ವಿಜಯಪುರ : ಬಿಜೆಪಿ ಬಿಎಸ್ವೈ ಹಾಗೂ ಅವರ ಕುಟುಂಬವನ್ನು ಪಕ್ಕಕ್ಕೆ ಸರಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.
ಈ ಕುರಿತು ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಅವರಿಂದ ನನಗೆ ಯಾವುದೇ ಸರ್ಟಿಫಿಕೇಟ್ ಬೇಕಿಲ್ಲಾ ಬಿಜೆಪಿ ನನಗೆ ಕೊಟ್ಟಿರೋ ಸ್ಥಾನಮಾನಗಳು ಬೇರೆ ಯಾರಿಗೂ ಸಿಕ್ಕಿಲ್ಲ. ನಾಲ್ಕು ಬಾರಿ ಸಿಎಂ ಆಗಿದ್ದೇ, ಎಲ್ಲಾ ಅವಕಾಶ ಸಿಕ್ಕಿವೆ. ನಾನೇ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದವನು. ಆದರೂ ಅದೇ ಗೌರವವನ್ನು ಜನ ಪಕ್ಷ ಇಟ್ಟುಕೊಂಡಿದೆ.ಮುಂದಿನ ದಿನಗಳಲ್ಲಿ ಪಕ್ಷ ಬಹುಮತ ಪಡೆಯಲು ಏನೇನು ಪ್ರಯತ್ನ ಮಾಡಬೇಕೊ ಅದನ್ನು ಮಾಡೇ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ರಾಜ್ಯಸಭೆ ಚುನಾವಣೆ ಗೆಲ್ಲಲು ಕಮಲ ಪಡೆ ರಣತಂತ್ರ! ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ
ಇನ್ನು ಮುಂದುವರೆದು ಮಾತನಾಡಿದ ಅವರು, ನಿಶ್ಚಿತವಾಗಿ ಬರೋ ಚುನಾವಣೆಯಲ್ಲಿ ಸಹ 140 ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುವವರಿದ್ದೇವೆ. ಯಾವುದೋ ಭ್ರಮೆನಲ್ಲಿ ಸಿದ್ದರಾಮಯ್ಯ, ನಾವು ಅಧಿಕಾರಕ್ಕೆ ಬರುತ್ತೇವೆಂದು ಭ್ರಮೆಯಲ್ಲಿದ್ದಾರೆ. ಅದಕ್ಕೆ ನಾವು ಅವಕಾಶ ನೀಡಲ್ಲಾ, ನಾವೆಲ್ಲಾ ಒಟ್ಟಾಗಿ ಒಂದಾಗಿ ವಿಧಾನಸಭಾ ಚುನಾವಣೆಯಲ್ಲಿ 140 ಸೀಟ್ ಗಳನ್ನು ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬರೋರು ಇದ್ದೇವೆ ಎಂದು ಹೇಳಿದ್ದಾರೆ.
ಪರಿಷತ್ ಚುನಾವಣೆಗೆ ವಿಜಯೇಂದ್ರಗೆ ಟಿಕೆಟ್ ಕೊಡಿಸಲಾಗಲಿಲ್ಲಾ ಎಂದು ಮಾಜಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಆ ಪ್ರಶ್ನೆನೇ ಇಲ್ಲಾ. ಒಂದೇ ಕುಟುಂಬದವರಿಗೆ ಕೊಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ತೀರ್ಮಾನ ತೆಗೆದುಕೊಂಡಿದ್ದು ಎಲ್ಲರಿಗೂ ಗೊತ್ತಿರೋದೇ. ನಾಳೆ ವಿಧಾನಸಭಾ ಚುನಾವಣೆಗೆ ವಿಜಯೇಂದ್ರ ನಿಲ್ತಾರೆ. ಎಲ್ಲಿ ನಿಂತರೂ ಗೆದ್ದು ಬರ್ತಾರೆ ಎಂದು ಹೇಳಿದರು.
ಇನ್ನೂ ಹತ್ತು ವರ್ಷ ರಾಜಕೀಯದಲ್ಲಿರುವೆ ಎಂದುನಿನ್ನೆ ಹೇಳಿಕೆ ನೀಡಿದ್ದರ ಕುರಿತು ಸ್ಪಷ್ಟಣೆ ನೀಡಿದ ಸಿಎಂ ಬಿಎಸ್ವೈ, ರಾಜ್ಯದಲ್ಲಿ ಓಡಾಡೋನಾ ಎಂದು ನಿಶ್ಚಯ ಮಾಡಿದ್ದೇನೆ. ನಿವೆಲ್ಲರೂ ಇದ್ದು ಆರೋಗ್ಯ ಚೆನ್ನಾಗಿದ್ದರೆ ಇನ್ನೂ ಹತ್ತು ವರ್ಷ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಪಕ್ಷ ಕಟ್ಟೋ ಕೆಲಸ ಮಾಡುವೆ. ಮುಂದಿನ ವಿಧಾನಸಭಾ ಚುನಾವಣೆಯನ್ನು ಸಾಮೂಹಿಕ ನೇತೃತ್ವದಲ್ಲಿ ಹೋಗುತ್ತೇವೆ.ಎಲ್ಲರೂ ಒಟ್ಟಾಗಿ ಸೇರಿಕೊಂಡು ಕೆಲಸ ಮಾಡಿ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಬಿಎಂಟಿಸಿ ಚಾಲಕರ ಮೇಲೆ ಕರಿನೆರಳು .! ಖಾಸಗೀಕರಣದತ್ತ ಹೆಜ್ಜೆ ಹಾಕುತ್ತಿದೆಯಾ ಬಿಎಂಟಿಸಿ..?
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ