ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ 8 ವರ್ಷ ಕಾರ್ಯನಿರ್ವಹಿಸಲು ಅವಕಾಶ ನೀಡಿದ್ದರ ಹಿನ್ನೆಲೆಯಲ್ಲಿ ರಾಹುಲ್ ಘಂಧಿ ಅವರಿಗೆ ಧನ್ಯವಾದ ಸಲ್ಲಿಸಲು ದೆಹಲಿಗೆ ತೆರಳಿದ್ದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು, ಈ ಸಂದರ್ಭದಲ್ಲಿ ರಾಜ್ಯ ರಾಜಕೀಯದ ಬಗ್ಗೆಯೂ ಚರ್ಚಿಸಿದ್ದಾರೆ ಎನ್ನಲಾಗಿದೆ.
ಹೀಗಾಗಿ ಈಗಾಗಲೇ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಶಾಸಕರನ್ನು ಗಮನದಲ್ಲಿಟ್ಟುಕೊಂಡು
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶೀಘ್ರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಗೊಳಿಸಲು ಕೆಪಿಸಿಸಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ನಿಗಮ ಮಂಡಳಿಯಲ್ಲಿ 20 ಸ್ಥಾನಗಳು ಶಾಸಕರು ಮತ್ತು 30 ಸ್ಥಾನಗಳು ಕಾಯಕರ್ತರಿಗೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.