ಬೆಂಗಳೂರು: ಕಳೆದ ನಾಲ್ಕು ತ್ರೈಮಾಸಿಕಕ್ಕೆ ಹೋಲಿಕೆ ಮಾಡಿದರೆ ದೇಶಕ್ಕೆ ವಿದೇಶಿ ನೇರ ಬಂಡವಾಳ ಅತಿ ಹೆಚ್ಚು ಬಂದಿದ್ದು, ಇದರಲ್ಲಿ ನಂಬರ್ ಒನ್ ಪಾಲು ಕರ್ನಾಟಕಕ್ಕೆ ಹರಿದು ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ: Viral Video: ವಿದ್ಯುತ್ ವ್ಯತ್ಯಯ ಹಿನ್ನೆಲೆ ಮೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ!
ನಾಳೆಯಿಂದ ಒಂದು ವಾರ ದಾವೂಸ್ನಲ್ಲಿ ನಡೆಯುವ ವಿಶ್ವ ಆರ್ಥಿಕ ಒಕ್ಕೂಟದ ಸಮ್ಮೇಳನದಲ್ಲಿ ಭಾಗವಹಿಸಲು ತೆರಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಸಮ್ಮೇಳನದಲ್ಲಿ ವಿಶ್ವದ ಹೆಸರಾಂತ ಪ್ರಮುಖರನ್ನು ಮತ್ತು ಕೈಗಾರಿಕೋದ್ಯಮಿಗಳನ್ನು ಭೇಟಿ ಮಾಡಲಾಗುವುದು. ಕಳೆದ ನಾಲ್ಕು ತ್ರೈಮಾಸಿಕದಕ್ಕೆ ಹೋಲಿಕೆ ಮಾಡಿದರೆ ದೇಶಕ್ಕೆ ಹೆಚ್ಚು ವಿದೇಶಿ ಬಂಡವಾಳ ಬಂದಿದೆ. ಇದರಕ್ಕೆ ರಾಜ್ಯ ಮೊದಲ ಸ್ಥಾನದಲ್ಲಿದೆ. ಹಾಗಾಗಿ ನಮಗೆ ಹೆಚ್ಚು ಉತ್ಸಾಹ ಇದೆ ಎಂದರು.
ಇನ್ನೂ ಹಲವಾರು ಜನ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ವಿಶೇಷವಾಗಿ ನವೆಂಬರ್‌ನಲ್ಲಿ ರಾಜ್ಯದಲ್ಲಿ ನಡೆಯಲಿರುವ ಗ್ಲೋಬಲ್ ಇನ್ವೆಸ್ಟ್ ಮೀಟ್‌ಗೆ ಬಹುದೊಡ್ಡ ಪ್ರತಿಕ್ರಿಯೆ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಇದನ್ನೂ ಓದಿ: ಅಬ್ಬಬ್ಬಾ...ಡ್ರಗ್ ದಂಧೆಕೋರರಿಂದ ವಶಕ್ಕೆ ಪಡೆದ ಹೆರಾಯಿನ್ ಮೌಲ್ಯ ಎಷ್ಟು ಗೊತ್ತಾ!
ಈ ಎಲ್ಲ ಪ್ರಕಿಯೆಗಳ ಮಧ್ಯೆ ದೇಶ ಮತ್ತು ವಿದೇಶಗಳ ಹಲವಾರು ಕೈಗಾರಿಕೆಗಳು ರಾಜ್ಯದಲ್ಲಿ ಸ್ಥಾಪನೆಗೊಳ್ಳಲಿವೆ ಎಂದರು. ಈ ಸಂದರ್ಭದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ, ಗಣಿ ಖಾತೆ ಸಚಿವ ಸಿ.ಸಿ.ಪಾಟೀಲ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಮುನಿರತ್ನ ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.