ನವದೆಹಲಿ: "ಹಿಂದೂ ದೇವರು ಮತ್ತು ಹಿಂದೂಗಳೆಂದರೆ ನಿಮಗೇಕೆ ಇಷ್ಟು ದ್ವೇಷ?" ಎಂದು ಇತ್ತೀಚೆಗಷ್ಟೇ ಕಾಂಗ್ರೆಸ್ ನಾಯಕತ್ವ ತೊರೆದ ಹಾರ್ದಿಕ್ ಪಟೇಲ್ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
"ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ"
"ಕಾಂಗ್ರೆಸ್ ಪಕ್ಷವು ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ತರುತ್ತದೆ. ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರುವ ಕೆಲಸ ಮಾಡುತ್ತದೆ ಎಂದು ನಾನು ಈ ಹಿಂದೆಯೂ ಹೇಳಿದ್ದೆ. ಇಂದು ಮಾಜಿ ಕೇಂದ್ರ ಸಚಿವ ಮತ್ತು ಗುಜರಾತ್ ಕಾಂಗ್ರೆಸ್ ನಾಯಕ, ರಾಮಮಂದಿರದ ಇಟ್ಟಿಗೆಗಳ ಮೇಲೆ ನಾಯಿಗಳು ಮೂತ್ರ ವಿಸರ್ಜಿಸುತ್ತವೆ ಎಂಬ ಹೇಳಿಕೆ ನೀಡಿದ್ದಾರೆ" ಎಂದು ಹಾರ್ದಿಕ್ ಪಟೇಲ್ ಟ್ವೀಟ್ ಮಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದನ್ನು ಓದಿ: Viral Image: ಬರೋಬ್ಬರಿ 11 ಲಕ್ಷ ಖರ್ಚು ಮಾಡಿದ ನಾಯಿಯಂತಾದ ವ್ಯಕ್ತಿ!
"ಹಿಂದೂಗಳ ಮೇಲೆ ಯಾಕೆ ಇಷ್ಟೊಂದು ದ್ವೇಷ"
ಕಾಂಗ್ರೆಸ್ ಯಾವಾಗಲೂ ಹಿಂದೂಗಳ ನಂಬಿಕೆಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿರುವ ಹಾರ್ದಿಕ್ ಪಟೇಲ್, "ನಾನು ಕಾಂಗ್ರೆಸ್ ಮತ್ತು ಅದರ ನಾಯಕರನ್ನು ಕೇಳಲು ಬಯಸುತ್ತೇನೆ, ಭಗವಾನ್ ಶ್ರೀರಾಮನೊಂದಿಗೆ ನಿಮಗೆ ಯಾವ ದ್ವೇಷವಿದೆ? ಹಿಂದೂಗಳನ್ನು ಇಷ್ಟು ದ್ವೇಷಿಸುವುದೇಕೆ? ಶತಮಾನಗಳ ನಂತರ ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಮಂದಿರವೂ ನಿರ್ಮಾಣವಾಗುತ್ತಿದೆ. ಆದರೂ ಕಾಂಗ್ರೆಸ್ ನಾಯಕರು ಶ್ರೀರಾಮನ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ" ಎಂದು ಕಿಡಿಕಾರಿದ್ದಾರೆ.
ಅಹಮದಾಬಾದ್ನಲ್ಲಿ ಒಬಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ನ ಮಾಜಿ ಕಾರ್ಯಾಧ್ಯಕ್ಷ ಭರತ್ ಸಿಂಗ್ ಸೋಲಂಕಿ, 'ಬಿಜೆಪಿ ಯಾವಾಗಲೂ ರಾಜಕೀಯ ಲಾಭಕ್ಕಾಗಿ ಭಗವಾನ್ ರಾಮನ ಹೆಸರನ್ನು ಬಳಸುತ್ತಿದೆ. ಲಕ್ಷಾಂತರ ಹಿಂದೂಗಳ ಭಾವನೆಗಳೊಂದಿಗೆ ಆಟವಾಡುತ್ತಿದೆ" ಎಂದಿದ್ದರು.
ಇದನ್ನು ಓದಿ: Best Mileage CNG Cars: ಹೆಚ್ಚು ಮೈಲೇಜ್ ನೀಡುವ ಸಿಎನ್ಜಿ ಕಾರುಗಳಿವು
ಈ ಹೇಳಿಕೆ ನೀಡಿದಕ್ಕೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ ಹಾರ್ದಿಕ್ ಪಟೇಲ್ ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.