ಬೆಂಗಳೂರು: 545 ಪಿಎಸ್‍ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಗೃಹಸಚಿವ ಆರಗ ಜ್ಞಾನೇಂದ್ರಗೆ 8 ಎಂಎಲ್ಎಗಳು ಪತ್ರ ಬರೆದಿದ್ದಾರೆ. ಅಕ್ರಮ ನೇಮಕಾತಿ ಪ್ರಕರಣದಿಂದ ಪರೀಕ್ಷೆ ರದ್ದುಗೊಳಿಸಿದರೆ ಬಡಮಕ್ಕಳಿಗೆ ಅನ್ಯಾಯವಾಗುತ್ತದೆ ಎಂದು ರಾಜ್ಯದ 8 ಎಂಎಲ್ಎಗಳು ಗೃಹ ಮಂತ್ರಿಗೆ ಲಿಖಿತ ಪತ್ರ ಬರೆದಿದ್ದಾರೆ.
ಶಾಸಕರಾದ ಕೆ.ಎಸ್.ಲಿಂಗೇಶ್, ಪಿ.ರಾಜೀವ್, ಸುನೀಲ್ ಬಿ ನಾಯ್ಕ್, ರಘುಪತಿ ಭಟ್, ರಾಜಕುಮಾರ ಪಾಟೀಲ್ ತೇಲ್ಕೂರ, ಲಾಲಾಜಿ ಆರ್.ಮೆಂಡನ್, ಹರೀಶ್ ಪೂಂಜ, ಜೆ.ಎನ್.ಗಣೇಶ್ ಮತ್ತು ಕೆ.ರಾಘವೇಂದ್ರ ಹಿಟ್ನಾಳ್ ಪತ್ರ ಬರೆದಿದ್ದಾರೆ. ಕೆಲವರು ಮಾಡಿದ ತಪ್ಪಿಗೆ ಸಂಪೂರ್ಣ ಪರೀಕ್ಷೆ ರದ್ದು ಮಾಡಲಾಗಿದೆ. ಸರ್ಕಾರದ ಈ ನಿರ್ಧಾರದಿಂದ ಬಡ ಮಕ್ಕಳಿಗೆ ಅನ್ಯಾಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: Textbook Revision Row: ರೋಹಿತ್ ಚಕ್ರತೀರ್ಥ ವಿರುದ್ಧ ಕಾನೂನು ಕ್ರಮಕ್ಕೆ ಸಿದ್ದರಾಮಯ್ಯ ಆಗ್ರಹ
ತಪ್ಪು ಮಾಡಿದವರು ಮತ್ತು ನ್ಯಾಯವಾಗಿ ಪರೀಕ್ಷೆ ಬರೆದವರ ಬೇರ್ಪಡಿಸುವ ಕೆಲಸ ಆಗಬೇಕು. ತಪ್ಪು ಮಾಡಿದವರಿಗೆ ಶಿಕ್ಷೆ, ಬಡಮಕ್ಕಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕೆಂದು ಪತ್ರದಲ್ಲಿ ಶಾಸಕರು ಮನವಿ ಮಾಡಿಕೊಂಡಿದ್ದಾರೆ.
ಸಿಐಡಿ ತನಿಖೆ ಪೂರ್ಣವಾಗುವ ಮೊದಲೇ ನೇಮಕಾತಿ ರದ್ದು ಮಾಡಿದ್ದು ಕಷ್ಟಕರವಾಗಿದೆ. ಪ್ರಾಮಾಣಿಕರಿಗೆ ನ್ಯಾಯ ಸಿಗಬೇಕಾಗಿದೆ. ಒಂದು ವೇಳೆ ಪರೀಕ್ಷೆ ರದ್ಧತಿಯನ್ನೇ ಮುಂದುವರೆಸಿದರೆ ಬಡಮಕ್ಕಳಿಗೆ ದೊಡ್ಡ ಅನ್ಯಾಯವಾಗುತ್ತದೆ. ಕಷ್ಟಪಟ್ಟು ಓದಿದ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಹೀಗಾಗಿ ಈ ಬಗ್ಗೆ ಗಂಭೀರವಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ಗೃಹ ಸಚಿವರಿಗೆ ಶಾಸಕರು ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಬಹುತ್ವಕ್ಕೆ ಮಾರಕವಾದ ಪಠ್ಯ ಹೇರಲು ಬಿಡುವುದಿಲ್ಲ: ಕನ್ನಡದಲ್ಲಿ ರಾಹುಲ್ ಗಾಂಧಿ ಟ್ವೀಟ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.