ಹದಿನೈದನೇ ಆವೃತ್ತಿಯ ಐಪಿಎಲ್ ಟೂರ್ನಿಯು ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಇಂದು ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಹಣಾಹಣಿ ನಡೆಯಲಿದೆ. ಮಹಾರಾಷ್ಟ್ರದ ಡಾ.ಡಿ ವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳು ಹೋರಾಟ ನಡೆಸಲಿವೆ. ಇನ್ನು ಪ್ಲೇ ಆಫ್‌ಗೆ ಪ್ರವೇಶ ಪಡೆಯಲು ಕೊಲ್ಕತ್ತಾ ತಂಡವು ಈ ಪಂದ್ಯದಲ್ಲಿ ಗೆಲ್ಲಬೇಕಾದ ಅನಿವಾರ್ಯತೆ ಇದೆ.
ಇದನ್ನು ಓದಿ: ಗ್ರಾಹಕರೇ ಗಮನಿಸಿ... ಇಲ್ಲಿದೆ ಇಂದಿನ ತರಕಾರಿ ಬೆಲೆ
ಶ್ರೇಯಸ್ ಅಯ್ಯರ್ ಮುಂದಾಳತ್ವದಲ್ಲಿ ಮುನ್ನಡೆಯುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಈವರೆಗೆ ಹನ್ನೊಂದು ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಕೇವಲ ನಾಲ್ಕು ಪಂದ್ಯಗಳಲ್ಲಿ ಗೆದ್ದಿದೆ. ಉಳಿದ ಏಳು ಪಂದ್ಯಗಳಲ್ಲಿ ಸೋಲನ್ನನುಭವಿಸಿದ್ದು, ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಈ ಬಾರಿಯ ಟೂರ್ನಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಇಂದಿನ ಪಂದ್ಯದಲ್ಲಿ ಯಾವ ರೀತಿ ಪ್ರದರ್ಶನ ನೀಡಿಲಿದೆ ಎಂಬುದನ್ನು ಕಾದುನೋಡಬೇಕಿದೆ.
ಇನ್ನೊಂದೆಡೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ಸಾಗುತ್ತಿರುವ ಮುಂಬೈ ಇಂಡಿಯನ್ಸ್ ತಂಡವು ಕಳಪೆ ಪ್ರದರ್ಶನವನ್ನು ನೀಡಿದೆ. ಆಡಿರುವ ಹತ್ತು ಪಂದ್ಯಗಳಲ್ಲಿ ಕೇವಲ ಎರಡು ಆಟ ಗೆದ್ದು, ಉಳಿದ ಎಂಟರಲ್ಲಿ ಸೋಲು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದೆ. ಇನ್ನೊಂದೆಡೆ ಪ್ಲೇ ಆಫ್‌ಗೆ ಪ್ರವೇಶಿಸುವ ಅವಕಾಶವನ್ನು ಸಹ ಕಳೆದುಕೊಂಡಿದೆ.
ಇದನ್ನು ಓದಿ: ದಾಖಲೆ ಮಟ್ಟದಲ್ಲಿ ಏರಿಕೆಯಾದ ಕಚ್ಚಾ ತೈಲ ಬೆಲೆ, ಮತ್ತೆ ಹೆಚ್ಚುತ್ತದೆಯೇ ಪೆಟ್ರೋಲ್-ಡೀಸೆಲ್ ದರ ?
ಸಂಭಾವ್ಯ ಆಟಗಾರರ ಪಟ್ಟಿ:
ಮುಂಬೈ ಇಂಡಿಯನ್ಸ್:
ಇಶಾನ್ ಕಿಶನ್ (ವಿ.ಕೀ), ರೋಹಿತ್ ಶರ್ಮಾ (ಕ್ಯಾ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಟಿಮ್ ಡೇವಿಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಕುಮಾರ್ ಕಾರ್ತಿಕೇಯ / ಬಸಿಲ್ ಥಂಪಿ, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್
ಕೊಲ್ಕತ್ತಾ ನೈಟ್ ರೈಡರ್ಸ್:
ಆರನ್ ಫಿಂಚ್, ವೆಂಕಟೇಶ್ ಅಯ್ಯರ್/ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್(ಕ್ಯಾ), ನಿತೀಶ್ ರಾಣಾ, ಶೆಲ್ಡನ್ ಜಾಕ್ಸನ್/ಬಾಬಾ ಇಂದ್ರಜಿತ್ (ವಿ.ಕೀ), ಆಂಡ್ರೆ ರಸೆಲ್, ಅಮನ್ ಖಾನ್/ಅನುಕುಲ್ ರಾಯ್, ಸುನಿಲ್ ನರೈನ್, ಟಿಮ್ ಸೌಥಿ, ಉಮೇಶ್ ಯಾದವ್/ಹರ್ಷಿತ್ ಮಾವಿ ರಾಣಾ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.