರ್ಗ ಯೋಜನೆ ಕಾಮಗಾರಿ ಕಳೆದ ಎರಡು ವರ್ಗಳಿಂದ ಪ್ರಗತಿಯಲ್ಲಿದೆ. ರಾಜಕಾಲುವೆ ಪಕ್ಕದಲ್ಲಿರುವ ಮನೆಗಳಿಂದ ಸೀವೇಜ್ ನೀರನ್ನು ನೇರವಾಗಿ ರಾಜಕಾಲುವೆಗೆ ಹರಿದು ಬಿಡುತ್ತಿದ್ದನ್ನು ತಡೆಯಲಾಗಿದ್ದು, ಆದಷ್ಟು ಬೇಗ ಈ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಮಾಹಿತಿ  ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News