ಚಿಕಾಗೋ (ಅಮೆರಿಕ): ಬಂದೂಕು ಹಿಂಸಾಚಾರದ ವಿರುದ್ಧ ಕಠಿಣ ಕ್ರಮಗಳ ಕುರಿತು ಯುಎಸ್ ಚರ್ಚಿಸುತ್ತಿರುವಾಗಲೇ, ಚಿಕಾಗೋದಲ್ಲಿ ಶನಿವಾರ (ಸ್ಥಳೀಯ ಕಾಲಮಾನ) ನಡೆದ ಗುಂಡಿನ ದಾಳಿಯಲ್ಲಿ ಐದು ಜನ ಸಾವನ್ನಪ್ಪಿದ್ದಾರೆ. 16 ಮಂದಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: Drugs Case: ಬೆಂಗಳೂರಿನಲ್ಲಿ ಬಾಲಿವುಡ್ ಸ್ಟಾರ್ ನಟನ ಪುತ್ರ ಅರೆಸ್ಟ್!
ಸೌತ್ ಇಂಡಿಯಾನಾದ ಜನವಸತಿ ಪ್ರದೇಶದಲ್ಲಿ ನಸುಕಿನ 2:27ರ ಹೊತ್ತಿಗೆ ವ್ಯಕ್ತಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ. ಅವರನ್ನು ತಕ್ಷಣ ಚಿಕಾಗೋ ವಿಶ್ವವಿದ್ಯಾಲಯದ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಕೆಲವೇ ನಿಮಿಷಗಳಲ್ಲಿ ಅವರು ಮೃತಪಟ್ಟರು.
ಸೌತ್ ದಾಮೆನ್ ಎಂಬಲ್ಲಿ ಸಂಜೆ 3:20ಕ್ಕೆ ನಾಲ್ವರು ಒಂದೆಡೆ ನಿಂತಿದ್ದಾಗ ಕಾರೊಂದು ಅವರ ಕಡೆಗೆ ಧಾವಿಸಿ ಬಂತು. ಅದರೊಳಗಿದ್ದ ವ್ಯ್ಕತಿಯೊಬ್ಬ ಬಂದೂಕು ತೋರಿಸಿ ಗುಂಡು ಹಾರಿಸಲು ಆರಂಭಿಸಿದ್ದಾನೆ. ಈ ಪ್ರಕರಣದಲ್ಲಿ 23 ವರ್ಷದ ಪುರುಷ ಮೃತಪಟ್ಟಿದ್ದು, ಇತರ ಮೂವರು ಗಾಯಗೊಂಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ 23 ವರ್ಷದ ಅಡ್ವೊಕೇಟ್ ಕ್ರೈಸ್ಟ್ ವೈದ್ಯಕೀಯ ಕೇಂದ್ರದಲ್ಲಿ ಮೃತಪಟ್ಟರು ಎಂದು ಪೊಲೀಸರು ಹೇಳಿದ್ದಾರೆ.
ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಯಾರನ್ನೂ ಬಂಧಿಸಿಲ್ಲ ಎಂದು ಎನ್ಬಿಸಿ ವರದಿ ಮಾಡಿದೆ.
ಇದನ್ನೂ ಓದಿ: Disha Patni: ದಿಶಾ ಪಟಾನಿ ಬಿಕಿನಿ ಲುಕ್ ಕಂಡು ಜೋರಾಯ್ತು ಯುವಕರ ಎದೆಬಡಿತ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.