ಮೇ 19 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 19ಕ್ಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಹೇಳಿದ್ದಾರೆ. 

Written by - Chetana Devarmani | Last Updated : May 13, 2022, 12:30 PM IST
ಮೇ 19 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ  title=
ಕರ್ನಾಟಕ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ ಬಗೆಗಿನ ಗೊಂದಲಕ್ಕ ಕೊನೆಗೂ ತೆರೆಬಿದ್ದಿದೆ. ಈ ಬಗ್ಗೆ ಸ್ವತಃ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 19ಕ್ಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್​ ಹೇಳಿದ್ದಾರೆ. 

ಇದನ್ನೂ ಓದಿ: Inspirational Story : ದೇಶಸೇವೆಗಾಗಿ IAS ಆಗ್ಬೇಕು- ಪಿಎಂ ಮೋದಿ ಭೇಟಿಯ ಕನಸು ಹೊತ್ತ ಈ ವಿಶೇಷ ಬಾಲಕಿ! 

ಕರ್ನಾಟಕದಲ್ಲಿ ಮಾರ್ಚ್​ 28ರಿಂದ ಏಪ್ರಿಲ್​ 11ರವರೆಗೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆದಿತ್ತು. ಈ ಮೊದಲು ಮೇ 15ರಂದು ಫಲಿತಾಂಶ ಪ್ರಕಟಿಸುವುದಾಗಿ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಚಿಂತನೆ ನಡೆಸಿತ್ತು. ಆದರೆ ಸಾಲುಸಾಲು ರಜೆಗಳ ಹಿನ್ನೆಲೆಯಲ್ಲಿ ಫಲಿತಾಂಶದ ದಿನಾಂಕವನ್ನು ಮುಂದೂಡಲಾಗಿದೆ. ಇದಾದ ಬಳಿಕ ರಿಸಲ್ಟ್‌ ಯಾವಾಗ ಎಂಬ ಗೊಂದಲ ಶರುವಾಯಿತು. 

ರಾಜ್ಯದ ಸುಮಾರು 234 ಮೌಲ್ಯಮಾಪನ ಕೇಂದ್ರಗಳಲ್ಲಿ 63,796 ಶಿಕ್ಷಕರು ಮೌಲ್ಯಮಾಪನದಲ್ಲಿ ಪಾಲ್ಗೊಂಡಿದ್ದರು. ರಾಜ್ಯದ 3,446 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 15,387 ಶಾಲೆಗಳ 8.73 ಲಕ್ಷ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದರು. ಇದೀಗ ಮೇ 19ಕ್ಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶಗಳನ್ನು https://sslc.karnataka.gov.in/ ಅಥವಾ https://karresults.nic.in/ ವೆಬ್​ಸೈಟ್​ಗಳಲ್ಲಿ ನೋಡಬಹುದು.

ಫಲಿತಾಂಶವನ್ನು ಪರಿಶೀಲಿಸಲು ವಿವರಗಳು:

ಕರ್ನಾಟಕ ಬೋರ್ಡ್ ಫಲಿತಾಂಶ ವೆಬ್‌ಸೈಟ್‌ karresults.nic.in 2022 SSLC ಭೇಟಿ ನೀಡಿ:

ಬಳಿಕ ವೆಬ್‌ಸೈಟ್‌ನಲ್ಲಿ Karresults nic ನ ಮುಖಪುಟ ತೆರೆಯುತ್ತದೆ

ಕರ್ನಾಟಕ SSLC ಲಿಂಕ್ ಅನ್ನು ಕ್ಲಿಕ್ ಮಾಡಿ 

ನಂತರ kseeb.kar.nic.in 2022 ಫಲಿತಾಂಶ ವಿಂಡೋ ಓಪನ್‌ ಆಗುತ್ತದೆ

ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ 

SSLC ಫಲಿತಾಂಶ 2022 ಕಾಣಿಸುತ್ತದೆ

ಇದನ್ನೂ ಓದಿ: ದಕ್ಷಿಣದ ಈ ನಟಿಗಾಗಿ ಸಿನಿಮಾ ನಿರ್ಮಿಸಲಿದ್ದಾರೆ ಎಂ.ಎಸ್‌.ಧೋನಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News