'ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಹಿಂದುಗಳೆಲ್ಲರೂ ಖಂಡಿಸಬೇಕು'-ಸಿದ್ದರಾಮಯ್ಯ

ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಸಹೃದಯ ಹಿಂದು ಬಾಂಧವರೆಲ್ಲರೂ ಖಂಡಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Written by - Zee Kannada News Desk | Last Updated : May 13, 2022, 01:42 PM IST
  • ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಅಲ್ಪಸಂಖ್ಯಾತರು ಮತ್ತು ಅವರ ಪೂಜಾಸ್ಥಳಗಳ ಮೇಲೆ ದಾಳಿ ನಡೆಯವುದಕ್ಕೆ ದೇಶ ಸಾಕ್ಷಿಯಾಗಿದೆ.
  • ಕರ್ನಾಟಕದಲ್ಲಿ ಚರ್ಚ್ ಗಳ ಮೇಲೆ ನಡೆದಿರುವ ದಾಳಿಯಿಂದ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ.
 'ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಹಿಂದುಗಳೆಲ್ಲರೂ ಖಂಡಿಸಬೇಕು'-ಸಿದ್ದರಾಮಯ್ಯ title=

ಬೆಂಗಳೂರು: ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಸಹೃದಯ ಹಿಂದು ಬಾಂಧವರೆಲ್ಲರೂ ಖಂಡಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಸ್ವಗ್ರಾಮದಲ್ಲೇ ನಡೆದಿರುವ ದಲಿತ ಮಹಿಳೆ ಮೇಲಿನ ಅತ್ಯಾಚಾರ ಆರಗ ಜ್ಞಾನೇಂದ್ರರ ಗಮನಕ್ಕೇ ಬಂದಿಲ್ಲವೇ?

ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ರಾಜ್ಯದ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇನೆ ಎಂದರು.

ಆಮಿಷ, ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲತ್ಕಾರದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲದೆ ಈ ಕಾಯ್ದೆಗೆ ಬೇರೆ ಸದುದ್ದೇಶಗಳೇನಿದೆ? ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: ಡಿಕೆಶಿ ವಿರುದ್ಧ ಸಿಡಿದೆದ್ದ ಮಾಜಿ ಸಂಸದೆ ರಮ್ಯಾ..!

ಸಹಬಾಳ್ವೆ-ಸೌಹಾರ್ದತಾ ಪರಂಪರೆಯ ಹಿಂದೂ ಧರ್ಮದ ನೈಜ ಅನುಯಾಯಿಗಳು ಯಾರೂ ಇಂತಹದ್ದೊಂದು ಅನಗತ್ಯ ಕಾಯ್ದೆಗೆ ಒತ್ತಾಯಿಸಿಲ್ಲ, ಇದನ್ನು ಒಪ್ಪುವುದೂ ಇಲ್ಲ. ಇದು ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಸಹೃದಯ ಹಿಂದು ಬಾಂಧವರೆಲ್ಲರೂ ಖಂಡಿಸಬೇಕು ಎಂದು ಅವರು ಆಗ್ರಹಿಸಿದರು.

ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಅಲ್ಪಸಂಖ್ಯಾತರು ಮತ್ತು ಅವರ ಪೂಜಾಸ್ಥಳಗಳ ಮೇಲೆ ದಾಳಿ ನಡೆಯವುದಕ್ಕೆ ದೇಶ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಚರ್ಚ್ ಗಳ ಮೇಲೆ ನಡೆದಿರುವ ದಾಳಿಯಿಂದ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ. ತರಾತುರಿಯ ಮತಾಂತರ ನಿಷೇಧ ಕಾಯ್ದೆ ಇಂತಹ ದಾಳಿಗೆ ದುಷ್ಕರ್ಮಿಗಳ ಕೈಗೆ ನೀಡುವ ಆಯುಧವೇ ಬೊಮ್ಮಾಯಿಯವರೇ? ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ: HSR ಲೇಔಟ್ ಮಳೆ ನೀರು ನುಗ್ಗುವ ಸಮಸ್ಯೆಗೆ ಈ ಬಾರಿಯಾದ್ರೂ ಸಿಗುತ್ತಾ ಪರಿಹಾರ??

ಸ್ವಇಚ್ಛೆಯಿಂದ ಮತಾಂತರಗೊಳ್ಳುವ ಹಕ್ಕು ಸಂವಿಧಾನವೇ ನೀಡಿದೆ.ಇದರ ಹೊರತಾದ ಮತಾಂತರ ತಡೆಯಲು ಕಾನೂನು ಇದೆ. ಇರುವ ಕಾನೂನನ್ನು ಜಾರಿಗೆ ತರುವ ಪೊಲೀಸ್ ಇಲಾಖೆ ಮತ್ತು ತಪ್ಪು-ಒಪ್ಪುಗಳ ನ್ಯಾಯ ಒದಗಿಸುವ ನ್ಯಾಯಾಂಗದ ಮೇಲೆ ರಾಜ್ಯ ಸರ್ಕಾರಕ್ಕೆ ನಂಬಿಕೆ ಇಲ್ಲವೇ? ಎಂದು ಸರ್ಕಾರವನ್ನು ಅವರು ಪ್ರಶ್ನಿಸಿದರು.

ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಕಾಯ್ದೆಯ ದುರುಪಯೋಗವನ್ನು ತಡೆಯಲು ಕಾಂಗ್ರೆಸ್ ಪಕ್ಷ ಖಂಡಿತ ಅವಕಾಶ ನೀಡುವುದಿಲ್ಲ. ಅನ್ಯಾಯ - ದೌರ್ಜನ್ಯಕ್ಕೊಳಗಾಗುವ ಪ್ರತಿಯೊಬ್ಬ ಅಲ್ಪಸಂಖ್ಯಾತ ಬಂಧುವಿನ ಜೊತೆ ನಮ್ಮ ಪಕ್ಷ ನಿಲ್ಲಲಿದ್ದು ಈ ಕಾಯ್ದೆಯ ವಿರುದ್ಧ ನಮ್ಮ ಪಕ್ಷ ಜನಾಂದೋಲನ ನಡೆಸಲಿದೆ ಎಂದು ಎಚ್ಚರಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News