ತಮಿಳುನಾಡು ಸರ್ಕಾರ ಭಾರತ ಸರ್ಕಾರಕ್ಕೆ ಸೂಚನೆ ನೀಡುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ತಮಿಳುನಾಡು ಹಾಕಿರುವುದು ಸಮ್ಮಿಶ್ರ ಅರ್ಜಿ. ಸುಪ್ರೀಂ ಕೋರ್ಟ್ ನಮಗೆ ನೋಟೀಸು ಜಾರಿ ಮಾಡಬೇಕು. ಅದಕ್ಕೆ ನಾವು ಸೂಕ್ತ ರೀತಿಯಲ್ಲಿ ಉತ್ತರ ನೀಡುತ್ತೇವೆ ಎಂದರು.