ರಾಹುಲ್ ಗಾಂಧಿ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ: ಸಿದ್ದರಾಮಯ್ಯ

ರಾಹುಲ್ ನಮ್ಮ ಮೇಲೆ ಸಾಕಷ್ಟು ವಿಶ್ವಾಸ ಇಟ್ಟಿದ್ದರು. ಆದರೆ ಅ ನಂಬಿಕೆ ಉಳಿಸಿಕೊಳ್ಳುವಲ್ಲಿ ನಾವು ವಿಫಲರಾಗಿದ್ದೇವೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. 

Last Updated : Jul 11, 2018, 06:42 PM IST
ರಾಹುಲ್ ಗಾಂಧಿ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ: ಸಿದ್ದರಾಮಯ್ಯ title=

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ನನ್ನ ಮತ್ತು ಪರಮೇಶ್ವರ್ ಮೇಲೆ ಅಗಾಧ ವಿಶ್ವಾಸ ಇಟ್ಟಿದ್ದರು. ಆದರೆ ಅದನ್ನು ಉಳಿಸಿಕೊಳ್ಳಲಾಗಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ಕೆಪಿಸಿಸಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸುವ ಬಗ್ಗೆ ರಾಹುಲ್ ನಮ್ಮ ಮೇಲೆ ಸಾಕಷ್ಟು ವಿಶ್ವಾಸ ಇಟ್ಟಿದ್ದರು. ಆದರೆ ಅ ನಂಬಿಕೆ ಉಳಿಸಿಕೊಳ್ಳುವಲ್ಲಿ ನಾವು ವಿಫಲರಾಗಿದ್ದೇವೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು. 

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅನ್ನ ಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದರೂ ನಿರೀಕ್ಷೆಯ ಮಟ್ಟದಲ್ಲಿ ಜನತೆ ಕಾಂಗ್ರೆಸ್ ಕೈ ಹಿಡಿಯಲಿಲ್ಲ. ರಾಹುಲ್ ಗಾಂಧಿ ಅವರು ನಂಗೆ ಎಷ್ಟೇ ಸ್ವಾತಂತ್ಯ ನೀಡಿದ್ದರೂ ಅದ್ಯಾವುದೂ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರಲಿಲ್ಲ ಎಂದು ಸಿದ್ದರಾಮಯ್ಯ ಅಳಲು ತೋಡಿಕೊಂಡರು. 

Trending News