ಸಂದೇಶ್ ಪ್ರೊಡಕ್ಷನ್ಸ್ ನ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸಲಿರುವ ಪ್ರಭುದೇವ

ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಮತ್ತೊಂದು ಅದ್ದೂರಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗುತ್ತಿದೆ. ಬಹುಭಾಷಾ ನಟ, ಇಂಡಿಯನ್ ಮೈಕಲ್ ಜಾಕ್ಸನ್ ಅಂತಲೇ ಪ್ರಸಿದ್ದರಾಗಿರುವ ಪ್ರಭುದೇವ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಕೃಷ್ಣ ಸೇರಿದಂತೆ ಸಾಕಷ್ಟು ಖ್ಯಾತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ.

Written by - YASHODHA POOJARI | Edited by - Manjunath N | Last Updated : May 29, 2022, 07:04 PM IST
  • ವಿನಿ ವೆಂಕಟೇಶ್ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಜುಲೈ 5 ರಿಂದ ಆರಂಭವಾಗಲಿದೆ.
  • ಅಂಡಮಾನ್, ನಿಕೋಬಾರ್, ಬೆಂಗಳೂರು, ಚೆನ್ನೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.
  • ಅಂಬರೀಶನ್ ಈ ನೂತನ ಸಂಗೀತ ನೀಡಲಿದ್ದಾರೆ. ಶೀರ್ಷಿಕೆ ಅನಾವರಣ ಸದ್ಯದಲ್ಲೇ ನೆರವೇರಲಿದೆ.
 ಸಂದೇಶ್ ಪ್ರೊಡಕ್ಷನ್ಸ್ ನ ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸಲಿರುವ ಪ್ರಭುದೇವ title=

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಮತ್ತೊಂದು ಅದ್ದೂರಿ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗುತ್ತಿದೆ. ಬಹುಭಾಷಾ ನಟ, ಇಂಡಿಯನ್ ಮೈಕಲ್ ಜಾಕ್ಸನ್ ಅಂತಲೇ ಪ್ರಸಿದ್ದರಾಗಿರುವ ಪ್ರಭುದೇವ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಕೃಷ್ಣ ಸೇರಿದಂತೆ ಸಾಕಷ್ಟು ಖ್ಯಾತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ.

ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುತ್ತಿರುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ.ಇದು ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯ 31 ನೇ ಚಿತ್ರ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬರಲಿದೆ. No description available.

ವಿನಿ ವೆಂಕಟೇಶ್ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಜುಲೈ 5 ರಿಂದ ಆರಂಭವಾಗಲಿದೆ. ಅಂಡಮಾನ್, ನಿಕೋಬಾರ್, ಬೆಂಗಳೂರು, ಚೆನ್ನೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ. ಅಂಬರೀಶನ್ ಈ ನೂತನ ಸಂಗೀತ ನೀಡಲಿದ್ದಾರೆ. ಶೀರ್ಷಿಕೆ ಅನಾವರಣ ಸದ್ಯದಲ್ಲೇ ನೆರವೇರಲಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News