ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಕದ್ದುಮುಚ್ಚಿ ಥಿಯೇಟರ್‌ಗೆ ಬಂದು ‘ಕೆಜಿಎಫ್-2’ ನೋಡಿದ್ರಾ ನಟಿ ಸಾಯಿ ಪಲ್ಲವಿ..?
ಬಿಬಿಎಂಪಿ ಚುನಾವಣೆ ಹಾಗೂ ಜನತಾ ಮಿತ್ರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಂಜೆ ಕರೆದಿದ್ದ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು,ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ ಎಂದರು.
ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಚರ್ಚೆ ಆಗಿದೆ.ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಮ್ಮ ಕುಟುಂಬದ ಬಗ್ಗೆ ಗೌರವ ಇಟ್ಟು ಸಭೆಗೆ ಆಹ್ವಾನ ನೀಡಿದ್ದರು.17 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.ಆ ಸಭೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ.ಜೂನ್ 20ರಂದು ಮತ್ತೊಂದು ಸುತ್ತಿನ ಸಭೆ ಇದೆ.ಅಂದು ಅಭ್ಯರ್ಥಿ ಆಯ್ಕೆ ಅಂತಿಮ ಮಾಡಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ‘ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ’
ದೇವೇಗೌಡರಿಗೆ ಜೀವನದಲ್ಲಿ ಒಮ್ಮೆ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಸ್ವತಂತ್ರ ಸರ್ಕಾರ ಬರಬೇಕು ಎಂಬ ಆಸೆ ಇದೆ. ಸ್ವತಂತ್ರ ಸರ್ಕಾರದ ಬಗ್ಗೆ ಅವರ ಆಸೆ ಪೂರೈಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಆದರ ಹೊರತಾಗಿ, ರಾಷ್ಟ್ರಪತಿ ಹುದ್ದೆಯ ಬಗ್ಗೆ ದೇವೇಗೌಡರ ಒಲವು ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.