ಬೆಂಗಳೂರು : ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವ ಬಿಸಿ ನಾಗೇಶ್, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : 'ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ?'
ರಾಜ್ಯಾದಂತ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇದರಲ್ಲಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 6,00,519 ರೆಗ್ಯುಲರ್ ವಿದ್ಯಾರ್ಥಿಗಳಿದ್ದರೆ, 61,808 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ.
ವಿದ್ಯಾರ್ಥಿಗಳಿಗೆ ಶುಭಾಶಯಗಳು.
2nd PUC exam results will be announced tomorrow.
Best wishes to all students💐.
— B.C Nagesh (@BCNagesh_bjp) June 17, 2022
ವಿಭಾಗವಾರು ವಿದ್ಯಾರ್ಥಿಗಳ ಮಾಹಿತಿ
ವಿಜ್ಞಾನ ವಿಭಾಗ-2,10,569
ವಾಣಿಜ್ಯ ವಿಭಾಗ - 2,45,519
ಕಲಾ ವಿಭಾಗ - 2,28,167
ಇದನ್ನೂ ಓದಿ : ದೇಶದೆಲ್ಲೆಡೆ ಹಿಂಸಾಚಾರಕ್ಕೆ ಕಾರಣಾವಾಯ್ತು ಅಗ್ನಿಪಥ್: ಅಲರ್ಟ್ ಆದ್ರು ಕರ್ನಾಟಕ ರೈಲ್ವೇ ಪೊಲೀಸರು
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.