ವಾರಂಗಲ್: ಪಟಾಕಿ ಗೋದಾಮಿನಲ್ಲಿ ಬೆಂಕಿ; 10 ಸಾವು

ತೆಲಂಗಾಣದ ವಾರಂಗಲ್ ಜಿಲ್ಲೆಯ ಪಟಾಕಿ ಗೋದಾಮಿನಲ್ಲಿ ಬುಧವಾರ ಅಗ್ನಿ ದುರಂತ ಸಂಭವಿಸಿದ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. 

Last Updated : Jul 4, 2018, 03:34 PM IST
ವಾರಂಗಲ್: ಪಟಾಕಿ ಗೋದಾಮಿನಲ್ಲಿ ಬೆಂಕಿ; 10 ಸಾವು title=
Pic : ANI

ಹೈದರಾಬಾದ್: ತೆಲಂಗಾಣದ ವಾರಂಗಲ್ ಜಿಲ್ಲೆಯ ಪಟಾಕಿ ಗೋದಾಮಿನಲ್ಲಿ ಬುಧವಾರ ಅಗ್ನಿ ದುರಂತ ಸಂಭವಿಸಿದ ಪರಿಣಾಮ ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. 

ಘಟನಾ ಸ್ಥಳಕ್ಕೆ ಕೂಡಲೇ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾರೆ. ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿದಾಗ ಸುಮಾರು 15 ಜನ ಒಳಗಿದ್ದರು ಎನ್ನಲಾಗಿದೆ.

ಅಗ್ನಿ ದುರಂತ ಸಂಭವಿಸುವ ಮೊದಲು ಸ್ಫೋಟಗೊಂಡ ಶಬ್ದ ಕೇಳಿಬಂದಿದ್ದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಏತನ್ಮಧ್ಯೆ ತೀವ್ರವಾಗಿ ಗಾಯಗೊಂಡಿದ್ದ 5 ಮಂದಿಯನ್ನು ವಾರಂಗಲ್ ನಗರದ ಎಂಜಿಎಂ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Trending News