ಮೈಸೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಆಗಬೇಕೆಂಬ ಬೇಡಿಕೆ ಸರಿಯಲ್ಲ. ಪ್ರತ್ಯೇಕ ರಾಜ್ಯ ನಿರ್ಮಾಣದಿಂದ ಎಲ್ಲಾ ಸಮಸ್ಯೆಗಳೂ ಬಗೆಹರಿಯುವುದಿಲ್ಲ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು.
ಸಿಎಂ ಕುಮಾರಸ್ವಾಮಿ ಬುದ್ಧಿ ಸ್ಥಿಮಿತದಲ್ಲಿಲ್ಲ, ಅಧಿಕಾರದ ಮದವೇರಿದೆ: ಯಡಿಯೂರಪ್ಪ ಟೀಕೆ
ಆಷಾಢ ಶುಕ್ರವಾರದ ಅಂಗವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದ ಶೋಭಾ ಕರಂದ್ಲಾಜೆ ಅವರು, ನಂತರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ಎಲ್ಲಾ ಸಮಸ್ಯೆಗಳಿಗೂ ಉತ್ತರ ಸಿಗುವುದಿಲ್ಲ. ಕೃಷ್ಣ, ಮಹದಾಯಿ ಹಾಗೂ ಕಾವೇರಿ ನದಿ ನೀರಿನ ಹಂಚಿಕೆಯಲ್ಲಿ ನ್ಯಾಯ ಸಿಗಬೇಕಾದರೆ ಇಡೀ ರಾಜ್ಯದ ಜನರು ಒಗ್ಗಟ್ಟಿನಿಂದ ಇರಬೇಕು. ಆಂಧ್ರ ಮತ್ತು ತೆಲಂಗಾಣ ಪ್ರತ್ಯೇಕ ರಾಜ್ಯಗಳಾದ ನಂತರ ಆ ರಾಜ್ಯಗಳು ದುರ್ಬಲವಾಗಿವೆ. ಆ ರಾಜ್ಯಗಳ ಸ್ಥಿತಿ ನಮಗೆ ಬರಬಾರದು. ಹಾಗಾಗಿ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟುಕೊಂಡು ಬಂದ್ ಗೆ ಕರೆ ನೀಡುವುದು ಸರಿ ಅಲ್ಲ ಎಂದು ಶೋಭಾ ಕರಂದ್ಲಾಜೆ ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರತ್ಯೇಕ ರಾಜ್ಯದ ಕೂಗಿಗೆ ನನ್ನ ಸಹಮತ ಇಲ್ಲ: ಯಡಿಯೂರಪ್ಪ
ಮುಂದುವರೆದು ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ರಚನೆಯಾಗಿ ಸಾಕಷ್ಟು ದಿನಗಳು ಕಳೆದಿದ್ದರೂ ರೈತರ ಸಾಲ ಮನ್ನಾ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿವೆ. ಮೊದಲು ರಾಜ್ಯದ ಎಲ್ಲಾ ಭಾಗದ ಜನರ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಬೇಕು. ಆದರೆ, ಅವರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ. ಹೀಗಾಗಿಯೇ ಪ್ರತ್ಯೇಕ ರಾಜ್ಯದ ಕೂಗು ಕೇಳಿಬರುತ್ತಿದೆ. ಹೀಗಾಗಿ ಮೂಡಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಈ ಬಗ್ಗೆ ಗಮನಹರಿಸಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಗಮನಹರಿಸಬೇಕು. ಎಲ್ಲ ಜಿಲ್ಲೆಗಳನ್ನೂ ಸಮಾನ ರೀತಿಯಲ್ಲಿ ಕಾಣಬೇಕು ಎಂದು ವಾಗ್ದಾಳಿ ನಡೆಸಿದರು.
ಪ್ರತ್ಯೇಕ ರಾಜ್ಯ ಹೋರಾಟದ ನೇತೃತ್ವ ನಾನೇ ವಹಿಸುತ್ತೇನೆ: ಶ್ರೀರಾಮುಲು
ಮತ್ತೊಂದೆಡೆ ಬಿಜೆಪಿ ಶಾಸಕ ಬಿ.ಶ್ರೀರಾಮುಲು ರಾಜ್ಯದ ಸಮ್ಮಿಶ್ರ ಸರಕಾರ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಮುಂದಾಗದಿದ್ದರೆ ಪ್ರತ್ಯೇಕ ರಾಜ್ಯದದ ಕೂಗಿಗೆ ತಾವು ದನಿಯಾಗಿ ಹೋರಾಟದ ನೇತೃತ್ವ ವಹಿಸುವುದಾಗಿ ಹೇಳಿದ್ದಾರೆ.