ಬೆಂಗಳೂರು: ಸಮಯದ ಪರಿಮಿತಿ ಬಿಟ್ಟು ಕೆಲಸ ಮಾಡಿ. ಯಾವುದೇ ಕಾರಣಕ್ಕೂ ಭ್ರಷ್ಟಾಚಾರ ಸಹಿಸುವುದಿಲ್ಲ. ವಿಳಂಬ ಧೋರಣೆಯನ್ನೂ ಒಪ್ಪುವುದಿಲ್ಲವೆಂದು ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.
ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಬಡವರಿಗೆ ನೆರವಾಗಲು, ಅಭಿವೃದ್ಧಿ ಉದ್ದೇಶದಿಂದ ಯಾವುದೇ ನಿರ್ಧಾರ ತೆಗೆದುಕೊಂಡರೂ ಸರ್ಕಾರ ನಿಮ್ಮ ರಕ್ಷಣೆಗೆ ನಿಲ್ಲುತ್ತದೆ. ಬಜೆಟ್ ಕಾರ್ಯಕ್ರಮ ಅನುಷ್ಠಾನಕ್ಕೆ ಒತ್ತು ನೀಡಿ ಆಡಳಿತದಲ್ಲಿ ಸಂಪೂರ್ಣ ಬದಲಾವಣೆ ತರುವ ಸಂಕಲ್ಪ ಮಾಡಿ ಎಂದು ಸಿಎಂ ಹೇಳಿದ್ದಾರೆ.
ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ - ಶ್ರೀ @BSBommai, ಸನ್ಮಾನ್ಯ ಮುಖ್ಯಮಂತ್ರಿಗಳು.#ಜನಪರಸರ್ಕಾರ pic.twitter.com/OdDNbd9bRg
— BJP Karnataka (@BJP4Karnataka) May 9, 2022
ಇದನ್ನೂ ಓದಿ: ಸಿದ್ದರಾಮಯ್ಯ ನೀವು ನಿಂತ ನೆಲವೇ ಭದ್ರವಾಗಿಲ್ಲ, ವಿಪಕ್ಷ ಸ್ಥಾನ ಕಟ್ಟಿಟ್ಟಬುತ್ತಿ: ಬಿಜೆಪಿ
ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ
ಜಿಲ್ಲಾಧಿಕಾರಿಗಳು ಆಡಳಿತದ ನಾಯಕರು. ಪರಿಹಾರ ನೀಡುವ ಕಾರ್ಯಕ್ರಮಗಳಲ್ಲಿ ಅಕ್ರಮಗಳನ್ನು ತಡೆಯಬೇಕು. ಯಾವುದೇ ಕಾರಣಕ್ಕೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ವಿಳಂಬ ಧೋರಣೆ ಸಲ್ಲದು. ತಾಲೂಕುಗಳಿಗೆ ಹೋಗಿ ಕೆಲಸ ಮಾಡಿಸಬೇಕು. ಮುಖ್ಯಮಂತ್ರಿ ಕಚೇರಿಯಿಂದ ಬಂದ ಅರ್ಜಿಗಳು, ದೂರುಗಳನ್ನು ಕಡೆಗಣಿಸಿದರೆ ಸಹಿಸುವುದಿಲ್ಲವೆಂದು’ ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಸಮಯದ ಪರಿಮಿತಿ ಬಿಟ್ಟು ಕೆಲಸ ಮಾಡಿ
ಸಮಯದ ಮಿತಿ ಬಿಟ್ಟು ಜನರ ಸಮಸ್ಯೆಗಳಿಗೆ ಸ್ಪಂದಿಸಿ - ಶ್ರೀ @BSBommai, ಸನ್ಮಾನ್ಯ ಮುಖ್ಯಮಂತ್ರಿಗಳು.#ಜನಪರಸರ್ಕಾರ pic.twitter.com/Vk28AyET8e
— BJP Karnataka (@BJP4Karnataka) May 9, 2022
ಸರ್ಕಾರಿ ಕೆಲಸ ಎಂದು ನಿರ್ಲಕ್ಷ್ಯ ಮಾಡದೆ ಸಮಯದ ಪರಿಮಿತಿ ಬಿಟ್ಟು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಬಜೆಟ್‍ನಲ್ಲಿ ಘೋಷಣೆಯಾಗಿರುವ ಯೋಜನೆಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮದು. ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಸರ್ಕಾರಿ ಕೆಲಸ ಎನ್ನುವುದುನ್ನು ಬಿಟ್ಟು ಸರಿಯಾಗಿ ಜನರ ಕಷ್ಟಗಳನ್ನು ಕೇಳಬೇಕು. ಜಿಲ್ಲೆಗಳಲ್ಲಿ ಏನೇ ಘಟನೆ ನಡೆದರೂ ತಕ್ಷಣವೇ ಸ್ಪಂದಿಸಬೇಕು’ ಎಂದು ಸಿಎಂ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ: "ಪ್ರಮೋದ್ ಮುತಾಲಿಕ್‌ರಂಥವರನ್ನ ಮೊದಲು ಒದ್ದು ಒಳಗೆ ಹಾಕಬೇಕು"
ಜನಪರ ಆಡಳಿತವೇ ನಮ್ಮ ಸರ್ಕಾರದ ಗುರಿ
ಇನ್ನು ಸಿಎಂ ಬೊಮ್ಮಾಯಿ ಹೇಳಿಕೆ ವಿಚಾರವಾಗಿಯೇ ಟ್ವೀಟ್ ಮಾಡಿರುವ ಬಿಜೆಪಿ, ‘ಭ್ರಷ್ಟಾಚಾರ ಹಾಗೂ ವಿಳಂಬ ಧೋರಣೆಯನ್ನು ಸರ್ಕಾರ ಸಹಿಸುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟ ಸೂಚನೆ ನೀಡಿದ್ದಾರೆ. ಭ್ರಷ್ಟಾಚಾರ ರಹಿತ ಜನಪರ ಆಡಳಿತವೇ ನಮ್ಮ ಸರ್ಕಾರದ ಗುರಿ’ ಎಂದು ಹೇಳಿದೆ.
‘ಬಜೆಟ್ ಘೋಷಣೆಗಳ ತ್ವರಿತ ಅನುಷ್ಠಾನಕ್ಕೆ ಸಿಎಂ ಬೊಮ್ಮಾಯಿ ಇಲಾಖಾ ಸಭೆಗಳನ್ನು ನಡೆಸುತ್ತಿದ್ದಾರೆ. ನಮ್ಮ ಘೋಷಣೆ ಹಾಗೂ ಭರವಸೆಗಳ ಅನುಷ್ಠಾನಕ್ಕೆ ನಾವು ಬದ್ಧವಾಗಿದ್ದೇವೆ. ಜನಹಿತವೇ ಬಿಜೆಪಿ ಸರ್ಕಾರದ ಗುರಿ. ಪಿಎಸ್ಐ ನೇಮಕ ಹಗರಣದ ಬಗ್ಗೆ ಬಿಜೆಪಿ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸುತ್ತಿದೆ. ಆರೋಪಿಗಳು ಎಷ್ಟೇ ಪ್ರಭಾವಿಗಳಾದರೂ ಸಹಿಸಿಕೊಳ್ಳುವುದಿಲ್ಲ. ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲು ಸರ್ಕಾರ ಸ್ಪಷ್ಟ ಸೂಚನೆ ನೀಡಿದೆ’ ಎಂದು ಹೇಳಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.