ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜೀವಂತವಾಗಿದೆಯೇ?: ಸಿದ್ದರಾಮಯ್ಯ ಟೀಕಾಪ್ರಹಾರ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಕ್ಷಣ ಭಜರಂಗ ದಳದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Written by - Zee Kannada News Desk | Last Updated : May 16, 2022, 08:01 PM IST
  • ಮಡಿಕೇರಿಯ ಶಾಲೆಯಲ್ಲಿ ಭಜರಂಗದಳ ಯುವಜನರಿಗೆ ಶಸ್ತ್ರತರಬೇತಿ ನೀಡಿ ಕಾನೂನಿಗೆ ಬಹಿರಂಗ ಸವಾಲು ಹಾಕಿದೆ
  • ರಾಜ್ಯದಲ್ಲಿ ಗೃಹ ಮತ್ತು ಶಿಕ್ಷಣ ಖಾತೆಗೆ ಸಚಿವರಿದ್ದಾರೆಯೇ? ಸರ್ಕಾರ ಜೀವಂತವಾಗಿದೆಯೇ?
  • ಶ್ರೀರಾಮ ಸೇನೆ, ಭಜರಂಗ ದಳ & ಹಿಂದೂ ಜಾಗರಣ ವೇದಿಕೆ ಜೊತೆಗೆ ಬಿಜೆಪಿ ಸಂಬಂಧವೇನೆಂದು ಪ್ರಶ್ನಿಸಿದ ಸಿದ್ದರಾಮಯ್ಯ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜೀವಂತವಾಗಿದೆಯೇ?: ಸಿದ್ದರಾಮಯ್ಯ ಟೀಕಾಪ್ರಹಾರ title=
ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟೀಕಾಪ್ರಹಾರ

ಬೆಂಗಳೂರು: ಮಡಿಕೇರಿಯ ಶಾಲೆಯಲ್ಲಿ ಭಜರಂಗದಳ ಯುವಜನರಿಗೆ ಶಸ್ತ್ರತರಬೇತಿ ನೀಡಿ ಕಾನೂನಿಗೆ ಬಹಿರಂಗ ಸವಾಲು ಹಾಕಿದೆ. ರಾಜ್ಯದಲ್ಲಿ ಗೃಹ ಮತ್ತು ಶಿಕ್ಷಣ ಖಾತೆಗೆ ಸಚಿವರಿದ್ದಾರೆಯೇ? ಸರ್ಕಾರ ಜೀವಂತವಾಗಿದೆಯೇ? ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಾಪ್ರಹಾರ ನಡೆಸಿದೆ.

#SayNoToViolence ಹ್ಯಾಶ್ ಟ್ಯಾಗ್ ಬಳಸಿ ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಭಜರಂಗ ದಳ ನಡೆಸಿದ ಶೌರ್ಯ ಪ್ರಶಿಕ್ಷಣ ವರ್ಗದಲ್ಲಿ ಶಾಸಕರಾದ ಎಂ.ಎ.ಅಪ್ಪಚ್ಚು, ಕೆ.ಜಿ.ಬೋಪಯ್ಯ ಮತ್ತು ಸುಜ ಕುಶಾಲಪ್ಪ ಪಾಲ್ಗೊಂಡಿದ್ದಾರೆ. ಇವರ ಬದ್ಧತೆ ಸಂವಿಧಾನಕ್ಕೋ? ಭಜರಂಗ ದಳಕ್ಕೋ?’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ‘ಕೈ’ ಪಕ್ಷದ ಭಾರತ್ ಜೋಡೋಗೆ ಕಾಂಗ್ರೆಸ್ ಛೋಡೋ ಎಂದು ಬಿಜೆಪಿ ವ್ಯಂಗ್ಯ

‘ಶಸ್ತ್ರಾಸ್ತ್ರ ತರಬೇತಿ‌‌ ಸಂಪೂರ್ಣವಾಗಿ ಕಾನೂನು ವಿರೋಧಿ ಚಟುವಟಿಕೆಯಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಕ್ಷಣ ಭಜರಂಗ ದಳದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಶಾಲೆಯ ಆವರಣದಲ್ಲಿ ಇಂತಹ ಕಾನೂನು ವಿರೋಧಿ ಚಟುವಟಿಕೆಗಳಿಗೆ ಅವಕಾಶ ನೀಡಿರುವ ಶಾಲೆಯ ಆಡಳಿತ ಮಂಡಳಿ ವಿರುದ್ಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕ್ರಮ‌ಕೈಗೊಳ್ಳಬೇಕು. ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ಶ್ರೀರಾಮ ಸೇನೆ, ಭಜರಂಗ ದಳ, ಹಿಂದೂ ಜಾಗರಣ ವೇದಿಕೆ ಮೊದಲಾದ ಸಂಘಟನೆಗಳ‌ ಜೊತೆ ತನ್ನ ಸಂಬಂಧ ಏನು ಎಂಬುದನ್ನು ಬಿಜೆಪಿ ಮೊದಲು ಸ್ಪಷ್ಟಪಡಿಸಬೇಕು’ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Lakhan Jarkiholi : ರಮೇಶ್ ಜಾರಕಿಹೊಳಿ ಆದಷ್ಟು ಬೇಗನೆ ಮಂತ್ರಿ ಆಗುತ್ತಾರೆ : ಲಖನ್ ಜಾರಕಿಹೊಳಿ

‘ರಾಜ್ಯದಲ್ಲಿ ಶಾಂತಿ ಕದಡಿಸಲು, ಭೀತಿ ಹುಟ್ಟಿಸಲು, ರಾಜ್ಯದ ಬಿಜೆಪಿ ಸರ್ಕಾರ ಭಜರಂಗದಳ,‌ ಶ್ರೀರಾಮಸೇನೆಯಂತಹ ಕೋಮು‌ವಾದಿ ಸಂಘಟನೆಗಳಿಗೆ ವಿಶೇಷ ಅನುಮತಿ ನೀಡಿದೆಯೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News