ಬೆಂಗಳೂರು: 2020-21ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ, ಮೆಡಿಕಲ್ ಮತ್ತು ಇಂಜಿನೀಯರಿಂಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
2020-21ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ, ಮೆಡಿಕಲ್ ಮತ್ತು ಇಂಜಿನೀಯರಿಂಗ್, ಮೆಟ್ರಿಕ್ ನಂತರದ ಇತರೆ ಕೋರ್ಸ್ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರಿಸಲು ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವನ್ನು ಜೂನ್ 10ರ ವರೆಗೆ ವಿಸ್ತರಿಸಲಾಗಿದೆ.
ಪರಿಶಿಷ್ಟ ಜಾತಿಗೆ ಸಂಬಂಧಿಸಿದಂತೆ ಇಲಾಖಾ ವೆಬ್ಸೈಟ್ www.sw.kar.nic.in ನಲ್ಲಿ ಹಾಗೂ ಪರಿಶಿಷ್ಟ ವರ್ಗದ ಇಲಾಖೆಗೆ ಸಂಬಂಧಿಸಿದಂತೆ ವೆಬ್ಸೈಟ್ www.tw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಕೊನೆಯ ದಿನದ ನಂತರ ಬರುವ ಯಾವುದೇ ಸ್ವಯಂಕೃತ ಅರ್ಜಿ ಅಥವಾ ಕೋರಿಕೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮತ್ತು ಎಲ್ಲಾ ತಾಲ್ಲೂಕಿನ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.