ಹೊಂಬಾಳೆಯ ಮತ್ತೊಂದು ಅದ್ಧೂರಿ ಚಿತ್ರ... ಶ್ರೀಮುರುಳಿಯ ʻಬಘೀರʼಗೆ ಚಾಲನೆ..!

ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ನೋಡುವಂತಹ "ಕೆಜಿಎಫ್ ೨"ನಂತಹ ಬಿಗ್ ಹಿಟ್ ಸಿನಿಮಾ ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್‌ನ ವಿಜಯ್ ಕಿರಗಂದೂರ್  ನಿರ್ಮಾಣದ "ಬಘೀರ" ಚಿತ್ರಕ್ಕೆ ಚಾಲನೆ ದೊರಕಿದೆ.

Written by - YASHODHA POOJARI | Edited by - Chetana Devarmani | Last Updated : May 21, 2022, 02:26 PM IST
  • ಹೊಂಬಾಳೆಯ ಮತ್ತೊಂದು ಅದ್ಧೂರಿ ಚಿತ್ರ
  • ಶ್ರೀಮುರುಳಿಯ ʻಬಘೀರʼಗೆ ಚಾಲನೆ
  • ಡಾ. ಸೂರಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ
 ಹೊಂಬಾಳೆಯ ಮತ್ತೊಂದು ಅದ್ಧೂರಿ ಚಿತ್ರ... ಶ್ರೀಮುರುಳಿಯ ʻಬಘೀರʼಗೆ ಚಾಲನೆ..!  title=
ಶ್ರೀಮುರುಳಿ

ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ನೋಡುವಂತಹ "ಕೆಜಿಎಫ್ ೨"ನಂತಹ ಬಿಗ್ ಹಿಟ್ ಸಿನಿಮಾ ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್‌ನ ವಿಜಯ್ ಕಿರಗಂದೂರ್  ನಿರ್ಮಾಣದ "ಬಘೀರ" ಚಿತ್ರಕ್ಕೆ ಚಾಲನೆ ದೊರಕಿದೆ.

ಇದನ್ನೂ ಓದಿ: 

ಡಾ. ಸೂರಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಶ್ರೀಮುರಳಿ ನಾಯಕರಾಗಿ ಅಭಿನಯಿಸುತ್ತಿದ್ದಾರೆ‌. "ಬಘೀರ" ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮಿ ಲೇಔಟ್‌ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ದೃಶ್ಯಕ್ಕೆ ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಹೋದರ ಮಂಜುನಾಥ್ ಆರಂಭ ಫಲಕ ತೋರಿದರು. ನಿರ್ದೇಶಕ ಸೂರಿ ಅವರ ತಾಯಿ ಸರೋಜ ಅವರು ಕ್ಯಾಮರಾ ಚಾಲನೆ ಮಾಡಿದರು. ಮೇ ಕೊನೆಯ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ.

ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಈ ಚಿತ್ರಕ್ಕೆ ಕಥೆ ಬರೆದಿದ್ದು, ಡಾ. ಸೂರಿ ನಿರ್ದೇಶನ ಮಾಡುತ್ತಿದ್ದಾರೆ‌. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಎ.ಜೆ.ಶೆಟ್ಟಿ ಛಾಯಾಗ್ರಹಣ ಹಾಗೂ ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಈ ಹಿಂದೆ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ  ಶ್ರೀಮುರಳಿ ನಾಯಕರಾಗಿ ನಟಿಸಿದ್ದ "ಉಗ್ರಂ" ಚಿತ್ರ ಭರ್ಜರಿ ಯಶಸ್ಸು ಕಂಡಿದ್ದು, ಈ ಚಿತ್ರಕ್ಕೂ ಪ್ರಶಾಂತ್ ನೀಲ್ ಕಥೆ ಬರೆದಿದ್ದಾರೆ. ಈ ಹಿಂದೆ ಬಿಡುಗಡೆಯಾಗಿದ್ದ "ಬಘೀರ" ಚಿತ್ರದ ಫಸ್ಟ್‌ ಲುಕ್‌ಗೆ ಶ್ರೀಮುರಳಿ  ಅಭಿಮಾನಿಗಳು ಫಿದಾ ಆಗಿದ್ದರು. ಈಗ ಈ ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಕಾತರದಲ್ಲಿದ್ದಾರೆ. 

ಶ್ರೀಮುರಳಿ "ಬಘೀರ" ಚಿತ್ರದ ನಾಯಕರಾಗಿ ನಟಿಸುತ್ತಿದ್ದು, ರಂಗಾಯಣ ರಘು, ಅಚ್ಯುತಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News