ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ಯಿಂದ ಬಂಧಿತರಾಗಿರುವ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಗೆ ಕ್ಲೀನ್ ಚಿಟ್ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬುಧವಾರ ವಾಗ್ದಾಳಿ ನಡೆಸಿದ್ದಾರೆ. ಜೈನ್ ಅವರನ್ನು ಜೂನ್ 9 ರವರೆಗೆ ಇಡಿ ಕಸ್ಟಡಿಗೆ ಕಳುಹಿಸಲಾಗಿದೆ.
ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಇರಾನಿ, ಕೇಜ್ರಿವಾಲ್ ಅವರು "ದೇಶ್ ಕಾ ಗದ್ದರ್ (ದೇಶದ್ರೋಹಿ), ಜೈನ್" ಗೆ ಎಷ್ಟು ದಿನ ಪ್ರೋತ್ಸಾಹ ನೀಡುವುದನ್ನು ಮುಂದುವರಿಸುತ್ತಾರೆ? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : Ram Mandir : 'ಅಯೋಧ್ಯೆ ರಾಮ ಮಂದಿರದ ಗರ್ಭಗುಡಿಯ ಶಂಕುಸ್ಥಾಪನೆ'
ಮಂಗಳವಾರ ಕೇಜ್ರಿವಾಲ್ ಅವರು ಸುದ್ದಿಗೋಷ್ಠಿಯಲ್ಲಿ ಜೈನ್ ಅವರನ್ನು ಸಮರ್ಥಿಸಿಕೊಂಡು, ಅವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ.
ಇನ್ನು ಮುಂದುವರೆದು ಮಾತನಾಡಿದ ಅವ್ರು, "ಎಎಪಿ ಪ್ರಾಮಾಣಿಕ ದೇಶಭಕ್ತರ ಪಕ್ಷವಾಗಿದೆ; ನಾವು ಭ್ರಷ್ಟಾಚಾರವನ್ನು ದೇಶದ್ರೋಹವೆಂದು ಪರಿಗಣಿಸುತ್ತೇವೆ; ನಾವು ನಮ್ಮ ಪ್ರಾಣವನ್ನು ತ್ಯಾಗ ಮಾಡ್ತವೆ, ಆದರೆ ತೆರಿಗೆದಾರರ ಒಂದು ಪೈಸೆ ಹಣವನ್ನು ಕದಿಯುವುದಿಲ್ಲ" ಹೇಳಿದ್ದಾರೆ.
ಜೈನ್ ಅವರನ್ನು ಬಂಧಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇರಾನಿ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಕೋಲ್ಕತ್ತಾದ ಹವಾಲಾ ಆಪರೇಟರ್‌ಗಳ ಬೆಂಬಲದೊಂದಿಗೆ ನಾಲ್ಕು ಶೆಲ್ ಕಂಪನಿಗಳು ಮತ್ತು ಕುಟುಂಬ ಸದಸ್ಯರು ಮತ್ತು ಸಹಚರರ ಸಹಾಯದಿಂದ ಜೈನ್ 16.39 ಲಕ್ಷ ರೂಪಾಯಿಗಳನ್ನು ಲಾಂಡರಿಂಗ್ ಮಾಡಿದ್ದಾರೆ ಎಂಬುದನ್ನು ಕೇಜ್ರಿವಾಲ್ ನಿರಾಕರಿಸಬಹುದೇ ಎಂದು ಪ್ರಶ್ನಿಸಿದ್ದಾರೆ.
ಆದಾಯ ತೆರಿಗೆ ಇಲಾಖೆಯ ಪ್ರಧಾನ ಕಮಿಷನರ್ ಜೈನ್ ಅಕ್ರಮವಾಗಿ ಸಂಪಾದಿಸಿದ ಹಣದ ಮಾಲೀಕ ಎಂದು ಹೇಳಿರುವುದು ನಿಜವೇ? ದೆಹಲಿ ಹೈಕೋರ್ಟ್ ವಿಭಾಗೀಯ ಪೀಠವು ಆದಾಯ ತೆರಿಗೆ ಇಲಾಖೆಯ ಪ್ರಧಾನ ಆಯುಕ್ತರ ಪತ್ತೆಯನ್ನು ದೃಢಪಡಿಸಿದ್ದು ನಿಜವೇ? ಸ್ವತಃ ಅಕ್ರಮ ಹಣದ ನಿಜವಾದ ಮಾಲೀಕ ಎಂದು ಇರಾನಿ ಗುಡುಗಿದ್ದಾರೆ.
‘‘16.39 ಕೋಟಿ ಅಕ್ರಮ ಮತ್ತು ಲೆಕ್ಕಕ್ಕೆ ಸಿಗದ ಆದಾಯದಲ್ಲಿ ಶೆಲ್ ಕಂಪನಿಗಳ ಹೆಸರಿನಲ್ಲಿ ಜೈನ್ ಅವರು ಅನಧಿಕೃತ ಕಾಲೋನಿಗಳ ಸುತ್ತಮುತ್ತಲಿನ ಪ್ರದೇಶದಲ್ಲಿ 200 ಬಿಘಾ ಭೂಮಿಯನ್ನು ಖರೀದಿಸಿದ್ದಾರೆ ಎಂಬುದು ನಿಜವೇ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ-ರಾಹುಲ್ ಗಾಂಧಿಗೆ ಇಡಿಯಿಂದ ಸಮನ್ಸ್ ಜಾರಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ