ಬೆಂಗಳೂರು: ಭಾರೀ ಕುತೂಹಲ ಮೂಡಿಸಿದ್ದ ಪರಿಷತ್ ಫೈಟ್ನ ಬಿಜೆಪಿಯ ಟಿಕೆಟ್ ಪಟ್ಟಿಗೆ ಇಂದು ತೆರೆ ಬಿದ್ದಿದೆ. ಈ ಪಟ್ಟಿಯಲ್ಲಿ ಮುಂಚೂಣಿ ಅಭ್ಯರ್ಥಿಯಾಗಿ ಬಿ.ವೈ.ವಿಜಯೇಂದ್ರ ಹೆಸರು ಕೇಳಿ ಬಂದಿತ್ತು. ಆದ್ರೆ ಬಿಜೆಪಿ ಹೈಕಮಾಂಡ್ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಬಿ.ವೈ.ವಿಜಯೇಂದ್ರ ಹೆಸರು ಕೈಬಿಟ್ಟಿದ್ದು, ಹೈಕಮಾಂಡ್ನ ಈ ನಿರ್ಧಾರ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಇತ್ತ ಪರಿಷತ್ ಚುನಾವಣೆ ಅಭ್ಯರ್ಥಿಗಳ ಬಿಜೆಪಿಯ ಪಟ್ಟಿ ಫೈನಲ್ ಆಗ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, "ನನ್ನ ತಂಡದ ನಾಲ್ಕು ಜನರಿಗೆ ಟಿಕೆಟ್ ಸಿಕ್ಕಿದ್ದು, ಬಿ.ವೈ.ವಿಜಯೇಂದ್ರ ಅವರಿಗೆ ಬೇರೆ ಬೇರೆ ಅವಕಾಶಗಳು ಇವೆ" ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ಕೋರ್ ಕಮಿಟಿ ಸಭೆಯಲ್ಲಿ ವಿಜಯೇಂದ್ರ ಅವರ ಹೆಸರನ್ನು ಸರ್ವ ಸಮ್ಮತಿಯಿಂದ ಶಿಫಾರಸು ಮಾಡಿದ್ದೆವು. ಆದರೆ ಅವರಿಗೆ ಬೇರೆ ಬೇರೆ ಅವಕಾಶಗಳು ಇವೆ. ಎಲ್ಲ ಲೆಕ್ಕಾಚಾರಗಳನ್ನು ಹಾಕಿಯೇ ಈಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಸದ್ಯ ವಿಜಯೇಂದ್ರ ರಾಜ್ಯ ಬಿಜೆಪಿ ಉಪಾಧ್ಯಕ್ಷರು. ಅವರು ಇನ್ನಷ್ಟು ಕಾರ್ಯಗಳನ್ನು ಮಾಡಬೇಕಿದೆ. ಅವರ ಹೆಸರನ್ನು ನಮ್ಮ ಕಡೆಯಿಂದ ಘೋಷಣೆ ಮಾಡಲಾಗಿತ್ತು. ಆದರೆ ರಾಷ್ಟ್ರೀಯ ನಾಯಕರು ಎಲ್ಲ ವಿಚಾರಗಳನ್ನು ತಿಳಿದುಕೊಂಡೇ ಯೋಚನೆ ಮಾಡಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದ ಬಗ್ಗೆ ವಿವರಿಸಿದರು.
ಇದನ್ನು ಓದಿ: ಪರಿಷತ್ ಚುನಾವಣೆ: ಮೂರು ಪಕ್ಷಗಳಿಂದ ಅಭ್ಯರ್ಥಿಗಳ ಹೆಸರು ಘೋಷಣೆ
ನಾವು ರಾಜ್ಯದಿಂದ 20 ಹೆಸರುಗಳನ್ನು ಕಳಿಸಿಕೊಟ್ಟಿದ್ದೆವು. ಆದರೆ ನಾಲ್ಕು ಸ್ಥಾನ ಮಾತ್ರ ಇದ್ದಿದ್ದು. ಹಾಗಾಗಿ ನಾಲ್ಕು ಜನಕ್ಕೆ ಅವಕಾಶ ಕೊಟ್ಟಿದ್ದಾರೆ. ಒಳ್ಳೆಯ ಮಾನದಂಡದಿಂದ ನಾಲ್ವರನ್ನು ಆಯ್ಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ 20 ಜನರಿಗೂ ಅವಕಾಶ ಸಿಗಲಿದೆ ಎಂದರು.
ವಿಜಯೇಂದ್ರ ಫೇಸ್ಬುಕ್ ಪೋಸ್ಟ್:
ಇನ್ನು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪಕ್ಷ ಗುರುತಿಸಿದವರಿಗೆ ಟಿಕೆಟ್ ನೀಡಿದೆ. ನಾವು ಪಕ್ಷದ ಸಿಪಾಯಿಗಳು ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಪಕ್ಷಕ್ಕಾಗಿ ದುಡಿಯೋಣ. ಯಾರೂ ಬೆಂಬಲಿಗರು ಮತ್ತು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುವುದು, ಟೀಕೆ ಮಾಡುವುದು ಸರಿಯಾದ ಕ್ರಮವಲ್ಲ. ಪಕ್ಷ ಮುಂದಿನ ದಿನಗಳಲ್ಲಿ ತಮ್ಮನ್ನು ಗುರುತಿಸಲಿದೆ ಎಂದು ಬೆಂಬಲಿಗರಿಗೆ ತಾಳ್ಮೆಯ ಮಾತುಗಳನ್ನಾಡಿದ್ದಾರೆ. ಈ ಮೂಲಕ ತಮಗಾದ ನೋವನ್ನು ಸಮಾಧಾನಪಡಿಸಿಕೊಳ್ಳುವ ಯತ್ನ ನಡೆಸಿರುವ ವಿಜಯೇಂದ್ರ, ಕಾರ್ಯಕರ್ತರಿಗೆ ಶಾಂತಿ ಮಂತ್ರದ ಜಪ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.
ಇದನ್ನು ಓದಿ: ಮಾಜಿ ಸಚಿವರ ಒಡೆತನದ ಬಸ್ ಅಪಘಾತ: 9 ಜನರು ದಾರುಣ ಸಾವು
ಒಟ್ನಲ್ಲಿ ಈ ಬಾರಿ ರಾಜ್ಯ ರಾಜಕೀಯಕ್ಕೆ ಪರಿಷತ್ ಚುನಾವಣೆ ಮೂಲಕ ಬಿಎಸ್ವೈ ಪುತ್ರನ ಬಿಗ್ ಎಂಟ್ರಿ ಆಗಲಿದೆ ಅನ್ಕೊಂಡಿದ್ದವರಿಗೆ ಮತ್ತೆ ಶಾಕ್ ಆಗಿದೆ. ಇದರ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ಕೂಡ ಕೆಲವರ ತಲೆಗೆ ಹುಳ ಬಿಟ್ಟಂತಾಗಿದೆ. ಆದ್ರೆ ವಿಜಯೇಂದ್ರ ಮಾತ್ರ ಹೈಕಮಾಂಡ್ ನಿರ್ಧಾರಕ್ಕೆ ಮಾತ್ರ ನಾನು ಬದ್ಧ ಅಂತೇಳಿ ಕಾದು ನೋಡುವ ತಂತ್ರ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.